AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2027: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರ

IPL Impact Player Rule: ಐಪಿಎಲ್ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಮುಂದುವರಿಸುವುದರ ಬಗ್ಗೆ ಬಿಸಿಸಿಐ 10 ಫ್ರಾಂಚೈಸಿಗಳಿಂದ ಪ್ರತಿಕ್ರಿಯೆ ಕೋರಿದೆ. ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯರಂತಹ ಹಲವು ನಾಯಕರು ಈ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಆಲ್-ರೌಂಡರ್‌ಗಳ ಪ್ರಾಮುಖ್ಯತೆಯನ್ನು ಕಡಿಮೆ ಮಾಡುತ್ತದೆ ಎಂಬ ವಾದವಿದೆ. ಬಿಸಿಸಿಐ ಈ ಕುರಿತು ಆಗಸ್ಟ್ 2026ರೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ನಿಯಮದ ಭವಿಷ್ಯ ಕುತೂಹಲ ಕೆರಳಿಸಿದೆ.

IPL 2027: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರ
Impact Player
ಪೃಥ್ವಿಶಂಕರ
|

Updated on: Aug 31, 2026 | 3:04 PM

Share

ಐಪಿಎಲ್​ನಲ್ಲಿ (IPL) ಭಾಗಶಃ ನಾಯಕರ ಅಸಮಾಧಾನಕ್ಕೆ ಕಾರಣವಾಗಿರುವ ಐಪಿಎಲ್​ನ ಪ್ರಮುಖ ನಿಯಮಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ (IPL Impact Player Rule) ಕೂಡ ಒಂದು. ರೋಹಿತ್ ಶರ್ಮಾ ಸೇರಿದಂತೆ ಹಲವು ತಂಡಗಳ ನಾಯಕರು ಈ ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ ಬಿಸಿಸಿಐ ಈ ನಿಯಮವನ್ನು ಮುಂದುವರೆಸುತ್ತಾ ಬಂದಿದೆ. ಇದೀಗ ಈ ನಿಯಮದ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರಕ್ಕೆ ಬಂದಿದೆ. ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಅಂದರೆ 2027 ರ ಐಪಿಎಲ್‌ನಲ್ಲಿ ಈ ನಿಯಮವನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಬಿಸಿಸಿಐ 10 ಫ್ರಾಂಚೈಸಿಗಳಿಂದ ಪ್ರತಿಕ್ರಿಯೆ ಕೋರಿದೆ ಎಂದು ವರದಿಯಾಗಿದೆ.

ಮೇಲೆ ಹೇಳಿದಂತೆ ಇಂಪ್ಯಾಕ್ಟ್ ಪ್ಲೇಯರ್ ರೂಲ್ ಪರಿಚಯಿಸಿದಾಗಿನಿಂದ, ಅದರ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ಈ ನಿಯಮವು ತಂಡಗಳು ತಮ್ಮ ತಂತ್ರಗಳನ್ನು ಬದಲಾಯಿಸುವ ಅವಕಾಶವನ್ನು ಹೆಚ್ಚಿಸಿದೆ ಎಂಬುದು ಕೆಲವರ ಅಭಿಪ್ರಾಯವಾಗಿದ್ದರೆ, ಈ ನಿಯಮ ಆಲ್-ರೌಂಡರ್‌ಗಳ ಪ್ರಾಮುಖ್ಯತೆಯನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರ ಅಭಿಪ್ರಾಯವಾಗಿದೆ.

ಆಗಸ್ಟ್ 31 ರವರೆಗೆ ಗಡುವು

ಈ ಹಿನ್ನೆಲೆಯಲ್ಲಿ, ಬಿಸಿಸಿಐ ಎಲ್ಲಾ ಐಪಿಎಲ್ ಫ್ರಾಂಚೈಸಿಗಳ ಅಭಿಪ್ರಾಯಗಳನ್ನು ಕೇಳಿದೆ. ಹಾಗೆಯೇ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಮುಂದುವರಿಸಬೇಕೇ ಅಥವಾ ಅದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬೇಕೇ ಎಂಬುದರ ಕುರಿತು ತಂಡಗಳಿಂದ ಸಲಹೆಗಳನ್ನು ಕೇಳಿದೆ. ಹಾಗೆಯೇ ಬಿಸಿಸಿಐ ಅಂಪೈರಿಂಗ್, ಅಭ್ಯಾಸ ಸೆಷನ್ ಇತ್ಯಾದಿ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಕೋರಿದೆ ಎಂದು ವರದಿಯಾಗಿದೆ. ಇದರೊಂದಿಗೆ, ಮುಂಬರುವ ಆವೃತ್ತಿಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ವರದಿಗಳ ಪ್ರಕಾರ, ಎಲ್ಲಾ ಫ್ರಾಂಚೈಸಿಗಳಿಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮತ್ತು ಮಂಡಳಿಗೆ ವರದಿಯನ್ನು ಸಲ್ಲಿಸಲು ಆಗಸ್ಟ್ 31, 2026 ವರೆಗೆ ಕಾಲಾವಕಾಶ ನೀಡಲಾಗಿದೆ.

ಐಪಿಎಲ್‌ನ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಆರ್​ಸಿಬಿ ನಾಯಕ

ಹಲವು ನಾಯಕರಿಂದ ವಿರೋಧ

ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ಶುಭ್​ಮನ್ ಗಿಲ್ ಸೇರಿದಂತೆ ಹಲವಾರು ಪ್ರಮುಖ ಭಾರತೀಯ ಆಟಗಾರರು ಈಗಾಗಲೇ ಈ ನಿಯಮವನ್ನು ವಿರೋಧಿಸಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ . ಇದರ ಜೊತೆಗೆ ಈ ನಿಯಮದ ಬೆಂಬಲಿಗರೂ ಇದ್ದಾರೆ. ಕಳೆದ ಆವೃತ್ತಿಯ ನಂತರ ಈ ಸಮಸ್ಯೆ ಶಾಂತವಾದಂತೆ ಕಂಡುಬಂದರೂ, ಬಿಸಿಸಿಐನ ಹಠಾತ್ ಉತ್ತರಗಳ ಬೇಡಿಕೆಯು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ಆವೃತ್ತಿಗೆ ಈ ನಿಯಮವನ್ನು ಪರಿಶೀಲಿಸಲಾಗುತ್ತದೆಯೇ ಅಥವಾ ಅದನ್ನು ಜಾರಿಗೆ ತರಲಾಗುತ್ತದೆಯೇ ಎಂಬುದು ಇನ್ನೂ ಬಗೆಹರಿಯದ ಪ್ರಶ್ನೆಗಳಾಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ