AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ಸೌರವ್ ಗಂಗೂಲಿ ಹೊಸ ಯೋಜನೆ ಯಾವುದು?: ಎಲ್ಲ ಗೊಂದಲಗಳಿಗೆ ಸ್ಪಷ್ಟನೆ ನೀಡಿದ ಬಿಸಿಸಿಐ ಅಧ್ಯಕ್ಷ

ಸೌರವ್ ಗಂಗೂಲಿ (Sourav Ganguly) ಅವರು ಬುಧವಾರ ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. “ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ,” ಎಂದು ಸೌರವ್ ಗಂಗೂಲಿ ಟ್ವೀಟ್ (Tweet) ಮಾಡಿದ್ದರು.

Sourav Ganguly: ಸೌರವ್ ಗಂಗೂಲಿ ಹೊಸ ಯೋಜನೆ ಯಾವುದು?: ಎಲ್ಲ ಗೊಂದಲಗಳಿಗೆ ಸ್ಪಷ್ಟನೆ ನೀಡಿದ ಬಿಸಿಸಿಐ ಅಧ್ಯಕ್ಷ
Sourav Ganguly
TV9 Web
| Updated By: Vinay Bhat|

Updated on: Jun 02, 2022 | 8:17 AM

Share

ಭಾರತ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಬುಧವಾರ ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. “ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ,” ಎಂದು ಸೌರವ್ ಗಂಗೂಲಿ ಟ್ವೀಟ್ (Tweet) ಮಾಡಿದ್ದರು. ಇದರಿಂದ ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದವು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಎಂಬೊತ್ತಿಗೆ ಸ್ವತಃ ಸೌರವ್ ಗಂಗೂಲಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೊಸ ಉದ್ಯಮ ಎಜುಕೇಶನಲ್ ಆ್ಯಪ್ ಎಂದಿದ್ದಾರೆ.

ಸದ್ಯ ಶಿಕ್ಷಣ ಕುರಿತು ಹಲವು ಆ್ಯಪ್‌ಗಳಿವೆ. ಈ ಆ್ಯಪ್‌ಗಳಿಗೆ ಪ್ರತಿಸ್ಪರ್ಧಿಯಾಗಿ ಭಾರತದಲ್ಲಿ ಹೊಸ ಶಿಕ್ಷಣ ಆ್ಯಪ್ ಬಿಡುಗಡೆ ಮಾಡಲು ಗಂಗೂಲಿ ಮುಂದಾಗಿದ್ದಾರೆ. ಇದರ ಪ್ರಚಾರಕ್ಕಾಗಿ ಗಂಗೂಲಿ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು. ಇದು ಹಲವು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಗಂಗೂಲಿ ಉತ್ತರ ನೀಡಿ ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ
Image
Virat Kohli: ಒಬ್ಬ ಪಾಕಿಸ್ತಾನಿಯಾಗಿ ಹೇಳುತ್ತಿದ್ದೇನೆ, ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ; ಶೋಯೆಬ್ ಅಖ್ತರ್
Image
Deepak Chahar Wedding: ಜಯ ಜೊತೆ ಇಂದು ದೀಪಕ್ ಮದುವೆ! ಧೋನಿ, ಕೊಹ್ಲಿ, ರೋಹಿತ್ ಸಂಭ್ರಮದಲ್ಲಿ ಬಾಗಿ
Image
Sourav Ganguly: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ; ದಾದಾ ರಾಜೀನಾಮೆ ವದಂತಿಗೆ ತೆರೆ ಎಳೆದ ಜೈ ಶಾ
Image
Rishabh Pant: ರಿಷಬ್ ಪಂತ್ ದುರಹಂಕಾರಿ! ಅವರ ನಾಯಕತ್ವ ನನ್ನ ತಲೆ ಕೆರೆದುಕೊಳ್ಳುವಂತೆ ಮಾಡಿತು; ಆಕಾಶ ವಾಣಿ

ಸಾಕಷ್ಟು ಜನರಿಗೆ ನೆರವಾಗುವಂಥ ಕೆಲಸವನ್ನು ಮಾಡಲು ಯೋಜನೆಯನ್ನು ರೂಪಿಸುತ್ತಿದ್ದೇನೆ. ಹಾಗಾಗಿ ತಮ್ಮ ಜೀವನದ ಎರಡನೇ ಅಧ್ಯಾಯದಲ್ಲಿಯೂ ನಿಮ್ಮೆಲ್ಲರ ಬೆಂಬಲ ಮುಂದುವರಿಯಬೇಕೆಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಬುಧವಾರ ಸಂಜೆ ನಿಗೂಢ ಟ್ವೀಟ್‌ವೊಂದನ್ನು ಮಾಡಿದ್ದರು.

Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

“1992ರಲ್ಲಿ ತಮ್ಮ ಕ್ರಿಕೆಟ್‌ ವೃತ್ತಿ ಜೀವನ ಆರಂಭಗೊಂಡು 2022ಕ್ಕೆ 30 ವರ್ಷಗಳು ಕಳೆದಿವೆ. ಇಲ್ಲಿಯವರೆಗೂ ಕ್ರಿಕೆಟ್‌ ನನ್ನ ಜೀವನಕ್ಕೆ ಸಾಕಷ್ಟು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ, ಇದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ಇಂದು ಈ ಹಂತಕ್ಕೆ ತಲುಪಲು ಪ್ರತಿ ಹಂತದಲ್ಲಿಯೂ ನೆರವಾದ, ತಮ್ಮ ವೃತ್ತಿ ಬದುಕಿನ ಪಯಣದಲ್ಲಿ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಲು ಬಯಸುತ್ತೇನೆ,” ಎಂದು ಸೌರವ್‌ ಗಂಗೂಲಿ ಟ್ವೀಟ್‌ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸೌರವ್‌ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತೊರೆದು ಬಿಜೆಪಿ ಪಕ್ಷದ ಮೂಲಕ ರಾಜಕೀಯ ವೃತ್ತಿ ಜೀವನ ಆರಂಭಿಸಬಹುದೆಂದು ಅಂದಾಜಿಸಲಾಗಿತ್ತು. ಸಾಮಾಜಿಕ ತಾಣಗಳು ಮತ್ತು ಕೆಲ ಸುದ್ದಿ ಮಾಧ್ಯಮಗಳಲ್ಲಿ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿ ಕೂಡ ಮಾಡಿದವು. ಇದರ ಬೆನ್ನಲ್ಲೇ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?