World Cup 2023: ಏಕದಿನ ವಿಶ್ವಕಪ್‌ಗಾಗಿ ಕ್ರಿಕೆಟ್ ದೇವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ

ICC ODI World Cup 2023: ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯಡಿಯಲ್ಲಿ ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

World Cup 2023: ಏಕದಿನ ವಿಶ್ವಕಪ್‌ಗಾಗಿ ಕ್ರಿಕೆಟ್ ದೇವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ
ಸಚಿನ್ ತೆಂಡೂಲ್ಕರ್, ಜಯ್​ ಶಾ
Follow us
|

Updated on:Sep 08, 2023 | 12:15 PM

ಮುಂದಿನ ತಿಂಗಳಿನಿಂದ ಅಂದರೆ ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ (ICC ODI World Cup 2023) ಆರಂಭವಾಗುತ್ತಿದೆ. ಕ್ರಿಕೆಟ್​ನ ಈ ಮಹಾ ಸಂಭ್ರಮಕ್ಕೆ ಬಿಸಿಸಿಐ (BCCI) ಎಲ್ಲಾ ರೀತಿಯ ತಯಾರಿಯಲ್ಲಿ ನಿರತವಾಗಿದೆ. ಈ ವಿಶ್ವ ಸಮರ ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದ್ದು, ಈ ಐಸಿಸಿ ಈವೆಂಟ್​ನಲ್ಲಿ 10 ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಈ ವಿಶ್ವಕಪ್​ಗೆ ಆತಿಥ್ಯವಹಿಸುತ್ತಿದೆ. ಹೀಗಾಗಿ ಈ ಪಂದ್ಯಾವಳಿಯನ್ನು ಸ್ಮರಣೀಯಗೊಳಿಸುವ ಸಲುವಾಗಿ ಬಿಸಿಸಿಐ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಅದರಲ್ಲಿ ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan ) ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

ಅಮಿತಾಭ್ ಬಚ್ಚನ್ ಅವರಿಗೂ ಗೋಲ್ಡನ್ ಟಿಕೆಟ್

ಈ ಮಾಹಿತಿಯನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರತೀಯ ಕ್ರಿಕೆಟ್ ಐಕಾನ್‌ಗೆ ವಿಶೇಷ ಟಿಕೆಟ್‌ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ವಕಪ್ ಗೋಲ್ಡನ್ ಟಿಕೆಟ್ ನೀಡಿರುವ ಫೋಟೋವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಾರದ ಆರಂಭದಲ್ಲಿ ಬಿಸಿಸಿಐ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ಪಂದ್ಯಾವಳಿಗೆ ಆಹ್ವಾನ ನೀಡಿತ್ತು.

2015 ರ ವಿಶ್ವಕಪ್​ನ ರಾಯಭಾರಿಯಾಗಿದ್ದ ಸಚಿನ್

ಇನ್ನು 2011ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಸಚಿನ್ ತೆಂಡೂಲ್ಕರ್ ಅವರು 2015 ರ ವಿಶ್ವಕಪ್​ನ ರಾಯಭಾರಿ ಕೂಡ ಆಗಿದ್ದರು. ಹಾಗೆಯೇ ನಾಲ್ಕು ವರ್ಷಗಳ ನಂತರ ನಡೆದ 2019 ರ ವಿಶ್ವಕಪ್ ಸೆಮಿಫೈನಲ್‌ ಪಂದ್ಯದ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದ ತೆಂಡೂಲ್ಕರ್, ಆ  ಆವೃತ್ತಿಯ ರನ್ನರ್ ಅಪ್ ತಂಡವಾಗಿದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್‌ಗೆ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ನೀಡಿದ್ದರು.

ಸಚಿನ್ ತೆಂಡೂಲ್ಕರ್ ಮನೆಯ ಮುಂದೆ ಶಾಸಕರಿಂದ ಪ್ರತಿಭಟನೆ! ಕಾರಣವೇನು ಗೊತ್ತಾ?

ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭ

ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಂದು ಅಹಮದಾಬಾದ್‌ನಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ ಅಪ್ ತಂಡವಾಗಿದ್ದ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಾವಳಿಯು ರೌಂಡ್-ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಲೀಗ್ ಹಂತದಲ್ಲಿ ಎಲ್ಲಾ 10 ತಂಡಗಳು ಒಮ್ಮೆ ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೇರಲಿವೆ. ಸೆಮಿಫೈನಲ್​ನಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಹೋರಾಡಲಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Fri, 8 September 23