AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ‘ಕಪ್’ ಚುಕ್ಕೆ… ಐಪಿಎಲ್​​ನಿಂದ RCB ಬ್ಯಾನ್?

RCB: ಐಪಿಎಲ್​ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿತು. ಈ ಭರ್ಜರಿ ಗೆಲುವಿನ ಮರುದಿನ, ಅಂದರೆ ಜೂನ್ 4 ರಂದು ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ತಂಡದ ವಿಜಯೋತ್ಸವವನ್ನು ಆಯೋಜಿಸಿತ್ತು. ಈ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿ ಮೃತಪಟ್ಟಿದ್ದರು. ಇದನ್ನು ಈಗ ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.

IPL 2026: 'ಕಪ್' ಚುಕ್ಕೆ… ಐಪಿಎಲ್​​ನಿಂದ RCB ಬ್ಯಾನ್?
Rcb
ಝಾಹಿರ್ ಯೂಸುಫ್
|

Updated on:Jun 09, 2025 | 10:33 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ 2026 ರಿಂದ ಬ್ಯಾನ್ ಆಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ ಹೇಳಿಕೆ. ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ ತಂಡವು ಚೊಚ್ಚಲ ಬಾರಿ ಕಪ್ ಗೆದ್ದುಕೊಂಡಿದೆ. ಈ ಕಪ್ ಗೆಲುವಿನ ಬೆನ್ನಲ್ಲೇ ನಡೆದ ದಾರುಣ ಘಟನೆಯು ಇದೀಗ ಐಪಿಎಲ್​ ಪಾಲಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಇದನ್ನೇ ಈಗ ಬಿಸಿಸಿಐ ಗಂಭೀರವಾಗಿ ಪರಿಗಣಿಸುವ ಸೂಚನೆ ನೀಡಿದೆ.

ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಇಂತಹ ಘಟನೆಗಳು ನಡೆದಾಗ  ಭಾರತೀಯ ಕ್ರಿಕೆಟ್ ಮಂಡಳಿಯು ‘ಮೂಕ ಪ್ರೇಕ್ಷಕರಾಗಿ’ ಇರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಐಪಿಎಲ್‌ನಲ್ಲಿ ಭವಿಷ್ಯದ ಚಾಂಪಿಯನ್‌ಶಿಪ್ ನಂತರದ ಆಚರಣೆಗಳನ್ನು ನಿಯಂತ್ರಿಸಲು ಮಂಡಳಿಯು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಿದೆ. ಈ ಆಚರಣೆಯನ್ನು ಆರ್‌ಸಿಬಿ ಖಾಸಗಿಯಾಗಿ ಆಯೋಜಿಸಿದ್ದರೂ, ಇದೇ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ತಡೆಯಲು ಬಿಸಿಸಿಐ ಬದ್ಧವಾಗಿದೆ.

ಆರ್​ಸಿಬಿ ವಿಜಯೋತ್ಸವದ ವೇಳೆ ನಡೆದ ಘಟನೆಗೆ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸೈಕಿಯಾ ಹೇಳಿದ್ದಾರೆ. ಈ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ.

ಆರ್​ಸಿಬಿ ಬ್ಯಾನ್ ಆಗುತ್ತಾ?

ದೇವಜಿತ್ ಸೈಕಿಯಾ ಅವರ ಈ ಹೇಳಿಕೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಿಂದ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಆರ್​ಸಿಬಿಯ ವಿಜಯೋತ್ಸವದ ದುರಂತವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಇದು ಐಪಿಎಲ್​ ಪಾಲಿನ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದೆ.

ಇದಕ್ಕೂ ಮುನ್ನ ಐಪಿಎಲ್ ಟ್ರೋಫಿ ಗೆದ್ದಾಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ, ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ವಿಜಯೋತ್ಸವವನ್ನು ಆಚರಿಸಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ ಆರ್​ಸಿಬಿ ಫ್ರಾಂಚೈಸಿಯ ಗೆಲುವಿನ ಸಂಭ್ರಮದಿಂದಾಗಿ 11 ಮಂದಿ ಜೀವ ತೆತ್ತಿದ್ದಾರೆ. ಅಲ್ಲದೆ ಹಲವರು ಗಾಯಗೊಂಡಿದ್ದಾರೆ.

ಇಂತಹ ಘಟನೆಗಳು ಐಪಿಎಲ್​ನ ಬ್ರ್ಯಾಂಡ್ ವ್ಯಾಲ್ಯೂ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿಯೇ ಇದೀಗ ಬಿಸಿಸಿಐ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸುತ್ತಿದೆ. ಒಂದು ವೇಳೆ ಈ ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ನೇರ ಕಾರಣ ಎಂಬುದು ಕಂಡು ಬಂದರೆ, ಆರ್​ಸಿಬಿ ತಂಡಕ್ಕೆ ಒಂದು ವರ್ಷದ ನಿಷೇಧ ಹೇರಬಹುದು.

ಬಿಸಿಸಿಐ ಮುಂದಿನ ನಡೆಯೇನು?

ಆರ್​ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದ ತನಿಖೆಗಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರಾದ ಮೖಕಲ್ ಕುನ್ಹಾ ನೇತೃತ್ವದಲ್ಲಿ ‘ಒನ್ ಮ್ಯಾನ್ ಕಮಿಷನ್’ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಅಲ್ಲದೆ ಆರ್​ಸಿಬಿ ಮೇಲೆ, ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್​ಎ, ಕೆಎಸ್​ಸಿಎ ಅನ್ನು ಯಾರೆಲ್ಲ ಪ್ರತಿನಿಧಿಸುತ್ತಾರೋ ಅವರ ಬಂಧನಕ್ಕೆ ಸರ್ಕಾರ ಸೂಚನೆ ನೀಡಿದೆ.

ಅದರಂತೆ ಈಗಾಗಲೇ RCB, DNA, KSCA ವಿರುದ್ಧ ಕಬ್ಬನ್ ಪಾರ್ಕ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಇದರ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಲಾಗಿದೆ. ಈ ತನಿಖಾ ವರದಿ ಬಂದ ಮೇಲೆ ಭಾರತೀಯ ಕ್ರಿಕೆಟ್ ಮಂಡಳಿ ಸಭೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

ಒಂದು ವೇಳೆ ಸಿಐಡಿ ತನಿಖಾ ವರದಿಯಲ್ಲಿ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮ್ಯಾನೇಜ್ಮೆಂಟ್ ನೇರ ಕಾರಣ ಎಂಬುದು ಕಂಡು ಬಂದರೆ, ಬಿಸಿಸಿಐ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ. ಈ ಕಠಿಣ ಕ್ರಮದೊಂದಿಗೆ ಒಂದು ವರ್ಷದವರೆಗೆ ಫ್ರಾಂಚೈಸಿ ಮೇಲೆ ನಿಷೇಧ ಹೇರಿದರೂ ಅಚ್ಚರಿಪಡಬೇಕಿಲ್ಲ.

Published On - 10:33 am, Mon, 9 June 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್