AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಪ್ರೇಕ್ಷಕರಿಗೆ ಅನುಮತಿ ನೀಡುವ ನಿರೀಕ್ಷೆ ಇದೆ.. ಮುಂದಿನ ಸೀಸನ್‌ನಲ್ಲಿ 10 ತಂಡಗಳು ಇರಲಿವೆ; ಬಿಸಿಸಿಐ

IPL 2021: ಮುಂದಿನ ಸೀಸನ್‌ನಿಂದ 10 ತಂಡಗಳು ಆಡುವ ಸಾಧ್ಯತೆಯಿದೆ. ನಾವು ಕೂಡ ಇದರ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದರು.

IPL 2021: ಪ್ರೇಕ್ಷಕರಿಗೆ ಅನುಮತಿ ನೀಡುವ ನಿರೀಕ್ಷೆ ಇದೆ.. ಮುಂದಿನ ಸೀಸನ್‌ನಲ್ಲಿ 10 ತಂಡಗಳು ಇರಲಿವೆ; ಬಿಸಿಸಿಐ
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.
TV9 Web
| Updated By: ಪೃಥ್ವಿಶಂಕರ|

Updated on: Aug 18, 2021 | 4:09 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2021 ರ ಎರಡನೇ ಭಾಗಕ್ಕೆ ಸಿದ್ಧತೆ ನಡೆಸುತ್ತಿದೆ. ಕೊರೊನಾ ವೈರಸ್‌ನಿಂದಾಗಿ ಮುಂದೂಡಲ್ಪಟ್ಟ ಐಪಿಎಲ್​ ಉಳಿದ ಪಂದ್ಯಗಳು ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿವೆ. ಇದರ ಭಾಗವಾಗಿ ಪ್ರೇಕ್ಷಕರಿಗೆ ಕ್ರೀಡಾಂಗಣದೊಳಕ್ಕೆ ಪ್ರವೇಶವಿದೆಯೋ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಬಿಸಿಸಿಐ ಈ ಬಾರಿ ಯುಎಇ ಸರ್ಕಾರವು ಕ್ರಿಕೆಟ್ ಅಭಿಮಾನಿಗಳನ್ನು ಕ್ರೀಡಾಂಗಣಕ್ಕೆ ಬರಲು ಮತ್ತು ಟಿ 20 ಲೀಗ್‌ನ ರೋಮಾಂಚನವನ್ನು ಆನಂದಿಸಲು ಅನುವು ಮಾಡಿಕೊಡುತ್ತದೆ ಎಂದು ಆಶಿಸಿದೆ. ಯುಎಇಯಲ್ಲಿ ಕಳೆದ ವರ್ಷ ಇಡೀ ಋತುವಿನಲ್ಲಿ, ವೀಕ್ಷಕರಿಗೆ ಅವಕಾಶವಿರಲಿಲ್ಲ.

ಬೋರ್ಡ್ ಖಜಾಂಚಿ ಅರುಣ್ ಕುಮಾರ್ ಧುಮಾಲ್, ಸುದ್ದಿ ಸಂಸ್ಥೆ IANS ಜೊತೆ ಮಾತನಾಡುತ್ತಾ, ಪ್ರೇಕ್ಷಕರ ಉಪಸ್ಥಿತಿಯ ಬಗ್ಗೆ ಬಿಸಿಸಿಐನ ನಿಲುವನ್ನು ಸ್ಪಷ್ಟಪಡಿಸಿದರು. ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ ಮತ್ತು ಈ ಬಾರಿ ಯುಎಇ ಸರ್ಕಾರವು ಪ್ರೇಕ್ಷಕರಿಗೆ ಅವಕಾಶ ನೀಡುತ್ತದೆ ಎಂದು ಆಶಿಸುತ್ತೇವೆ, ಏಕೆಂದರೆ ಎಲ್ಲರಿಗೂ ಅಲ್ಲಿ ಲಸಿಕೆ ನೀಡಲಾಗಿದೆ. ಏನಾಗುತ್ತದೆ ಎಂದು ನೋಡೋಣ. ಪ್ರೇಕ್ಷಕರಿಗೆ ಬರಲು ಅವಕಾಶ ನೀಡಲಾಗುವುದು ಎಂದು ನಾವು ಭಾವಿಸುತ್ತೇವೆ, ಆದರೆ ಇದು ಆಟಗಾರರ ಅಥವಾ ಜನರ ಸುರಕ್ಷತೆಯ ವೆಚ್ಚದಲ್ಲಿ ಆಗುವುದಿಲ್ಲ, ಇದು ಅತ್ಯಂತ ಮುಖ್ಯವಾಗಿದೆ. ಉಳಿದೆಲ್ಲವೂ ಯುಎಇ ಸರ್ಕಾರದ ಮೇಲೆ ಅವಲಂಬಿತವಾಗಿರುತ್ತದೆ ಎಂದರು.

ಸೆಪ್ಟೆಂಬರ್ 19 ರಿಂದ ಸೀಸನ್ ಆರಂಭವಾಗಲಿದೆ ಐಪಿಎಲ್ 2021 ರ ಉಳಿದ ಭಾಗವನ್ನು ಈ ವರ್ಷ ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಆಯೋಜಿಸಲಾಗುವುದು. ಪಂದ್ಯಾವಳಿಯನ್ನು ನಿಲ್ಲಿಸುವ ಹೊತ್ತಿಗೆ, ಲೀಗ್‌ನ 29 ಪಂದ್ಯಗಳನ್ನು ಆಯೋಜಿಸಲಾಗಿತ್ತು ಮತ್ತು ಇನ್ನೂ 31 ಪಂದ್ಯಗಳು ಉಳಿದಿವೆ. 30 ನೇ ಪಂದ್ಯವಾಗಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಪ್ಟೆಂಬರ್ 19 ರಂದು ಮುಖಾಮುಖಿಯಾಗಲಿವೆ. ಅಕ್ಟೋಬರ್ 15 ರಂದು ಫೈನಲ್ ಪಂದ್ಯ ನಡೆಯಲಿದೆ.

ಮುಂದಿನ ಆವೃತ್ತಿಯಿಂದ 10 ತಂಡಗಳು ಇದರ ಹೊರತಾಗಿ, ಮುಂದಿನ ಸೀಸನ್‌ನಿಂದಲೇ ಲೀಗ್‌ಗೆ ಎರಡು ಹೊಸ ತಂಡಗಳನ್ನು ಸೇರಿಸಲಾಗುವುದು ಎಂದು ಧುಮಾಲ್ ಹೇಳಿದರು. 8 ತಂಡಗಳು ಕೊನೆಯ ಸೀಸನ್ ಲೀಗ್‌ ಆಡಲಿವೆ. ಮುಂದಿನ ಸೀಸನ್‌ನಿಂದ 10 ತಂಡಗಳು ಆಡುವ ಸಾಧ್ಯತೆಯಿದೆ. ನಾವು ಕೂಡ ಇದರ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದರು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ