BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್

| Updated By: ಝಾಹಿರ್ ಯೂಸುಫ್

Updated on: Aug 02, 2021 | 5:57 PM

Team India: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್
Follow us on

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ ಸ್ಟ್ರೆಕ್ಚರ್​ ಬದಲಿಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಇಂಡಿಯನ್ ಡೊಮೆಸ್ಟಿಕ್ ಸರ್ಕ್ಯೂಟ್​ನ ಅಂಡರ್ -23 ಚಾಂಪಿಯನ್‌ಶಿಪ್ ಬದಲಿಗೆ ಅಂಡರ್ -25 ಟೂರ್ನಮೆಂಟ್ ಆಯೋಜಿಸುವ ವಿಚಾರವನ್ನು ಚರ್ಚಿಸಲಾಗಿದೆ. ಇದರಿಂದ ಹೆಚ್ಚಿನ ಆಟಗಾರರಿಗೆ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಅವಕಾಶ ಸಿಗಲಿದೆ ಎಂಬ ಅಭಿಪ್ರಾಯ ಮೂಡಿ ಬಂದಿದೆ.

ಏಕೆಂದರೆ ಅಂಡರ್ 25 ಟೂರ್ನಮೆಂಟ್ ಆಯೋಜಿಸಿದರೆ, ರಾಜ್ಯದ ರಣಜಿ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ಯುವ ಆಟಗಾರರಿಗೆ, ಈ ಪಂದ್ಯಾವಳಿ ಮೂಲಕ ಅವಕಾಶ ಪಡೆಯಬಹುದು. ಇದರಿಂದ ಅತ್ತ ರಣಜಿ ತಂಡ ಕೂಡ ಬಲಿಷ್ಠವಾಗಿರಲಿದೆ. ಹಾಗೆಯೇ ಅಂಡರ್​-25 ತಂಡಗಳ ಮೂಲಕ ಯುವ ಪ್ರತಿಭೆಗಳನ್ನು ಸಜ್ಜುಗೊಳಿಸಬಹುದು. ಹೀಗಾಗಿ ಅಂಡರ್-23 ಚಾಂಪಿಯನ್​ಶಿಪ್ ಬದಲಿಗೆ 25 ವರ್ಷದೊಳಗಿನ ಟೂರ್ನಿ ನಡೆಸಲು ಬಿಸಿಸಿಐ ಚಿಂತಿಸಿದೆ. ಆದಾಗ್ಯೂ, ಬಿಸಿಸಿಐ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೂ ಮುನ್ನ ರಾಜ್ಯ ಕ್ರಿಕೆಟ್​ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹಿಂದೆ ಅಂಡರ್ -16 ಟೂರ್ನಮೆಂಟ್ ಅನ್ನು ಆಯೋಜಿಸುವ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದವು. ಆದರೆ ಪ್ರಸ್ತುತ ಕೊರೋನಾ ಪರಿಸ್ಥಿತಿಯನ್ನು ಗಮನಿಸಿದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ಇನ್ನೂ ಲಭ್ಯವಿಲ್ಲ. ಈ ಕಾರಣದಿಂದಾಗಿ, ಈ ಟೂರ್ನುಯನ್ನು ಕೈ ಬಿಡುವ ಸಾಧ್ಯತೆಗಳಿವೆ.

ಐಪಿಎಲ್​ಗೂ ಸಿದ್ದತೆ:
ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಎರಡನೇ ಹಂತದ ಐಪಿಎಲ್​ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಲಿದೆ. ದ್ವಿತಿಯಾರ್ಧದಲ್ಲಿ ಕೆಲವು ವಿದೇಶಿ ಆಟಗಾರರು ಭಾಗಿಯಾಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ವಿದೇಶಿ ಕ್ರಿಕೆಟ್ ಮಂಡಳಿಗಳೊಂದಿಗೆ ಬಿಸಿಸಿಐ ಮಾತುಕತೆ ನಡೆಸುತ್ತಿದೆ.

ಟಿ20 ವಿಶ್ವಕಪ್ ತಯಾರಿ:
ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ. ಈಗಾಗಲೇ ಗ್ರೂಪ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಶೀಘ್ರದಲ್ಲೇ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಲಿದೆ.

ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ

ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

(BCCI planning to change U-23 championship to U-25 tournament)