ವಿರಾಟ್ ಕೊಹ್ಲಿಯ ಅಸಮಾಧಾನದ ಬೆನ್ನಲ್ಲೇ ಬಿಸಿಸಿಐ ಯೂಟರ್ನ್
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೂ ಮುನ್ನ ಬಿಸಿಸಿಐ ತನ್ನ ನಿಯಮವನ್ನು ಸಡಿಲಿಕೆ ಮಾಡಲು ಮುಂದಾಗಿದ್ದು, ಅದರಂತೆ ಮುಂಬರುವ ಸರಣಿ ವೇಳೆ ಟೀಮ್ ಇಂಡಿಯಾ ಆಟಗಾರರ ಜೊತೆ ಅವರ ಪತ್ನಿಯರು ಅಥವಾ ಪ್ರೇಯಸಿರು ಕಾಣಿಸಿಕೊಳ್ಳಬಹುದು.

ಟೀಮ್ ಇಂಡಿಯಾ ಆಟಗಾರರಿಗೆ ವಿಧಿಸಿದ್ದ ಕಟ್ಟು ನಿಟ್ಟಿನ ನಿಯಮವನ್ನು ಮರುಪರಿಶೀಲಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಡಳಿ ಚಿಂತಿಸಿದೆ ಎಂದು ವರದಿಯಾಗಿದೆ. ಈ ಹಿಂದಿನ ನಿಯಮದಂತೆ ವಿದೇಶಿ ಸರಣಿಗಳ ಪ್ರವಾಸದ ವೇಳೆ ನಿಗದಿತ ಸಮಯದವರೆಗೆ ಮಾತ್ರ ಕುಟುಂಬಸ್ಥರು ಜೊತೆಯಲ್ಲಿರಬಹುದು ಎಂದು ಬಿಸಿಸಿಐ ತಿಳಿಸಲಾಗಿತ್ತು. ಆದರೀಗ ಈ ನಿಯಮದಲ್ಲಿ ಬದಲಾವಣೆ ತರಲು ಮುಂದಾಗಿದೆ.
ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಹೀನಾಯ ಸೋಲಿನ ನಂತರ ಬಿಸಿಸಿಐ ಎಲ್ಲಾ ಆಟಗಾರರಿಗೆ ಕಟ್ಟುನಿಟ್ಟಿನ ಪ್ರಯಾಣ ನೀತಿಯನ್ನು ಹೊರಡಿಸಿತ್ತು. ವಿದೇಶಿ ಪ್ರವಾಸಗಳ ಸಮಯದಲ್ಲಿ ಆಟಗಾರರ ಕುಟುಂಬಗಳ ಉಪಸ್ಥಿತಿಯನ್ನು ಬಿಸಿಸಿಐ ಗಣನೀಯವಾಗಿ ಕಡಿಮೆ ಮಾಡಿತ್ತು. ಬಿಸಿಸಿಐನ ಹೊಸ ನಿಯಮಗಳ ಪ್ರಕಾರ, ಸರಣಿಗಳ ವೇಳೆ ಆಟಗಾರರು ತಮ್ಮ ಹೆಂಡತಿಯರು, ಮಕ್ಕಳು ಅಥವಾ ಕುಟುಂಬವನ್ನು ಕೇವಲ ಎರಡು ವಾರಗಳವರೆಗೆ ಮಾತ್ರ ಜತೆಯಲ್ಲಿರಿಸಬಹುದು ಎಂದು ತಿಳಿಸಲಾಗಿತ್ತು.
ಆದರೆ ಈ ನಿಯಮದ ಬಗ್ಗೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ದೊಡ್ಡ ಪಂದ್ಯಗಳ ವೇಳೆ ಅಥವಾ ಕೆಟ್ಟ ಸಮಯದಲ್ಲಿ ಆಟಗಾರರ ಕುಟುಂಬಗಳು ಜೊತೆಗಿರುವುದರಿಂದ ಉದ್ವೇಗ ಕಡಿಮೆಯಾಗುತ್ತದೆ. ಹೀಗಾಗಿ ಕುಟುಂಬಸ್ಥರು ಜೊತೆಗಿರಬೇಕಿರುವುದು ಅನಿವಾರ್ಯ ಎಂದು ಕೊಹ್ಲಿ ಹೇಳಿದ್ದರು.
ವಿರಾಟ್ ಕೊಹ್ಲಿಯ ಈ ಹೇಳಿಕೆ ಬೆನ್ನಲ್ಲೇ ಬಿಸಿಸಿಐ ತನ್ನ ನಿಯಮದಲ್ಲಿ ಬದಲಾವಣೆ ತರಲು ಮುಂದಾಗಿದೆ. ವಿದೇಶ ಪ್ರವಾಸದ ಸಮಯದಲ್ಲಿ ಆಟಗಾರರು ತಮ್ಮ ಕುಟುಂಬಗಳೊಂದಿಗೆ ವಿಸ್ತೃತ ಅವಧಿವರೆಗೆ ಇರಲು ಬಯಸಿದರೆ, ಅವರು ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಿಸಿಸಿಐ ಮೂಲಗಳನ್ನು ಉಲ್ಲಂಘಿಸಿ ವರದಿಯಾಗಿದೆ. ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಟೀಮ್ ಇಂಡಿಯಾ ಆಟಗಾರರಿಗೆ ಕುಟುಂಬಸ್ಥರೊಂದಿಗೆ ಕಾಲ ಕಳೆಯಲು ಅವಕಾಶ ಸಿಗಲಿದೆ ಎನ್ನಬಹುದು.
ಭಾರತ ಮತ್ತು ಇಂಗ್ಲೆಂಡ್ ಸರಣಿ ಯಾವಾಗ?
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿ ವೇಳೆ ಟೀಮ್ ಇಂಡಿಯಾ ಆಟಗಾರರೊಂದಿಗೆ ಕುಟುಂಬದ ಸದಸ್ಯರಿಗೂ ತೆರಳಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಮೊದಲ ಟೆಸ್ಟ್: 20-24 ಜೂನ್, 2025 – ಹೆಡ್ಲಿಂಗ್ಲೆ, ಲೀಡ್ಸ್
- 2ನೇ ಟೆಸ್ಟ್: ಜುಲೈ 2-6, 2025 – ಎಡ್ಜ್ಬಾಸ್ಟನ್, ಬರ್ಮಿಂಗ್ಹ್ಯಾಮ್
- 3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್
- 4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
- 5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್
Published On - 11:04 am, Wed, 19 March 25