AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Shami: ಮೊಹಮ್ಮದ್ ಶಮಿ ಚೇತರಿಕೆಯ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಬಿಸಿಸಿಐ

Mohammed Shami: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಿರುವ ಬಿಸಿಸಿಐ, ಇದರೊಂದಿಗೆ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಚೇತರಿಕೆಯ ಬಗ್ಗೆಯೂ ಮಾಹಿತಿ ನೀಡಿದೆ.

Mohammed Shami: ಮೊಹಮ್ಮದ್ ಶಮಿ ಚೇತರಿಕೆಯ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಬಿಸಿಸಿಐ
ಮೊಹಮ್ಮದ್ ಶಮಿ
ಪೃಥ್ವಿಶಂಕರ
|

Updated on:Feb 29, 2024 | 8:05 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಿರುವ ಬಿಸಿಸಿಐ (BCCI), ಇದರೊಂದಿಗೆ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಅವರ ಚೇತರಿಕೆಯ ಬಗ್ಗೆಯೂ ಮಾಹಿತಿ ನೀಡಿದೆ. ವಾಸ್ತವವಾಗಿ ಮೊಹಮ್ಮದ್ ಶಮಿ ಫೆಬ್ರವರಿ 26 ರಂದು ಲಂಡನ್‌ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಮೂರು ದಿನಗಳ ನಂತರ, ಅಂದರೆ ಫೆಬ್ರವರಿ 29 ರಂದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪತ್ರಿಕಾ ಪ್ರಕಟಣೆಯ ಮೂಲಕ ಮೊಹಮ್ಮದ್ ಶಮಿ ಚೇತರಿಕೆಯ ಬಗ್ಗೆ ದೊಡ್ಡ ನವೀಕರಣವನ್ನು ನೀಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫೆಬ್ರವರಿ 26 ರಂದು ಶಮಿ ಅವರಿಗೆ ಪಾದದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಅವರು ಗಾಯದಿಂದ ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಮೊಹಮ್ಮದ್ ಶಮಿ ಅವರು ಚೇತರಿಸಿಕೊಂಡ ನಂತರ ಅವರನ್ನು ಶೀಘ್ರದಲ್ಲೇ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಅಲ್ಲದೆ 2024ರ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರನ್ನು ಕೂಡಲೇ ಎನ್​ಸಿಎನಲ್ಲಿ ರಿಹ್ಯಾಬ್​ಗೆ ಕಳುಹಿಸಲು ಬಿಸಿಸಿಐ ಮುಂದಾಗಿದೆ.

ಐಪಿಎಲ್​ನಿಂದ ಶಮಿ ಔಟ್

ಇದೀಗ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಹಮ್ಮದ್ ಶಮಿ ಮುಂಬರುವ ಐಪಿಎಲ್‌ನಿಂದ ಹೊರಗುಳಿಯಲ್ಲಿದ್ದಾರೆ. ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ, ಲೀಗ್‌ನಿಂದ ಹೊರಬಿದ್ದಿರುವುದು ಗುಜರಾತ್ ಟೈಟಾನ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ. ಗುಜರಾತ್ ಟೈಟಾನ್ಸ್ 2022ರಲ್ಲಿ ಮೊಹಮ್ಮದ್ ಶಮಿಯನ್ನು 6.25 ಕೋಟಿ ರೂ.ಗೆ ಖರೀದಿಸಿತ್ತು. ಅದರ ನಂತರ ಈ ತಂಡದ ಪರ 2022 ಮತ್ತು 2023 ಆವೃತ್ತಿಯಲ್ಲಿ 33 ಪಂದ್ಯಗಳನ್ನು ಆಡಿರುವ ಶಮಿ ಇದರಲ್ಲಿ 48 ವಿಕೆಟ್ ಪಡೆದಿದ್ದಾರೆ.

ಅಲ್ಲದೆ ಶಮಿ ಕಳೆದ ಆವೃತ್ತಿಯಲ್ಲಿ ಅಂದರೆ 2023 ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದರು. ಈ ಆವೃತ್ತಿಯಲ್ಲಿ ಆಡಿದ್ದ 17 ಪಂದ್ಯಗಳಲ್ಲಿ 28 ವಿಕೆಟ್‌ಗಳನ್ನು ಕಬಳಿಸಿದ್ದರು. ಇದೀಗ ಅವರು ಸಂಪೂರ್ಣ ಐಪಿಎಲ್‌ನಿಂದ ಹೊರಗುಳಿದಿರುವುದು ಗುಜರಾತ್ ಟೈಟಾನ್ಸ್ ತಂಡದ ಬೌಲಿಂಗ್ ವಿಭಾಗದ ಶಕ್ತಿಯನ್ನು ಕುಂದಿಸಿದೆ. ಶಮಿ ಅಲ್ಲದೆ ತಂಡದ ಮತ್ತೊಬ್ಬ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಆಡುವ ಬಗ್ಗೆಯೂ ಸಸ್ಪೆನ್ಸ್ ಇದೆ. ಏಕೆಂದರೆ ರಶೀದ್ ಖಾನ್ ಕೂಡ ಬಹಳ ಸಮಯದಿಂದ ಗಾಯದಿಂದ ಬಳಲುತ್ತಿದ್ದಾರೆ.

IND vs ENG: ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ಕನ್ನಡಿಗ ಕೆಎಲ್ ರಾಹುಲ್..!

ಐದನೇ ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Thu, 29 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ