AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಔಟ್: ಬಿಸಿಸಿಐ ಹೊಸ ಟೀಮ್​ನಲ್ಲಿ ಇರುವವರು ಯಾರೆಲ್ಲಾ ಗೊತ್ತಾ?

BCCI New TEAM: ಅಕ್ಟೋಬರ್ 18 ರಂದು ಔಪಚಾರಿಕ ಚುನಾವಣೆ ನಡೆಯಲಿದ್ದು, ಆ ಬಳಿಕ ನೂತನ ಪದಾಧಿಕಾರಿಗಳು ಅಧಿಕಾರವಹಿಸಿಕೊಳ್ಳಲಿದ್ದಾರೆ.

ಸೌರವ್ ಗಂಗೂಲಿ ಔಟ್: ಬಿಸಿಸಿಐ ಹೊಸ ಟೀಮ್​ನಲ್ಲಿ ಇರುವವರು ಯಾರೆಲ್ಲಾ ಗೊತ್ತಾ?
BCCI New Team
TV9 Web
| Edited By: |

Updated on: Oct 12, 2022 | 9:59 PM

Share

ಭಾರತೀಯ ಕ್ರಿಕೆಟ್ ಮಂಡಳಿಯ (BCCI) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ (Roger Binny) ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 18 ರಂದು ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರ ಕಾರ್ಯಾವಧಿ ಕೊನೆಗೊಳ್ಳಲಿದ್ದು, ಅಂದೇ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ. ಇದಾಗ್ಯೂ ಕಾರ್ಯದರ್ಶಿಯಾಗಿ ಜಯ್​ ಶಾ ಅವರೇ ಮುಂದುವರೆಯಲಿದ್ದಾರೆ. ಇನ್ನುಳಿದ ಸ್ಥಾನಗಳಿಗೂ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಇವರೆಲ್ಲರೂ ಬಿಸಿಸಿಐನ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.

ಅದರಂತೆ ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಕರ್ನಾಕಟದವರಾಗಿರುವ ರೋಜರ್ ಬಿನ್ನಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಉಪಾಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕವಾಗಲಿದ್ದಾರೆ. ಇನ್ನು ಹಾಲಿ ಕಾರ್ಯದರ್ಶಿಯಾಗಿರುವ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರೇ ಮುಂದುವರೆಯಲಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಅಧಿಕಾರವಹಿಸಿಕೊಳ್ಳಲಿದ್ದಾರೆ. ಅದೇ ರೀತಿ ಖಜಾಂಚಿ ಸ್ಥಾನವು ಈ ಬಾರಿ ಆಶಿಶ್ ಸೇಲಾರ್ ಪಾಲಾಗಲಿದೆ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ಅವರನ್ನು ಪರಿಗಣಿಸಲಾಗಿತ್ತು ಎಂದು ವರದಿಯಾಗಿದೆ. ಇದಾಗ್ಯೂ ಐಪಿಎಲ್ ಚೇರ್ಮನ್ ಹುದ್ದೆಯನ್ನು ಗಂಗೂಲಿ ನಿರಾಕರಿಸಿದ್ದಾರೆ. ಅಷ್ಟೇ ಅಲ್ಲದೆ ಐಸಿಸಿ ಅಥವಾ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕಾಗಿ ಮನವಿ ಮಾಡಿದ್ದರಂತೆ. ಆದರೆ ಗಂಗೂಲಿಯ ಬೇಡಿಕೆಯನ್ನು ಬಿಸಿಸಿಐನ ಇತರೆ ಸದಸ್ಯರು ಸರಾಸಗಟಾಗಿ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಷ್ಟೇ ಅಲ್ಲದೆ ಐಸಿಸಿ ಅಧ್ಯಕ್ಷರಾಗುವ ಗಂಗೂಲಿಯ ಕನಸಿಗೂ ತಣ್ಣೀರೆರಚಿದ್ದಾರೆ. ಕೆಲ ಮೂಲಗಳ ಮಾಹಿತಿ ಪ್ರಕಾರ ಗಂಗೂಲಿ ಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯಲಿರುವ ಚುನಾವಣೆಯಲ್ಲಿ ಗಂಗೂಲಿಯನ್ನು ಬೆಂಬಲಿಸುವುದಿಲ್ಲ ಎಂಬುದನ್ನು ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಕ್ರಿಕೆಟ್​ ವಲಯದ ಎಲ್ಲಾ ಹುದ್ದೆಗಳು ಕೂಡ ಸೌರವ್ ಗಂಗೂಲಿ ಅವರ ಕೈಜಾರಿದೆ ಎಂದೇ ಹೇಳಬಹುದು.

ಇನ್ನು ನೂತನ ಐಪಿಎಲ್ ಅಧ್ಯಕ್ಷರಾಗಿ ಅರುಣ್ ಧುಮಾಲ್ ಆಯ್ಕೆಯಾಗಿದ್ದು, ಅಕ್ಟೋಬರ್ 18 ರಂದು ಔಪಚಾರಿಕ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ. ಅದರಂತೆ ಮುಂದಿನ ವಾರದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರವಹಿಸಿಕೊಳ್ಳಲಿದ್ದಾರೆ.

ಬಿಸಿಸಿಐ ನೂತನ ಪದಾಧಿಕಾರಿಗಳು:

  • ಅಧ್ಯಕ್ಷರು: ರೋಜರ್ ಬಿನ್ನಿ (ಕರ್ನಾಟಕ)
  • ಕಾರ್ಯದರ್ಶಿ: ಜಯ್ ಶಾ (ಗುಜರಾತ್)
  • ಉಪಾಧ್ಯಕ್ಷ: ರಾಜೀವ್ ಶುಕ್ಲಾ (ಯುಪಿ)
  • ಖಜಾಂಚಿ: ಆಶಿಶ್ ಶೇಲಾರ್ (ಮಹಾರಾಷ್ಟ್ರ)
  • ಜಂಟಿ ಕಾರ್ಯದರ್ಶಿ: ದೇವಜಿತ್ ಸೈಕಿಯಾ (ಅಸ್ಸಾಂ)
  • ಐಪಿಎಲ್ ಅಧ್ಯಕ್ಷ: ಅರುಣ್ ಧುಮಾಲ್ (ಹಿಮಾಚಲ ಪ್ರದೇಶ)
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು