AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಎನ್​ಸಿಎ ಹುದ್ದೆಗೆ ಅರ್ಜಿ ಆಹ್ವಾನ: ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಎಲ್ಲಾ ರೀತಿಯ ಕ್ರಿಕೆಟ್ ಕೋಚಿಂಗ್ ಕಾರ್ಯಕ್ರಮಗಳನ್ನು ನಡೆಸುವ ಜವಾಬ್ದಾರಿಯನ್ನು NCA ಮುಖ್ಯಸ್ಥರು ಹೊಂದಿರುತ್ತಾರೆ.

Rahul Dravid: ಎನ್​ಸಿಎ ಹುದ್ದೆಗೆ ಅರ್ಜಿ ಆಹ್ವಾನ: ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?
ರಾಹುಲ್ ದ್ರಾವಿಡ್​
TV9 Web
| Edited By: |

Updated on: Aug 10, 2021 | 6:44 PM

Share

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥನ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ (BCCI) ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಹುದ್ದೆಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ (Rahul Dravid) ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರ ಕಾರ್ಯಾವಧಿ ಪೂರ್ಣಗೊಳ್ಳಲಿದ್ದು, ಹೀಗಾಗಿ ಬಿಸಿಸಿಐ (BCCI) ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಬೆನ್ನಲ್ಲೇ ಈ ಹುದ್ದೆಯಲ್ಲಿ ದ್ರಾವಿಡ್ ಅವರು ಮುಂದುವರೆಯಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ (Team India) ಕೋಚ್ ರವಿ ಶಾಸ್ತ್ರಿ ಕಾರ್ಯಾವಧಿ ಪೂರ್ಣಗೊಳ್ಳಲಿದೆ. ಆನಂತರದ ಭಾರತದ ತಂಡದ ಕೋಚ್ ಆಗಿ ಯಾರು ಆಯ್ಕೆ ಆಗಲಿದ್ದಾರೆ ಎಂಬುದು ಕೂಡ ಕುತೂಹಲವನ್ನು ಹುಟ್ಟುಹಾಕಿದೆ.

ಏಕೆಂದರೆ ಇತ್ತೀಚಿಗೆ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಕೋಚ್ ಜವಾಬ್ದಾರಿಯನ್ನು ರಾಹುಲ್ ದ್ರಾವಿಡ್ ವಹಿಸಿಕೊಂಡಿದ್ದರು. ಇದರ ಬೆನ್ನಲ್ಲೇ ದ್ರಾವಿಡ್ ಭಾರತ ತಂಡದ ಮುಂದಿನ ಕೋಚ್ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ಈಗೇನು ನಾನು ಹೇಳುವುದಿಲ್ಲ. ಲಂಕಾ ಸರಣಿ ವೇಳೆ ನೀಡಲಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದು ದ್ರಾವಿಡ್ ತಿಳಿಸಿದ್ದರು.

ಇದೀಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥನ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಬೆನ್ನಲ್ಲೇ ದ್ರಾವಿಡ್ ಟೀಮ್ ಇಂಡಿಯಾಗೆ ಕೋಚ್ ಆಗಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಮೊದಲು ದ್ರಾವಿಡ್ ಅಂಡರ್ -19 ಮತ್ತು ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಭಾರತೀಯ ತಂಡದಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಅನೇಕ ಆಟಗಾರರಿದ್ದಾರೆ. ಹೀಗಾಗಿ ಅವರನ್ನೇ ಟೀಮ್ ಇಂಡಿಯಾ ಕೋಚ್ ಆಗಿಸುವ ಸಾಧ್ಯತೆಯಿದೆ.

ಸದ್ಯ ದ್ರಾವಿಡ್ ಅವರ ಎನ್​ಸಿಎ ಮುಖ್ಯಸ್ಥ ಹುದ್ದೆಯ ಎರಡು ವರ್ಷದ ಒಪ್ಪಂದ ಮುಗಿದಿದೆ. ಇನ್ನು ಮತ್ತೆರಡು ವರ್ಷಗಳ ಅವಧಿ ವಿಸ್ತರಣೆಗಾಗಿ ಮರು ಅರ್ಜಿ ಸಲ್ಲಿಸಲು ದ್ರಾವಿಡ್ ಅವರಿಗೆ ಆಗಸ್ಟ್ 15 (11.59 PM ವರೆಗೆ) ಕೊನೆಯ ದಿನಾಂಕ. ಹೀಗಾಗಿ ಆಗಸ್ಟ್ 15 ರ ಬಳಿಕ ದ್ರಾವಿಡ್ ಅವರ ಮುಂದಿನ ನಡೆಯೇನು ಎಂಬುದು ತಿಳಿಯಲಿದೆ.

“ರಾಹುಲ್ ದ್ರಾವಿಡ್ ಈ ಹುದ್ದೆಗೆ ಮರು ಅರ್ಜಿ ಸಲ್ಲಿಸಬಹುದು. ಆದರೆ ಟಿ 20 ವಿಶ್ವಕಪ್​ ನಂತರ ರವಿಶಾಸ್ತ್ರಿ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಆ ಬಳಿಕ ರಾಹುಲ್ ಅವರನ್ನು ಮುಖ್ಯ ಕೋಚ್ ಸ್ಥಾನಕ್ಕೆ ಏರಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎನ್‌ಸಿಎ ಮುಖ್ಯಸ್ಥರ ಕಾರ್ಯವೇನು? ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಎಲ್ಲಾ ರೀತಿಯ ಕ್ರಿಕೆಟ್ ಕೋಚಿಂಗ್ ಕಾರ್ಯಕ್ರಮಗಳನ್ನು ನಡೆಸುವ ಜವಾಬ್ದಾರಿಯನ್ನು NCA ಮುಖ್ಯಸ್ಥರು ಹೊಂದಿರುತ್ತಾರೆ. ಇದರ ಹೊರತಾಗಿ ಅಕಾಡೆಮಿಯ ತರಬೇತಿಯಲ್ಲಿ ಭಾಗವಹಿಸುವ ಎಲ್ಲ ಕ್ರಿಕೆಟಿಗರ ತಯಾರಿ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಗಾಗಿ ಮಾರ್ಗದರ್ಶನ ನೀಡುತ್ತಾರೆ. NCA ಮುಖ್ಯಸ್ಥರು ರಾಷ್ಟ್ರೀಯ ಮಹಿಳಾ ಮತ್ತು ಪುರುಷರ ತಂಡಗಳ ಮುಖ್ಯ ತರಬೇತುದಾರರು ಮತ್ತು ಇತರ ಕ್ರಿಕೆಟ್ ತರಬೇತುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಇದು ಭಾರತ ಎ, ಅಂಡರ್ 19, ಅಂಡರ್ 23, ಭಾರತ ಮಹಿಳಾ ತಂಡವನ್ನು ಒಳಗೊಂಡಿದೆ. ತಂಡಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಎನ್​ಸಿಎ ಮುಖ್ಯಸ್ಥರು ಹೊಂದಿರುತ್ತಾರೆ. ಹಾಗೆಯೇ ಟೀಮ್ ಇಂಡಿಯಾ ಪುರುಷರ ಮತ್ತು ಮಹಿಳಾ ಮುಖ್ಯ ತರಬೇತುದಾರರಿಗೆ ಆಟಗಾರರ ಕುರಿತಾದ ಅಗತ್ಯ ಮಾಹಿತಿಯನ್ನು ಒದಗಿಸುತ್ತಾರೆ.

ಇದನ್ನೂ ಓದಿ: IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

ಇದನ್ನೂ ಓದಿ: IPL 2021: ಐಪಿಎಲ್​ನ ಹೊಸ ನಿಯಮದಿಂದ ಯಾರಿಗೆ ಅನುಕೂಲ?

(BCCI invites applications for NCA Head role, Rahul Dravid likely to reapply)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು