ಬಿಸಿಸಿಐನ ಒಂದು ನಿರ್ಧಾರದಿಂದ ಪಾಕ್ ಕ್ರಿಕೆಟ್ಗೆ 220 ಕೋಟಿ ರೂ. ನಷ್ಟ..!
BCCI's Decision: ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಉದ್ವಿಗ್ನತೆಯು 2025ರ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಭಾರತ ತಂಡ ಏಷ್ಯಾಕಪ್‌ನಲ್ಲಿ ಭಾಗವಹಿಸದಿದ್ದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಬಹುದು. ಬಿಸಿಸಿಐನ ನಿರ್ಧಾರವು ಪಿಸಿಬಿಗೆ 220 ಕೋಟಿ ರೂಪಾಯಿಗಳವರೆಗೆ ನಷ್ಟವನ್ನುಂಟು ಮಾಡಬಹುದು ಎಂದು ಅಂದಾಜಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಕ್ರಿಕೆಟ್ ಮೈದಾನದ ಮೇಲೂ ಕಂಡುಬರುತ್ತಿದೆ. ಈ ಎರಡೂ ದೇಶಗಳ ಕ್ರಿಕೆಟ್ ತಂಡಗಳು ಐಸಿಸಿ (ICC) ಈವೆಂಟ್‌ಗಳು ಮತ್ತು ಏಷ್ಯಾಕಪ್‌ನಲ್ಲಿ (Asia Cup 2025) ಮಾತ್ರ ಪರಸ್ಪರ ಆಡುತ್ತವೆ. ಆದರೆ ಇತ್ತೀಚಿನ ಉಭಯ ದೇಶಗಳ ನಡುವಿನ ಮಿಲಿಟರಿ ಸಂಘರ್ಷದ ನಂತರ, ಏಷ್ಯಾಕಪ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಮೂಡಿವೆ. ಇತ್ತೀಚೆಗೆ ಭಾರತ ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ವರದಿಯೊಂದು ಹೇಳಿತ್ತು. ಆದರೆ, ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಬಿಸಿಸಿಐ ಎಸಿಸಿ ಪಂದ್ಯಾವಳಿಗಳ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು. ಅಂತಹ ಪರಿಸ್ಥಿತಿಯಲ್ಲಿ, ಭಾರತ ಈ ಪಂದ್ಯಾವಳಿಯಿಂದ ಹಿಂದೆ ಸರಿದರೆ ಪಾಕಿಸ್ತಾನ ಭಾರಿ ನಷ್ಟವನ್ನು ಎದುರಿಸಬೇಕಾಗುತ್ತದೆ.
ಬಿಸಿಸಿಐ ಕೈಯಲ್ಲಿ ಪಾಕಿಸ್ತಾನದ 220 ಕೋಟಿ ರೂ.!
2025 ರ ಏಷ್ಯಾಕಪ್ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಈ ಬಾರಿ ಪಂದ್ಯಾವಳಿಯ ಆತಿಥ್ಯವನ್ನು ಭಾರತ ವಹಿಸಿಕೊಂಡಿದೆ. ಏತನ್ಮಧ್ಯೆ, ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿಗಳ ಬಗ್ಗೆ ಬಿಸಿಸಿಐ ಶೀಘ್ರದಲ್ಲೇ ದೊಡ್ಡ ನಿರ್ಧಾರ ತೆಗೆದುಕೊಳ್ಳಲಿದೆ. ಭಾರತ-ಪಾಕಿಸ್ತಾನ ಪಂದ್ಯಗಳು ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಡುವ ಪಂದ್ಯಗಳಲ್ಲಿ ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಬಿಸಿಸಿಐ ಈ ಪಂದ್ಯಾವಳಿಯಿಂದ ತನ್ನ ಹೆಸರನ್ನು ಹಿಂತೆಗೆದುಕೊಂಡರೆ ಅದು ಪಿಸಿಬಿಯ ಆದಾಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಭಾರತದ ಈ ನಿರ್ಧಾರದಿಂದಾಗಿ 165 ರಿಂದ 220 ಕೋಟಿ ರೂ.ಗಳ ನಷ್ಟ ಅನುಭವಿಸಬಹುದು ಎಂದು ಅಂದಾಜಿಸಲಾಗಿದೆ. ಭಾರತ ಇಲ್ಲದಿದ್ದರೆ, ಪಂದ್ಯಾವಳಿಯ ಗಳಿಕೆ ತೀವ್ರವಾಗಿ ಕುಸಿಯಬಹುದು.
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿಯೂ ಸಹ, ಭಾರತದಿಂದಾಗಿ ಪಾಕಿಸ್ತಾನವು ಭಾರಿ ನಷ್ಟವನ್ನು ಅನುಭವಿಸಿತ್ತು. ವಾಸ್ತವವಾಗಿ, ಭಾರತ ಪಾಕಿಸ್ತಾನ ಪ್ರವಾಸ ಮಾಡಲು ನಿರಾಕರಿಸಿತ್ತು. ಇದಾದ ನಂತರ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆದಿದ್ದವು. ಆ ಬಳಿಕ ಭಾರತ ಫೈನಲ್ ತಲುಪಿದರಿಂದ ಪಾಕಿಸ್ತಾನವು ಫೈನಲ್ ಪಂದ್ಯದ ಆತಿಥ್ಯದ ಹಕ್ಕುಗಳನ್ನು ಸಹ ಕಳೆದುಕೊಂಡಿತು. ಮಾಧ್ಯಮ ವರದಿಗಳ ಪ್ರಕಾರ, ಭಾರತದ ಈ ನಿರ್ಧಾರದಿಂದಾಗಿ, ಪಿಸಿಬಿ ಸುಮಾರು 700 ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿತ್ತು. ಇಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾ ಏಷ್ಯಾಕಪ್‌ನಿಂದ ಹೊರನಡೆಯುವುದರಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು. ಇದು ಪಾಕಿಸ್ತಾನ ಮಾತ್ರವಲ್ಲ, ಇತರ ತಂಡಗಳ ಗಳಿಕೆಯ ಮೇಲೂ ಪರಿಣಾಮ ಬೀರುತ್ತದೆ.
‘ಅದರಲ್ಲಿ ಯಾವುದೇ ಸತ್ಯವಿಲ್ಲ’; ಏಷ್ಯಾಕಪ್ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬಿಸಿಸಿಐ ಕಾರ್ಯದರ್ಶಿ
2023 ರ ಏಷ್ಯಾಕಪ್‌ನಲ್ಲೂ ಅವ್ಯವಸ್ಥೆ
ಕೊನೆಯ ಏಷ್ಯಾಕಪ್ ಆವೃತ್ತಿಯನ್ನು 2023 ರಲ್ಲಿ ಆಡಲಾಯಿತು. ಆಗ ಪಂದ್ಯಾವಳಿಯ ಆತಿಥ್ಯ ಪಾಕಿಸ್ತಾನದ ಕೈಯಲ್ಲಿತ್ತು. ಆದರೆ ಆ ಸಮಯದಲ್ಲಿಯೂ ಭಾರತ ತಂಡ ಪಾಕಿಸ್ತಾನ ಪ್ರವಾಸ ಮಾಡಲಿಲ್ಲ. ಇದರಿಂದಾಗಿ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು. ನಂತರ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತು. ಫೈನಲ್ ಪಂದ್ಯ ಕೂಡ ಪಾಕಿಸ್ತಾನದ ಹೊರಗೆ ನಡೆಯಿತು. ಇದರಿಂದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆದಾಯದ ಮೇಲೂ ಪರಿಣಾಮ ಬೀರಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
