Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?
Rohit Sharma

Team India: ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್.

TV9kannada Web Team

| Edited By: Zahir PY

Jan 01, 2022 | 2:31 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ( IND vs SA ODI) ಜನವರಿ 19 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ (Rohit Sharma) ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್ (KL Rahul) ಅವರಿಗೆ ವಹಿಸಲಾಗಿದೆ. ಗಾಯಗೊಂಡಿರುವ ಕಾರಣ ಹಿಟ್​ಮ್ಯಾನ್ ಈ ಹಿಂದೆ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಏಕದಿನ ಸರಣಿ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಏಕದಿನ ಸರಣಿಯಿಂದ ಕೂಡ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಅತ್ತ ಕೆಲ ದಿನಗಳ ಹಿಂದೆ ಫಿಟ್​ನೆಸ್​ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಪಾಸಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದಾಗ್ಯೂ ಏಕದಿನ ಸರಣಿಗೆ ರೋಹಿತ್ ಶರ್ಮಾ ಯಾಕೆ ಆಯ್ಕೆಯಾಗಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಉತ್ತರಿಸಿದ್ದಾರೆ.

ಟೀಮ್ ಇಂಡಿಯಾ ಮುಂದೆ ಪ್ರಮುಖ ಸರಣಿಗಳಿವೆ. ಈ ವರ್ಷ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಅದಕ್ಕಾಗಿಯೇ ನಾವು ರೋಹಿತ್ ಶರ್ಮಾ ಅವರು ಸಂಪೂರ್ಣ ಫಿಟ್​ ಆಗಲಿ ಎಂದು ಬಯಸಿದ್ದೇವೆ. ಅವರ ಫಿಟ್​ನೆಸ್​ ಮೇಲೆ ಹೆಚ್ಚು ಗಮನ ನೀಡಲಿ ಎಂದು ನಿರ್ಧರಿಸಿ ಕೆಎಲ್ ರಾಹುಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಚೇತನ್ ಶರ್ಮಾ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಕ್ರಿಕೆಟ್ ಆಡಲಾಗುತ್ತಿದೆ. ಯಾವ ಆಟಗಾರನೂ ಗಾಯಗೊಳ್ಳಲು ಬಯಸುವುದಿಲ್ಲ. ಎಲ್ಲರೂ ಆಡಲು ಬಯಸುತ್ತಾರೆ. ಯಾರೂ ಉದ್ದೇಶಪೂರ್ವಕವಾಗಿ ನೋವಿನಿಂದ ಇರಲು ಬಯಸುವುದಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ನಂತರ ಪ್ರಮುಖ ಸರಣಿಗಳು ಬರಲಿರುವುದರಿಂದ ರೋಹಿತ್‌ಗೆ ವಿಶ್ರಾಂತಿ ನೀಡುವುದು ಒಳ್ಳೆಯದು ಎಂದು ನಿರ್ಧರಿಸಿದೆವು ಎಂದು ಚೇತನ್ ಶರ್ಮಾ ಹೇಳಿದರು.

ತಂಡವನ್ನು ಪ್ರಕಟಿಸುವ ಮೊದಲು ಆಯ್ಕೆದಾರರು ರೋಹಿತ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಬಗ್ಗೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಅವರನ್ನು ಆಯ್ಕೆ ಮಾಡದಿರಲು ನಿರ್ಧರಿಸಿದ್ದೇವೆ ಎಂದು ಚೇತನ್ ಶರ್ಮಾ ತಿಳಿಸಿದರು. ಈ ಕಾರಣದಿಂದಾಗಿ ರೋಹಿತ್ ಶರ್ಮಾ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿಲ್ಲ ಎಂದು ಬಿಸಿಸಿ ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ.

ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್ , ಜಸ್ಪ್ರೀತ್ ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(BCCI Is Worried About Team India’s Rohit Sharma’s Fitness)

Follow us on

Related Stories

Most Read Stories

Click on your DTH Provider to Add TV9 Kannada