ಟಿ20 ತಂಡದಿಂದ ರೋಹಿತ್- ಕೊಹ್ಲಿ ಔಟ್! ಲಂಕಾ ವಿರುದ್ಧದ ಸರಣಿಯಲ್ಲಿ ಎರಡು ತಂಡಗಳು ಕಣಕ್ಕೆ?

ವಾಸ್ತವವಾಗಿ, 2024 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಹೊಸ ತಂಡವನ್ನು ಸಿದ್ಧಪಡಿಸುವುತ್ತ ಗಮನ ಹರಿಸಿದೆ. ಇದರ ಅಂಗವಾಗಿ ಜನವರಿಯಿಂದ ಆರಂಭವಾಗಲಿರುವ ತವರು ಸರಣಿಯಲ್ಲಿಯೇ ಈ ಬದಲಾವಣೆಗೆ ಬಿಸಿಸಿಐ ಮುಂದಾಗಿದೆ.

ಟಿ20 ತಂಡದಿಂದ ರೋಹಿತ್- ಕೊಹ್ಲಿ ಔಟ್! ಲಂಕಾ ವಿರುದ್ಧದ ಸರಣಿಯಲ್ಲಿ ಎರಡು ತಂಡಗಳು ಕಣಕ್ಕೆ?
Rohit and Kohli
Follow us
TV9 Web
| Updated By: ಪೃಥ್ವಿಶಂಕರ

Updated on:Dec 11, 2022 | 6:17 PM

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್​ರಂತಹ ( Rohit Sharma, Virat Kohli , KL Rahul) ಆಟಗಾರರಿಂದ ಕಂಗೊಳಿಸುತ್ತಿರುವ ಭಾರತ ತಂಡ ಸದ್ಯ ಬಾಂಗ್ಲಾದೇಶ ((India vs Bangladesh)) ಪ್ರವಾಸದಲ್ಲಿದೆ. ಭಾರತ ತಂಡ ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದ್ದು, ಇದೀಗ ಡಿಸೆಂಬರ್ 14 ರಿಂದ ಪ್ರಾರಂಭವಾಗುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೇಲೆ ಕಣ್ಣಿಟ್ಟಿದೆ. ಬಾಂಗ್ಲಾದೇಶದಿಂದ ಹಿಂದಿರುಗಿದ ನಂತರ ಟೀಂ ಇಂಡಿಯಾ ತವರಿನಲ್ಲಿಯೇ ಸರಣಿಗಳನ್ನು ಆಡಲಿದೆ. ಮುಂದಿನ 3 ತಿಂಗಳಲ್ಲಿ ರೋಹಿತ್ ಪಡೆ ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಕ್ಕೆ ಆತಿಥ್ಯ ವಹಿಸಬೇಕಿದೆ. ಜನವರಿಯಲ್ಲಿ ಶ್ರೀಲಂಕಾ ವಿರುದ್ಧ 3 ಟಿ20 ಮತ್ತು ಏಕದಿನ ಸರಣಿಯನ್ನು ಆಡುವುದರೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ನಡೆಯಲ್ಲಿರುವ ಸರಣಿಗಳಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಲಂಕಾ ಎದುರು ಆರಂಭವಾಗುವ ಟಿ20 ಸರಣಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದಕ್ಕೆ ಕಾರಣವೂ ಇದ್ದು, ಇದೇ ಸರಣಿಯಿಂದ ಟೀಂ ಇಂಡಿಯಾದ ಟಿ20 ನಾಯಕತ್ವವನ್ನು ರೋಹಿತ್ ಬದಲು ಹಾರ್ದಿಕ್​ ಪಾಂಡ್ಯಗೆ (Hardik Pandya) ಹಸ್ತಾಂತರಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ತವರಿನಲ್ಲಿ ನಡೆಯಲ್ಲಿರುವ ಏಕದಿನ ಹಾಗೂ ಟಿ20 ಸರಣಿಗೆ ಎರಡು ಬೇರೆ ಬೇರೆ ತಂಡಗಳನ್ನು ಕಣಕ್ಕಿಳಿಸುವ ಚಿಂತನೆಯನ್ನು ಬಿಸಿಸಿಐ ಮಾಡಿದೆ. ಇದರಡಿಯಲ್ಲಿ ಈಗ ಹೊರಬಿದ್ದಿರುವ ಮಾಹಿತ ಪ್ರಕಾರ, ರೋಹಿತ್ ಮತ್ತು ಕೊಹ್ಲಿ ಸೇರಿದಂತೆ ಅನೇಕ ಹಿರಿಯ ಆಟಗಾರರನ್ನು ಟಿ20 ತಂಡದಿಂದ ಕೈಬಿಟ್ಟು, ಅವರನ್ನು ಕೇವಲ ಏಕದಿನ ಹಾಗೂ ಟೆಸ್ಟ್ ಸರಣಿಗಳತ್ತ ಗಮನಹರಿಸುವಂತೆ ಹೇಳುವ ಸಾಧ್ಯತೆಗಳಿವೆ.

‘ಡಿಯರ್ ಕ್ರಿಕೆಟ್, ಇನ್ನೊಂದು ಅವಕಾಶ ಕೊಡು’; ತನ್ನ ಅಳಲು ತೊಡಿಕೊಂಡ ಕನ್ನಡಿಗ ಕರುಣ್ ನಾಯರ್

ಮುಂದಿನ ಟಿ20 ವಿಶ್ವಕಪ್ ಮೇಲೆ ಬಿಸಿಸಿಐ ಕಣ್ಣು

ವಾಸ್ತವವಾಗಿ, 2024 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಹೊಸ ತಂಡವನ್ನು ಸಿದ್ಧಪಡಿಸುವುತ್ತ ಗಮನ ಹರಿಸಿದೆ. ಇದರ ಅಂಗವಾಗಿ ಜನವರಿಯಿಂದ ಆರಂಭವಾಗಲಿರುವ ತವರು ಸರಣಿಯಲ್ಲಿಯೇ ಈ ಬದಲಾವಣೆಗೆ ಬಿಸಿಸಿಐ ಮುಂದಾಗಿದೆ. ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಲಂಕಾ ವಿರುದ್ಧ ನಡೆಯುವ ಟಿ20 ಸರಣಿಯಿಂದ ಟೀಂ ಇಂಡಿಯಾದ ಟಿ20 ತಂಡದ ನಾಯಕನಾಗಿ ಅಧಿಕಾರವಹಿಸಿಕೊಳ್ಳುವ ಸಾಧ್ಯತೆಗಳಿವೆ. ಹಾಗೆಯೇ ರೋಹಿತ್​ ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಪಾಂಡ್ಯ ನಾಯಕತ್ವದಲ್ಲಿ ಭಾರತ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಅಂದಿನಿಂದ ಅವರನ್ನು ಟಿ20 ನಾಯಕನನ್ನಾಗಿ ಮಾಡಬೇಕೆಂಬ ಬೇಡಿಕೆ ತೀವ್ರಗೊಂಡಿತ್ತು.

ಟಿ20 ಮಾದರಿಯಿಂದ ಕೊಹ್ಲಿ ದೂರ?

ಈ ವರ್ಷದ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಇದರ ಹೊರತಾಗಿಯೂ ಕೆಲಸದ ಹೊರೆ ನಿರ್ವಹಣೆಯಿಂದಾಗಿ ಕೊಹ್ಲಿ ಟೆಸ್ಟ್ ಹಾಗೂ ಏಕದಿನ ಮಾದರಿಯಲ್ಲಿ ಹೆಚ್ಚು ಗಮನಹರಿಸುವ ಸಲುವಾಗಿ ಟಿ20 ತಂಡದಿಂದ ಅಂತರ ಕಾಯ್ದುಕೊಳ್ಳುವ ಸಾಧ್ಯತೆಗಳಿವೆ. ಭಾರತ ಜನವರಿಯಲ್ಲಿ ಶ್ರೀಲಂಕಾ ವಿರುದ್ಧ 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನು ಆಡಲಿದೆ. ಇದರ ನಂತರ, ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ನ್ಯೂಜಿಲೆಂಡ್‌ಗೆ ಆತಿಥ್ಯ ವಹಿಸಿದ ನಂತರ, ಫೆಬ್ರವರಿಯಲ್ಲಿ ಭಾರತ ನಾಲ್ಕು ಟೆಸ್ಟ್ ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಆತಿಥ್ಯ ವಹಿಸಲಿದೆ. ಜನವರಿ 3 ರಂದು ಮುಂಬೈನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Sun, 11 December 22

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು