AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಆಟಗಾರರ ಪತ್ನಿಯರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

Team India: ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸರಣಿಗಳನ್ನು ಸೋತ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಈ ಎಚ್ಚೆತ್ತುಕೊಳ್ಳುವಿಕೆಯೊಂದಿಗೆ ಇದೀಗ ಟೀಮ್ ಇಂಡಿಯಾ ಆಟಗಾರರಿಗೆ ಕೆಲ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿದ್ದು, ಈ ಮೂಲಕ ಈ ಹಿಂದೆ ನೀಡಲಾಗಿದ್ದ ವಿಶೇಷ ಸವಲತ್ತುಗಳನ್ನು ಕೊನೆಗೊಳಿಸಲು ನಿರ್ಧರಿಸಲಾಗಿದೆ.

ಟೀಮ್ ಇಂಡಿಯಾ ಆಟಗಾರರ ಪತ್ನಿಯರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ
Anushka - Ritika- Team India
ಝಾಹಿರ್ ಯೂಸುಫ್
|

Updated on: Jan 15, 2025 | 10:53 AM

Share

ಭಾರತ ತಂಡದ ಕಳಪೆ ಪ್ರದರ್ಶನದ ಬೆನ್ನಲ್ಲೇ ಬಿಸಿಸಿಐ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ತವರಿನಲ್ಲಿ ನ್ಯೂಝಿಲೆಂಡ್ ವಿರುದ್ಧ 3-0 ಅಂತರದಿಂದ ಹೀನಾಯ ಸೋಲನುಭವಿದ್ದ ಟೀಮ್ ಇಂಡಿಯಾ, ಆ ಬಳಿಕ ಆಸ್ಟ್ರೇಲಿಯಾದಲ್ಲೂ ಟೆಸ್ಟ್​ ಸರಣಿ ಸೋತಿದೆ. ಈ ಸೋಲುಗಳ ಬೆನ್ನಲ್ಲೇ ಈ ಹಿಂದೆಯಿದ್ದ ಕೆಲ ನಿಯಮಗಳನ್ನು ಮತ್ತೆ ಜಾರಿಗೊಳಿಸಲು ಬಿಸಿಸಿಐ ಮುಂದಾಗಿದೆ.

ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾದ ಪ್ರಸ್ತಾಪದ ಮಾಹಿತಿ ಪ್ರಕಾರ, ಮುಂಬರುವ ಸರಣಿಗಳ ವೇಳೆ ಟೀಮ್ ಇಂಡಿಯಾ ಆಟಗಾರರ ಪತ್ನಿಯರು ಇಡೀ ಸರಣಿಯಲ್ಲಿ ಜೊತೆಗಿರುವಂತಿಲ್ಲ. ಅಂದರೆ ಪತ್ನಿಯರು ಮತ್ತು ಕುಟುಂಬ ಸದಸ್ಯರು ಪ್ರವಾಸದ ಸಂಪೂರ್ಣ ಅವಧಿಯಲ್ಲಿ ತಂಡದೊಂದಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದಿಲ್ಲ.

45 ದಿನಗಳ ಸರಣಿಯಾಗಿದ್ದರೆ ಎರಡು ವಾರಗಳ ಕಾಲ ಜೊತೆಯಾಗಿ ಉಳಿಯಬಹುದು. ಅಲ್ಲದೆ ಅಲ್ಪಾವಧಿಯ ಸರಣಿಗಳ ವೇಳೆ ಪತ್ನಿಯರು/ಕುಟುಂಬಸ್ಥರು ಜೊತೆಗಿರಬೇಕಾದ ಮಿತಿಯನ್ನು 7 ದಿನಗಳ ಕಾಲಕ್ಕೆ ಸೀಮಿತಗೊಳಿಸಲಾಗುತ್ತದೆ.

ಈ ಹಿಂದೆ ಇಂತಹದೊಂದು ನಿಯಮ ಜಾರಿಯಲ್ಲಿತ್ತು. ಆದರೆ ಕೊರೋನಾ ಸಂದರ್ಭದಲ್ಲಿ ಆಟಗಾರರು ಬಯೋಬಬಲ್​ನಲ್ಲಿ ಹಾಯಾಗಿರುವಂತೆ ಮಾಡಲು ನಿಯಮಗಳನ್ನು ಸಡಿಲಗೊಳಿಸಲಾಯಿತು. ಇದೀಗ ಮತ್ತೆ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಬಿಸಿಸಿಐ ಮುಂದಾಗಿದೆ.

ಹೀಗಾಗಿ ಮುಂಬರುವ ಭಾರತ ತಂಡದ ಸರಣಿ ಅಥವಾ ಟೂರ್ನಿಗಳ ವೇಳೆ ಟೀಮ್ ಇಂಡಿಯಾ ಆಟಗಾರರ ಪತ್ನಿಯರು ಸಂಪೂರ್ಣ ಅವಧಿವರೆಗೆ ಜೊತೆಗಿರುವಂತಿಲ್ಲ. ಇಲ್ಲಿ ಕನಿಷ್ಠ 7 ದಿನಗಳ ಕಾಲ ಹಾಗೂ ಗರಿಷ್ಠ 14 ದಿನಗಳ ಕಾಲ ಮಿತಿಯನ್ನು ನಿಗದಿ ಪಡಿಸಲು ನಿರ್ಧರಿಸಲಾಗಿದೆ.

ಒಂದೇ ಬಸ್​ನಲ್ಲಿ ಎಲ್ಲರ ಪ್ರಯಾಣ:

ಟೀಮ್ ಇಂಡಿಯಾ ಆಟಗಾರರು ಒಂದೇ ಬಸ್​ನಲ್ಲಿ ಪ್ರಯಾಣಿಸಬೇಕೆಂಬ ನಿಯಮವನ್ನು ಸಹ ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ವಿಶೇಷ ಸವಲತ್ತುಗಳನ್ನು ಕಲ್ಪಿಸಲಾಗಿತ್ತು.

ಇದನ್ನೂ ಓದಿ: 7 ವರ್ಷಗಳ ಬಳಿಕ ರಣಜಿ ಪಂದ್ಯವಾಡಲು ಸಜ್ಜಾದ ಟೀಮ್ ಇಂಡಿಯಾ ಆಟಗಾರ

ಪ್ರತಿಯೊಬ್ಬ ಆಟಗಾರನು ತಂಡದ ಬಸ್‌ನಲ್ಲೇ ಪ್ರಯಾಣಿಸಬೇಕೆಂದು, ಪ್ರತ್ಯೇಕ ಪ್ರಯಾಣವನ್ನು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಈ ಮೂಲಕ ಟೀಮ್ ಇಂಡಿಯಾ ಆಟಗಾರರನ್ನು ಹದ್ದುಬಸ್ತಿನಲ್ಲಿಡಲು ಬಿಸಿಸಿಐ ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದೆ.

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ