‘ಬಿಸಿಸಿಐ ಹಣದಿಂದ ಪಾಕ್ ಕ್ರಿಕೆಟಿಗರು ಬದುಕುತ್ತಿದ್ದಾರೆ’! ಶೋಯೆಬ್ ಅಖ್ತರ್ ಸ್ಫೋಟಕ ಹೇಳಿಕೆ

Shoaib Akhtar: ಬಿಸಿಸಿಐ ಪ್ರಸ್ತುತ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿದೆ. ಐಸಿಸಿಯ ಆದಾಯಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಅತಿ ಹೆಚ್ಚು ಕೊಡುಗೆ ನೀಡುತ್ತಿದೆ. ಭಾರತದಿಂದ ಪಾಕಿಸ್ತಾನ ಮಾತ್ರವಲ್ಲದೆ ಹಲವು ಕ್ರಿಕೆಟ್ ಮಂಡಳಿಗಳು ನೆರವು ಪಡೆಯುತ್ತಿವೆ ಎಂದು ಶೋಯೆಬ್ ಹೇಳಿದ್ದಾರೆ.

‘ಬಿಸಿಸಿಐ ಹಣದಿಂದ ಪಾಕ್ ಕ್ರಿಕೆಟಿಗರು ಬದುಕುತ್ತಿದ್ದಾರೆ’! ಶೋಯೆಬ್ ಅಖ್ತರ್ ಸ್ಫೋಟಕ ಹೇಳಿಕೆ
ಶೋಯೆಬ್ ಅಖ್ತರ್
Follow us
ಪೃಥ್ವಿಶಂಕರ
|

Updated on:Aug 19, 2023 | 8:09 AM

ಒಂದಿಲ್ಲೊಂದು ಹೇಳಿಕೆ ಮೂಲಕ ಸದಾ ಸುದ್ದಿಯಲ್ಲಿರುವ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ (Shoaib Akhtar) ಏಷ್ಯಾಕಪ್ (Asia Cup 2023) ಹಾಗೂ ವಿಶ್ವಕಪ್ (ODI World Cup 2023) ಆರಂಭಕ್ಕೂ ಮುನ್ನ ಮತ್ತೊಂದು ಆಘಾತಕ್ಕಾರಿ ಹೇಳಿಕೆ ನೀಡಿದ್ದಾರೆ. ಶೋಯೆಬ್ ನೀಡಿದ ಈ ಹೇಳಿಕೆ ಪಾಕಿಸ್ತಾನದಲ್ಲಿ ಹಾಗೂ ಪಾಕ್ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಯಾಗಿದೆ. ವಾಸ್ತವವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅಖ್ತರ್, ಪಾಕಿಸ್ತಾನದ ಆಟಗಾರರು ಭಾರತದ ಹಣದಿಂದ ಬದುಕುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಪಾಕ್ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿದೆ.

ವಾಸ್ತವವಾಗಿ ಅಖ್ತರ್, ಹಿರಿಯ ಕ್ರೀಡಾ ಪತ್ರಕರ್ತ ಬೋರಿಯಾ ಮಜುಂದಾರ್ ಅವರೊಂದಿಗೆ ವಿಶೇಷ ಸಂವಾದದಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಬಿಸಿಸಿಐ ಎಷ್ಟು ಪ್ರಬಲವಾಗಿದೆ ಎಂಬ ಪ್ರಶ್ನೆಯನ್ನು ಶೋಯೆಬ್ ಅಖ್ತರ್​ಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅಖ್ತರ್, ಭಾರತೀಯ ಕ್ರಿಕೆಟ್ ಮಂಡಳಿಯ ಮೂಲಕ ಐಸಿಸಿ ಗಳಿಸುವ ಆದಾಯದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪಾಲು ಪಡೆಯುತ್ತದೆ. ಐಸಿಸಿಯಿಂದ ಪಡೆದ ಈ ಹಣದಿಂದಾಗಿ ಪಿಸಿಬಿ ದೇಶೀಯ ಕ್ರಿಕೆಟಿಗರಿಗೆ ಪಂದ್ಯ ಶುಲ್ಕವನ್ನು ಪಾವತಿಸಲು ಸಾಧ್ಯವಾಗುತ್ತದೆ.

Shoaib Akhtar: ಶೋಯೆಬ್ ಅಖ್ತರ್ ಬಯೋಪಿಕ್​ಗೆ ಹೀರೋ ಫಿಕ್ಸ್; ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರದ ನಾಯಕ

ಬಿಸಿಸಿಐ ಪ್ರಸ್ತುತ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿದೆ. ಐಸಿಸಿಯ ಆದಾಯಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಅತಿ ಹೆಚ್ಚು ಕೊಡುಗೆ ನೀಡುತ್ತಿದೆ. ಭಾರತದಿಂದ ಪಾಕಿಸ್ತಾನ ಮಾತ್ರವಲ್ಲದೆ ಹಲವು ಕ್ರಿಕೆಟ್ ಮಂಡಳಿಗಳು ನೆರವು ಪಡೆಯುತ್ತಿವೆ ಎಂದು ಶೋಯೆಬ್ ಹೇಳಿದ್ದಾರೆ.

2023ರ ವಿಶ್ವಕಪ್ ಸೂಪರ್ ಹಿಟ್ ಆಗಲಿದೆ

ಇದಲ್ಲದೆ ವಿಶ್ವಕಪ್ ಬಗ್ಗೆಯೂ ಮಾತನಾಡಿದ ಅಖ್ತರ್, 2023ರ ವಿಶ್ವಕಪ್ ಸೂಪರ್ ಹಿಟ್ ಆಗಲಿದೆ. ಈ ವಿಶ್ವಕಪ್‌ನಿಂದ ಬಿಸಿಸಿಐ ಸಾಕಷ್ಟು ಹಣ ಗಳಿಸಲಿದೆ ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ. ಇದರೊಂದಿಗೆ ಬಿಸಿಸಿಐನ ಆರ್ಥಿಕ ಸ್ಥಿತಿ ಗಟ್ಟಿಯಾಗಲಿದೆ ಎಂದಿದ್ದಾರೆ. ಈ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತುಂಬಾ ರೋಚಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ಭಾರತ ಈ ಬಾರಿಯ ವಿಶ್ವಕಪ್‌ನಿಂದ ಸಾಕಷ್ಟು ಹಣ ಗಳಿಸಬೇಕೆಂದು ನಾನು ಬಯಸುತ್ತೇನೆ. ಅನೇಕರು ಇದನ್ನು ಹೇಳುವುದಿಲ್ಲ ಆದರೆ ಐಸಿಸಿಯಲ್ಲಿ ಭಾರತ ಗಳಿಸುವ ಪಾಲು ಪಾಕಿಸ್ತಾನಕ್ಕೂ ಸಿಗುತ್ತದೆ ಎಂದು ನಾನು ಹಿಂಜರಿಕೆಯಿಲ್ಲದೆ ಹೇಳುತ್ತೇನೆ. ಈ ಹಣದಿಂದ, ನಮ್ಮ ದೇಶೀಯ ಕ್ರಿಕೆಟಿಗರು ತಮ್ಮ ಪಂದ್ಯದ ಶುಲ್ಕವನ್ನು ಪಡೆದು ತಮ್ಮ ಮನೆಗಳನ್ನು ನಡೆಸುತ್ತಾರೆ ಎಂದು ಅಖ್ತರ್ ಹೇಳಿದ್ದಾರೆ.

ಈ ಬಾರಿಯ ವಿಶ್ವಕಪ್ ಭಾರತದಲ್ಲಿ ನಡೆಯಲಿದ್ದು, ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿದೆ. ಉಭಯ ತಂಡಗಳು ಸೆಮಿಫೈನಲ್ ಅಥವಾ ಫೈನಲ್ ತಲುಪಿದರೆ ಅಲ್ಲಿಯೂ ಭಾರತ-ಪಾಕಿಸ್ತಾನ ಪೈಪೋಟಿ ಕಾಣಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 am, Sat, 19 August 23

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ