AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025ರ ಫೈನಲ್​ನಲ್ಲಿ ‘ಆಪರೇಷನ್ ಸಿಂಧೂರ್’ ವಿಜಯೋತ್ಸವ

IPL 2025 Final: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯಲಿದೆ. ಜೂನ್ 3 ರಂದು ಜರುಗಲಿರುವ ಈ ಪಂದ್ಯವನ್ನು ಭಾರತೀಯ ಸೈನಿಕರಿಗೆ ಅರ್ಪಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ 'ಆಪರೇಷನ್ ಸಿಂಧೂರ್' ವಿಜಯೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ.

IPL 2025ರ ಫೈನಲ್​ನಲ್ಲಿ 'ಆಪರೇಷನ್ ಸಿಂಧೂರ್' ವಿಜಯೋತ್ಸವ
Ipl 2025
ಝಾಹಿರ್ ಯೂಸುಫ್
|

Updated on: May 27, 2025 | 1:58 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವನ್ನು ಭಾರತೀಯ ಸೈನಿಕರಿಗೆ ಅರ್ಪಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯದ ಸಮಾರೋಪ ಸಮಾರಂಭದಲ್ಲಿ ‘ಆಪರೇಷನ್ ಸಿಂಧೂರ್‘ ವಿಜಯೋತ್ಸವ ಆಚರಿಸಲಾಗುತ್ತದೆ. ಏಪ್ರಿಲ್ 22 ರಂದು ಪಾಕಿಸ್ತಾನ್ ಬೆಂಬಲಿತ ಉಗ್ರರು ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ 26 ಮಂದಿ ಭಾರತೀಯರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಪಾಕ್ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿದ್ದರು. ಭಾರತೀಯ ಸೇನೆಯ ಈ ಕಾರ್ಯವನ್ನು ಗೌರವಿಸುವ ಸಲುವಾಗಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದ ವೇಳೆ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಬಿಸಿಸಿಐ ಗೌರವಿಸುತ್ತದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಅವರ ವೀರೋಚಿತ ಪ್ರಯತ್ನಗಳು ರಾಷ್ಟ್ರವನ್ನು ರಕ್ಷಿಸುತ್ತಿವೆ ಮತ್ತು ಪ್ರೇರೇಪಿಸುತ್ತಿವೆ. ಇದರ ಗೌರವಾರ್ಥವಾಗಿ, ಐಪಿಎಲ್​ ಫೈನಲ್ ಪಂದ್ಯವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರ ಸೈನಿಕರನ್ನು ಗೌರವಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಈ ಸಮಾರೋಪ ಸಮಾರಂಭಕ್ಕೆ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು ಹಾಗೂ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರನ್ನು ಆಹ್ವಾನಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬಹಿರಂಗಪಡಿಸಿದ್ದಾರೆ. ಅಲ್ಲದೆ ಐಪಿಎಲ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಮಿಲಿಟರಿ ಬ್ಯಾಂಡ್‌ನ ಪ್ರದರ್ಶನವೂ ನಡೆಯಲಿದೆ ತಿಳಿದು ಬಂದಿದೆ.

ಐಪಿಎಲ್ 2025 ಫೈನಲ್:

ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಗೆದ್ದರೆ, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿವೆ.

ಇನ್ನು ಕೊನೆಯ ಲೀಗ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಜಯ ಸಾಧಿಸಿದರೆ, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂಧ್ಯವಾಡಲಿದೆ.

ಇದನ್ನೂ ಓದಿ: Digvesh rathi: 9.37 ಲಕ್ಷ ರೂ. ದಂಡ ಕಟ್ಟಿ, RCB ವಿರುದ್ಧ ಕಣಕ್ಕೆ..!

IPL 2025 ಪ್ಲೇಆಫ್ ವೇಳಾಪಟ್ಟಿ:

  • ಮೇ 29: ಮೊದಲ ಕ್ವಾಲಿಫೈಯರ್ ಪಂದ್ಯ (ಪಂಜಾಬ್ ಕಿಂಗ್ಸ್ vs ತಂಡ 2), ಮುಲ್ಲನ್‌ಪುರ್ (ಚಂಡೀಗಢ್), ಸಂಜೆ 7:30
  • ಮೇ 30: ಎಲಿಮಿನೇಟರ್ ಪಂದ್ಯ (ತಂಡ 3 vs ತಂಡ 4), ಮುಲ್ಲನ್‌ಪುರ್ (ಚಂಡೀಗಢ್), ಸಂಜೆ 7:30
  • ಜೂನ್ 1: ದ್ವಿತೀಯ ಕ್ವಾಲಿಫೈಯರ್ ಪಂದ್ಯ (ಸೋತವರು Q1 vs ಎಲಿಮಿನೇಟರ್ ವಿನ್ನರ್), ಅಹಮದಾಬಾದ್, ಸಂಜೆ 7:30
  • ಜೂನ್ 3: ಫೈನಲ್ (ವಿಜೇತ Q1 vs ವಿಜೇತ Q2), ಅಹಮದಾಬಾದ್, ಸಂಜೆ 7:30
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!