IND vs PAK: ಶಾಕಿಂಗ್ ನಿರ್ಧಾರ: ಸ್ಟಾರ್ ಆಲ್ರೌಂಡರ್ನನ್ನೇ ಕೈ ಬಿಟ್ರಾ ಟೀಮ್ ಇಂಡಿಯಾ..?
India vs Pakistan: ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.
Asia Cup 2022: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೊಲ್ಟೇಜ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ದುಬೈ ಇಂಟರ್ನ್ಯಾಷನ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಪ್ರಶ್ನೆ. ಏಕೆಂದರೆ ಬಿಸಿಸಿಐ ಹಂಚಿಕೊಂಡಿರುವ ಫೋಟೋವೊಂದರಲ್ಲಿ 11 ಆಟಗಾರರನ್ನು ಹೆಸರಿಸಲಾಗಿದೆ.
ಇದೇ ಆಟಗಾರರು ಪಾಕ್ ವಿರುದ್ದ ಕೂಡ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಅಂದರೆ ಬಿಸಿಸಿಐ ಟೀಮ್ ಇಂಡಿಯಾದ 11 ಆಟಗಾರರು ಅಭ್ಯಾಸ ಮಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಮೂಲಕ ಪ್ಲೇಯಿಂಗ್ ಇಲೆವೆನ್ನ ಸುಳಿವು ನೀಡಿದೆ.
ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.
ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದರೆ, 7ನೇ ಕ್ರಮಾಂಕದಲ್ಲಿ ಫಿನಿಶರ್ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಲಿದ್ದಾರೆ.
ಹಾಗೆಯೇ ಬೌಲರ್ಗಳಾಗಿ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಹಾಗೂ ಯುಜ್ವೇಂದ್ರ ಚಹಾಲ್ ಅವರನ್ನು ಹೆಸರಿಸಲಾಗಿದೆ. ಈ ಮೂಲಕ 7 ಬ್ಯಾಟ್ಸ್ಮನ್ಗಳು ಹಾಗೂ ನಾಲ್ವರು ಬೌಲರ್ಗಳನ್ನು ಕಣಕ್ಕಿಳಿಸುವ ಸುಳಿವು ನೀಡಿದೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್.
ಆದರೆ ಟೀಮ್ ಇಂಡಿಯಾದ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ಫೋಟೋದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಇಲ್ಲ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಜಡೇಜಾ ಅವರನ್ನು ಪ್ಲೇಯಿಂಗ್ ಇಲೆವೆನ್ಗೆ ಪರಿಗಣಿಸಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಟೀಮ್ ಇಂಡಿಯಾ ಮೂವರು ಪರಿಪೂರ್ಣ ವೇಗಿಗಳೊಂದಿಗೆ ಕಣಕ್ಕಿಳಿಯಬೇಕಿದ್ದರೆ ಓರ್ವ ಆಲ್ರೌಂಡರ್ ಅಥವಾ ವಿಕೆಟ್ ಕೀಪರ್ ಹೊರಗುಳಿಯಬೇಕಾಗುತ್ತದೆ. ಅದರಂತೆ ಇದೀಗ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಪರಿಗಣಿಸಿ, ರವೀಂದ್ರ ಜಡೇಜಾ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ.
ಆದರೆ ಟೀಮ್ ಇಂಡಿಯಾ ಪರ ಡೆತ್ ಓವರ್ಗಳಲ್ಲಿ ಸ್ಪೋಟಕ ಬ್ಯಾಟ್ ಬೀಸಬಲ್ಲ, ಅತ್ಯುತ್ತಮ ಫೀಲ್ಡಿಂಗ್ ಮಾಡಬಲ್ಲ, ಸ್ಪಿನ್ ಮೋಡಿ ಮೂಲಕ ಎದುರಾಳಿಗಳನ್ನು ಕಟ್ಟಿಹಾಕಬಲ್ಲ ರವೀಂದ್ರ ಜಡೇಜಾರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಟ್ಟರೆ ಅದು ಎದುರಾಳಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.
View this post on Instagram
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
- ರೋಹಿತ್ ಶರ್ಮಾ
- ಕೆಎಲ್ ರಾಹುಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ಹಾರ್ದಿಕ್ ಪಾಂಡ್ಯ
- ರಿಷಭ್ ಪಂತ್
- ದಿನೇಶ್ ಕಾರ್ತಿಕ್
- ಭುವನೇಶ್ವರ್ ಕುಮಾರ್
- ಯುಜ್ವೇಂದ್ರ ಚಹಾಲ್
- ಅವೇಶ್ ಖಾನ್
- ಅರ್ಷದೀಪ್ ಸಿಂಗ್
Published On - 6:32 pm, Sat, 27 August 22