ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್

India vs Australia: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ 6.20 ಸರಾಸರಿಯಲ್ಲಿ ರನ್ ಕಲೆಹಾಕಿದರೆ, ವಿರಾಟ್ ಕೊಹ್ಲಿ 8 ಏಳು ಇನಿಂಗ್ಸ್​ಗಳಲ್ಲಿ ಕೇವಲ 11.25 ರ ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಅತ್ತ ಕಳಪೆ ಫಾರ್ಮ್​ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್​ನಿಂದ ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಡಿಸಲು ಬಿಸಿಸಿಐ ನಿರ್ಧರಿಸಿದೆ.

ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್
Rohit Sharma - Virat Kohli
Follow us
ಝಾಹಿರ್ ಯೂಸುಫ್
|

Updated on: Jan 05, 2025 | 1:54 PM

3 ಪಂದ್ಯಗಳು, 5 ಇನಿಂಗ್ಸ್​ 31 ರನ್​ಗಳು. ಇದು ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಲೆಹಾಕಿದ ಒಟ್ಟು ರನ್​ಗಳು. 6.20 ಸರಾಸರಿಯಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಕಾರಣ ಇದೀಗ 5ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಡಲಾಗಿತ್ತು. ಅಲ್ಲಿಗೆ ಹಿಟ್​ಮ್ಯಾನ್​ನ ಟೆಸ್ಟ್ ಕೆರಿಯರ್ ಖತಂ ಆಗುವುದು ಬಹುತೇಕ ಖಚಿತವಾಗಿದೆ. ಈ ಕೆರಿಯರ್ ಖತಂ ಸುದ್ದಿ ಬೆನ್ನಲ್ಲೇ ನಾನು ಸದ್ಯ ನಿವೃತ್ತಿ ನೀಡುತ್ತಿಲ್ಲ ಎಂದು ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಆದರೆ ಅವರನ್ನು ಮುಂಬರುವ ಟೆಸ್ಟ್​ ಸರಣಿ ಆಯ್ಕೆ ಮಾಡುವುದು ಅನುಮಾನ. ಇದರ ಜೊತೆಗೆ ವಿರಾಟ್ ಕೊಹ್ಲಿ ಕೂಡ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ನೀವು ಭಾರತ ಟೆಸ್ಟ್ ತಂಡದ ಭಾಗವಾಗುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾಗೆ ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಚರ್ಚಿಸಲೆಂದೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಮೆಲ್ಬೋರ್ನ್​ಗೆ ತೆರಳಿದ್ದರು ಎಂದು ವರದಿಯಾಗಿದೆ.

ಅಜಿತ್ ಅಗರ್ಕರ್ ಅವರ ಈ ಭೇಟಿ ಬೆನ್ನಲ್ಲೇ ರೋಹಿತ್ ಶರ್ಮಾ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಧಾರದೊಂದಿಗೆ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಬಿಸಿಸಿಐ ಮೂಲಗಳ ಪ್ರಕಾರ, ಭಾರತ ತಂಡ ಮುಂದಿನ ಟೆಸ್ಟ್​ ಸರಣಿಗೆ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವುದಿಲ್ಲ. ಅಲ್ಲಿಗೆ ವೈಟ್ ಜೆರ್ಸಿಯಲ್ಲಿ ಹಿಟ್​ಮ್ಯಾನ್ ಯುಗಾಂತ್ಯ ಎಂದೇ ಹೇಳಬಹುದು.

ರೋಹಿತ್ ಶರ್ಮಾ ವಿಷಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡಿರುವ ಬಿಸಿಸಿಐ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿಯೊಂದಿಗೆ ಟೀಮ್ ಇಂಡಿಯಾ ಆಯ್ಕೆ ಸಮಿತಿ ಚರ್ಚಿಸಲಿದ್ದು, ಆ ಬಳಿಕ ನಿವೃತ್ತಿಗೆ ಗಡುವು ವಿಧಿಸುವ ಸಾಧ್ಯತೆಯಿದೆ.

ಅದರಂತೆ ಈ ವರ್ಷ ನಡೆಯಲಿರುವ 10 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿಯ ಟೆಸ್ಟ್ ಕೆರಿಯರ್​ನ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು. ಅದಕ್ಕೂ ಮುನ್ನ ಕಿಂಗ್ ಕೊಹ್ಲಿ ತನ್ನ ಭರ್ಜರಿ ಫಾರ್ಮ್ ಅನ್ನು ಪ್ರದರ್ಶಿಸಲೇಬೇಕು.

ಹೀಗಾಗಿ ಮುಂಬರುವ ಸರಣಿಗಳು ವಿರಾಟ್ ಕೊಹ್ಲಿ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು. ಈ ಅಗ್ನಿ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕೆರಿಯರ್​ ಅನ್ನು ವಿಸ್ತರಿಸಲಿದ್ದಾರಾ ಅಥವಾ ಶೀಘ್ರದಲ್ಲೇ ಗುಡ್ ಬೈ ಹೇಳಲಿದ್ದಾರಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿಯ ಪ್ರಸ್ತುತ ಪ್ರದರ್ಶನ:

ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ವಿರಾಟ್ ಕೊಹ್ಲಿ 5 ಪಂದ್ಯಗಳನ್ನಾಡಿದ್ದಾರೆ. ಈ ಐದು ಮ್ಯಾಚ್​ನಲ್ಲಿ 9 ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 190 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಕೂಡ ಸೇರಿದೆ.

ಇದನ್ನೂ ಓದಿ: ಹೀನಾಯ ಸೋಲುಗಳ ಸರಮಾಲೆ: ಟೀಮ್ ಇಂಡಿಯಾಗೆ ‘ಗಂಭೀರ’ ಸಮಸ್ಯೆ

ಅಂದರೆ ಪರ್ತ್​ ಟೆಸ್ಟ್ ಪಂದ್ಯದಲ್ಲಿ ಬಾರಿಸಿದ 100 ರನ್​​ಗಳ ಬಳಿಕ ವಿರಾಟ್ ಕೊಹ್ಲಿಯ ಬ್ಯಾಟ್ ಸದ್ದು ಮಾಡಿಲ್ಲ. ಪರಿಣಾಮ 8 ಇನಿಂಗ್ಸ್​ಗಳಿಂದ ಕೊಹ್ಲಿ ಕಲೆಹಾಕಿರುವುದು ಕೇವಲ 90 ರನ್​​ಗಳು ಮಾತ್ರ. ಅಂದರೆ ಕಳೆದ ಏಳು ಇನಿಂಗ್ಸ್​ಗಳಿಂದ ವಿರಾಟ್ ಕೊಹ್ಲಿ ಕೇವಲ 12 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದಾರೆ. ಹೀಗಾಗಿಯೇ ಇದೀಗ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು