AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಏಷ್ಯಾಕಪ್ ಟ್ರೋಫಿಗಳು ಭಾರತಕ್ಕೆ ಬರುವುದು ಯಾವಾಗ? ಬಿಸಿಸಿಐ ಹೇಳಿದ್ದಿದು

ಟೀಂ ಇಂಡಿಯಾ ಸತತ ಎರಡು ಏಷ್ಯಾಕಪ್ ಗೆದ್ದರೂ, ಎಸಿಸಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ್ದರಿಂದ ಟ್ರೋಫಿ ಇನ್ನೂ ಭಾರತಕ್ಕೆ ಬಂದಿಲ್ಲ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಈ ಟ್ರೋಫಿಗಳು ಖಂಡಿತಾ ಭಾರತಕ್ಕೆ ಮರಳುತ್ತವೆ ಎಂದು ಭರವಸೆ ನೀಡಿದ್ದಾರೆ. ಆದರೆ, ಯಾವಾಗ ಎಂಬ ಸಮಯ ನಿಗದಿಪಡಿಸಿಲ್ಲ. ಮಹಿಳಾ ತಂಡದ ಏಷ್ಯನ್ ಗೇಮ್ಸ್ ಚಿನ್ನದ ಪದಕದ ನಿರೀಕ್ಷೆಯನ್ನೂ ವ್ಯಕ್ತಪಡಿಸಿದ್ದಾರೆ.

2 ಏಷ್ಯಾಕಪ್ ಟ್ರೋಫಿಗಳು ಭಾರತಕ್ಕೆ ಬರುವುದು ಯಾವಾಗ? ಬಿಸಿಸಿಐ ಹೇಳಿದ್ದಿದು
ದೇವಜಿತ್ ಸೈಕಿಯಾImage Credit source: PTI
ಪೃಥ್ವಿಶಂಕರ
|

Updated on:Sep 18, 2026 | 10:40 PM

Share

ಟೀಂ ಇಂಡಿಯಾ ಸತತ ಎರಡು ಬಾರಿ ಏಷ್ಯಾಕಪ್ ಗೆದ್ದುಕೊಂಡಿದೆ. ಕಳೆದ ವರ್ಷ ಪುರುಷರ ತಂಡ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇನ್ನು ಈ ವರ್ಷ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಆದರೆ ಈ ಎರಡೂ ತಂಡಗಳಿಗೆ ಇದುವರೆಗೆ ಟ್ರೋಫಿಯನ್ನು ಹಿಡಿದು ಸಂಭ್ರಮಿಸುವ ಅವಕಾಶ ಸಿಕ್ಕಿಲ್ಲ. ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಕೈನಿಂದ ಟ್ರೋಫಿ ಸ್ವೀಕರಿಸಲು ಸಿದ್ಧವಿಲ್ಲದ ಟೀಂ ಇಂಡಿಯಾ ಖಾಲಿ ಕೈಯಲ್ಲಿ ತವರಿಗೆ ಮರಳಿತ್ತು. ಇದೀಗ ಈ ಎರಡು ಟ್ರೋಫಿಗಳ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಎರಡೂ ಟ್ರೋಫಿಗಳು ಒಂದು ದಿನ ಭಾರತಕ್ಕೆ ಮರಳುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೂ ಟ್ರೋಫಿ ಭಾರತಕ್ಕೆ ಬರಲು ಇನ್ನೇಷ್ಟು ಸಮಯ ಬೇಕು ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.

ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು?

ಟೀಂ ಇಂಡಿಯಾ ಗೆದ್ದ ಎರಡೂ ಏಷ್ಯಾಕಪ್ ಟ್ರೋಫಿಗಳನ್ನು ಶೀಘ್ರದಲ್ಲೇ ದೇಶಕ್ಕೆ ತರಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಭರವಸೆ ನೀಡಿದ್ದಾರೆ. ಆದಾಗ್ಯೂ, ಟ್ರೋಫಿ ಭಾರತಕ್ಕೆ ಬರಲು ಇನ್ನೇಷ್ಟು ಸಮಯ ಬೇಕು ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ. ಬಿಸಿಸಿಐನ 95 ನೇ ವಾರ್ಷಿಕ ಮಹಾಸಭೆಯ ಸಭೆಯ ನಂತರ ಮಾತನಾಡಿದ ಸೈಕಿಯಾ, ‘ಏಷ್ಯಾಕಪ್ ಟ್ರೋಫಿಗಳು ಖಂಡಿತವಾಗಿಯೂ ಒಂದು ದಿನ ಭಾರತಕ್ಕೆ ಬರುತ್ತವೆ. ಆದರೆ ಅವು ಯಾವಾಗ ಭಾರತಕ್ಕೆ ಬರುತ್ತವೆ ಎಂಬುದಕ್ಕೆ ನಾನು ನಿಮಗೆ ಸಮಯ ಚೌಕಟ್ಟನ್ನು ನೀಡುವುದಿಲ್ಲ. ಆದರೆ ಎರಡೂ ಟ್ರೋಫಿಗಳು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐ ಕಚೇರಿಯನ್ನು ತಲುಪುತ್ತವೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ’ ಎಂದಿದ್ದಾರೆ.

2025 ರಲ್ಲಿ ಭಾರತೀಯ ಪುರುಷರ ತಂಡ ಮತ್ತು 2026 ರಲ್ಲಿ ಮಹಿಳಾ ತಂಡ ಏಷ್ಯಾಕಪ್ ಗೆದ್ದಿವೆ. ಆದರೆ ಎರಡೂ ತಂಡಗಳು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದವು. ಪರಿಣಾಮವಾಗಿ, ಎರಡೂ ತಂಡಗಳು ಟ್ರೋಫಿ ಇಲ್ಲದೆ ಹಿಂತಿರುಗಿದವು. ಈಗ, ಬಿಸಿಸಿಐ ಎರಡೂ ಟ್ರೋಫಿಗಳನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ತರಲು ಕೆಲಸ ಮಾಡುತ್ತಿದೆ.

ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ ಗೆದ್ದರೂ ಕಪ್ ಸ್ವೀಕರಿಸದ ಟೀಂ ಇಂಡಿಯಾ! ಬಿಸಿಸಿಐ ಕೊಟ್ಟ ಕಾರಣ ಇಲ್ಲಿದೆ

ಚಿನ್ನದ ಪದಕ ಗೆಲ್ಲಬಹುದು – ದೇವಜಿತ್ ಸೈಕಿಯಾ

ಇನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರದರ್ಶನದ ಬಗ್ಗೆಯೂ ಮಾತನಾಡಿದ ಸೈಕಿಯಾ, ‘ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ತಂಡವು ಚಿನ್ನದ ಪದಕ ಗೆಲ್ಲಬಹುದು ಎಂದು ಬಿಸಿಸಿಐ ವಿಶ್ವಾಸ ಹೊಂದಿದೆ. ಭಾರತೀಯ ಮಹಿಳಾ ತಂಡವು ಜಪಾನ್ ವಿರುದ್ಧದ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದಿದೆ. ಹೀಗಾಗಿ ಸೆಪ್ಟೆಂಬರ್ 22 ರಂದು ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಖಂಡಿತವಾಗಿಯೂ ಚಿನ್ನದ ಪದಕ ಗೆಲ್ಲುತ್ತದೆ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Fri, 18 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!