ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಸಂಗೀತ ಸಮಾರಂಭ; ಸಚಿನ್, ರಜನಿಕಾಂತ್, ಅಮಿತಾಬ್​ ಉಪಸ್ಥಿತಿ..!

India vs Pakistan, ODI World Cup 2023: ಅಕ್ಟೋಬರ್​ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಆರಂಭವಾಗುವುದಕ್ಕೂ ಮುನ್ನ ಸಂಗೀತ ಸಮಾರಂಭವನ್ನು ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಸಂಗೀತ ಸಮಾರಂಭ; ಸಚಿನ್, ರಜನಿಕಾಂತ್, ಅಮಿತಾಬ್​ ಉಪಸ್ಥಿತಿ..!
ಸಂಗೀತ ಸಮಾರಂಭImage Credit source: insidesport
Follow us
ಪೃಥ್ವಿಶಂಕರ
|

Updated on:Oct 11, 2023 | 12:13 PM

ಏಕದಿನ ವಿಶ್ವಕಪ್​ನಲ್ಲಿ (ICC world cup 2023)​ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ್ದ ಕಾರಣ ನಿರಾಸೆಗೊಳಗಾಗಿದ್ದ ಅಭಿಮಾನಿಗಳಿಗೆ ಈಗ ಸಂತಸದ ಸುದ್ದಿಯೊಂದು ಸಿಕ್ಕಿದೆ. ಇದೇ ಅಕ್ಟೋಬರ್​ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi stadium) ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಆರಂಭವಾಗುವುದಕ್ಕೂ ಮುನ್ನ ಸಂಗೀತ ಸಮಾರಂಭವನ್ನು (Musical Ceremony) ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತ-ಪಾಕಿಸ್ತಾನ  ಪಂದ್ಯದ ವೇಳೆ ಅಹಮದಾಬಾದ್‌ನಲ್ಲಿ ಬಿಸಿಸಿಐ, ಅಭಿಮಾನಿಗಳಿಗೆ ಸಂಗೀತ ಸಮಾರಂಭವನ್ನು ಆಯೋಜಿಸಲಿದೆ. ಈ ಸಮಯದಲ್ಲಿ ಲಘು ಪ್ರದರ್ಶನ ಮತ್ತು ನೃತ್ಯ ಪ್ರದರ್ಶನಗಳು ಇರಲ್ಲಿದ್ದು, ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಲೆಜೆಂಡ್​ಗಳ ಉಪಸ್ಥಿತಿ

ವಾಸ್ತವವಾಗಿ ವಿಶ್ವಕಪ್ ಆರಂಭಕ್ಕೂ ಮುನ್ನ ಬಿಸಿಸಿಐ, ಸಚಿನ್ ತೆಂಡೂಲ್ಕರ್, ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿತ್ತು. ಹೀಗಾಗಿ ಈ ಮೂವರಿಗೆ ಉದ್ಘಾಟನಾ ಸಮಾರಂಭಕ್ಕೆ  ಆಹ್ವಾನ ನೀಡಲಾಗಿದೆ. ವರದಿಗಳ ಪ್ರಕಾರ, ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ ಪಂದ್ಯ ಪ್ರಾರಂಭವಾಗುವ ಮೊದಲು ಸಂಗೀತ ಸಮಾರಂಭ ನಡೆಯಲಿದೆ. ಈ ಪಂದ್ಯವನ್ನು ವೀಕ್ಷಿಸಲು ಗೋಲ್ಡನ್ ಟಿಕೆಟ್ ಹೊಂದಿರುವವರು ಕ್ರೀಡಾಂಗಣದಲ್ಲಿ ಹಾಜರಿರುತ್ತಾರೆ ಎಂದು ಗುಜರಾತ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಪಟೇಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Asia cup 2022: ‘ಟೆನ್ಷನ್ ತೆಗೆದುಕೊಳ್ಳಬೇಡಿ, ಭಾರತ- ಪಾಕಿಸ್ತಾನ ಫೈನಲ್ ಆಡಲಿವೆ’; ರೋಹಿತ್ ಶರ್ಮಾ

25 ಪಾಕಿಸ್ತಾನಿ ಮಾಧ್ಯಮಗಳು

ಇವರಲ್ಲದೆ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಹಲವು ವಿಐಪಿಗಳು ಆಗಮಿಸುವ ಸಾಧ್ಯತೆ ಇದೆ. ಅಂದು ಬಾಲಿವುಡ್ ಸ್ಟಾರ್ಸ್ ಈವೆಂಟ್ ಮಧ್ಯಾಹ್ನ 12:40 ಕ್ಕೆ ಪ್ರಾರಂಭವಾಗಿ 1:10 ಕ್ಕೆ ಕೊನೆಗೊಳ್ಳುತ್ತದೆ. ಹಾಗೆಯೇ ಭಾರತ-ಪಾಕಿಸ್ತಾನ ಪಂದ್ಯಕ್ಕೆ 20 ರಿಂದ 25 ಪಾಕಿಸ್ತಾನಿ ಮಾಧ್ಯಮಗಳ ಪ್ರತಿನಿಧಿಗಳು ಬರಲಿದ್ದಾರೆ. ಇದಕ್ಕಾಗಿ ಅವರಿಗೆ ಅನುಮತಿ ನೀಡಲಾಗಿದ್ದು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಪಟೇಲ್ ಹೇಳಿದ್ದಾರೆ. ಈ ಪಂದ್ಯಕ್ಕೆ ಪಿಸಿಬಿಯ ಕೆಲವು ಅಧಿಕಾರಿಗಳು ಕೂಡ ಬರುವ ಸಾಧ್ಯತೆ ಇದೆ.

ಭಾರತದ್ದೇ ಮೇಲುಗೈ

ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪೈಪೋಟಿ ಇಡೀ ವಿಶ್ವದ ಗಮನ ಸೆಳೆಯುತ್ತಿರುವುದು ಇದೇ ಮೊದಲಲ್ಲ. ಈ ಉಭಯ ತಂಡಗಳ ಕಾಳಗವನ್ನು ನೋಡಲು ಇಡೀ ವಿಶ್ವವೇ ಎದುರು ನೋಡುತ್ತಿರುತ್ತದೆ. ಹೀಗಾಗಿ ಈ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. ಇನ್ನು ಏಕದಿನ ವಿಶ್ವಕಪ್‌ನಲ್ಲಿ ಇದುವರೆಗೆ ನಡೆದ ಪಂದ್ಯಗಳಲ್ಲಿ ಭಾರತವೇ ಮೇಲುಗೈ ಸಾಧಿಸಿದ್ದು, ಈ ಎರಡು ತಂಡಗಳ ನಡುವೆ ಇದುವರೆಗೆ ನಡೆದ ಏಳು ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಗೆದ್ದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Wed, 11 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್