AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ WTC ಫೈನಲ್​ ಪಂದ್ಯ?

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಟೆಸ್ಟ್​ ಕ್ರಿಕೆಟ್​ನ ಗದಾಯುದ್ಧದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 11 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ.

ಭಾರತದಲ್ಲಿ WTC ಫೈನಲ್​ ಪಂದ್ಯ?
Wtc 2027
ಝಾಹಿರ್ ಯೂಸುಫ್
|

Updated on: May 10, 2025 | 11:07 AM

Share

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್ ಪಂದ್ಯಕ್ಕೆ ಆತಿಥ್ಯವಹಿಸಲು ಬಿಸಿಸಿಐ (BCCI) ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಈಗಾಗಲೇ ಐಸಿಸಿಗೆ ವಿಶೇಷ ಮನವಿಯನ್ನು ಸಹ ಸಲ್ಲಿಸಲಾಗಿದೆ. 2021 ಮತ್ತು 2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಇಂಗ್ಲೆಂಡ್ ಆತಿಥ್ಯವಹಿಸಿತ್ತು. ಅಲ್ಲದೆ ಈ ಬಾರಿಯ ಫೈನಲ್ ಮ್ಯಾಚ್ ಕೂಡ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ಜರುಗಲಿದೆ.

ಈ ಪಂದ್ಯದ ಬೆನ್ನಲ್ಲೇ 2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಶುರುವಾಗಲಿದೆ. ಅದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಮಂಡಳಿ ಮುಂಬರುವ WTC ಫೈನಲ್ ಪಂದ್ಯದ ಆಯೋಜನೆಗೆ ಬಿಡ್ ಸಲ್ಲಿಸಿದೆ.

ಇತ್ತ ಬಿಸಿಸಿಐ ಬಿಡ್ ಸಲ್ಲಿಸಿರುವ ಕಾರಣ ಉಳಿದ ಕ್ರಿಕೆಟ್ ಬೋರ್ಡ್​ಗಳಿಂದ ಪೈಪೋಟಿ ಎದುರಾಗುವ ಸಾಧ್ಯತೆಯಿಲ್ಲ. ಅತ್ತ ಆದಾಯದ ದೃಷ್ಟಿಯಿಂದ ಐಸಿಸಿಗೂ ಕ್ರಿಕೆಟ್ ಕ್ರೇಝ್ ಇರುವ ದೇಶದಲ್ಲಿ ಅಂತಿಮ ಪಂದ್ಯ ನಡೆಯುವುದು ಅನಿವಾರ್ಯ. ಹೀಗಾಗಿ 2027 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಭಾರತದಲ್ಲಿ ನಡೆಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ICC ಆದಾಯಕ್ಕೆ ಹೊಡೆತ:

2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಭಾರತ ವಿಫಲವಾಗಿದೆ. ಇದರಿಂದಾಗಿ ಟಿಕೆಟ್ ಮಾರಾಟದಲ್ಲಿ ಹಾಗೂ ಪ್ರಾಯೋಜಕತ್ವದ ಕೊರೆತೆಯಿಂದ ಐಸಿಸಿಗೆ ಸುಮಾರು 4 ಮಿಲಿಯನ್ ಪೌಂಡ್‌ಗಳ ಆದಾಯ ನಷ್ಟವಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಇತ್ತ ಭಾರತದಲ್ಲಿ 2027ರ ಫೈನಲ್ ಪಂದ್ಯ ಆಯೋಜನೆಗೊಂಡರೆ, ಜಾಹೀರಾತು ಹಾಗೂ ಟಿಕೆಟ್ ಮಾರಾಟದಿಂದ ಉತ್ತಮ ಆದಾಯಗಳಿಸಬಹುದು ಎಂಬ ಸ್ಪಷ್ಟತೆ ಐಸಿಸಿಗೆ ಇದೆ. ಇದೇ ಕಾರಣದಿಂದಾಗಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯದ ಆತಿಥ್ಯದ ಹಕ್ಕನ್ನು ಐಸಿಸಿ, ಬಿಸಿಸಿಐಗೆ ವಹಿಸುವ ಸಾಧ್ಯತೆ ಹೆಚ್ಚಿದೆ.

2025 ಫೈನಲ್ ಯಾವಾಗ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್ 11 ರಿಂದ ಶುರುವಾಗಲಿರುವ WTC ಫೈನಲ್ ಪಂದ್ಯದಲ್ಲಿ ಈ ಬಾರಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ. ಇದಕ್ಕೂ ಮುನ್ನ ನಡೆದ 2021ರ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಗಳಿಗೆ ಇಂಗ್ಲೆಂಡ್​ನ ಓವಲ್ ಮೈದಾನ ಆತಿಥ್ಯವಹಿಸಿತ್ತು.

ಇದನ್ನೂ ಓದಿ: IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

ಈ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಅಂತಿಮ ಹಣಾಹಣಿಯನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಜೂನ್ 11 ರಿಂದ 15 ರವರೆಗೆ ಫೈನಲ್ ಪಂದ್ಯ ಜರುಗಲಿದೆ. ಈ ಪಂದ್ಯದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಸೌತ್ ಆಫ್ರಿಕಾ ಮತ್ತು ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ