KL Rahul: ಭಾರತ ತಂಡದಿಂದ ಔಟ್: ಜರ್ಮನಿಗೆ ತೆರಳಿರುವ ಕೆಎಲ್ ರಾಹುಲ್

| Updated By: ಝಾಹಿರ್ ಯೂಸುಫ್

Updated on: Jun 16, 2022 | 3:03 PM

ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗಳನ್ನು ಆಡಲಿದೆ. ಮತ್ತೊಂದೆಡೆ ಇದೇ ತಿಂಗಳು 26 ಮತ್ತು 28 ರಂದು ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ದ ಟಿ20 ಸರಣಿ ಆಡಲಿದೆ.

KL Rahul: ಭಾರತ ತಂಡದಿಂದ ಔಟ್: ಜರ್ಮನಿಗೆ ತೆರಳಿರುವ ಕೆಎಲ್ ರಾಹುಲ್
ಮಾಧ್ಯಮ ವರದಿಗಳ ಪ್ರಕಾರ ಕೆಎಲ್ ರಾಹುಲ್ ಮೊದಲ ಮೂರು ಟಿ20 ಪಂದ್ಯಗಳಲ್ಲಿ ಆಡುವುದಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯು ಜುಲೈ 29 ರಿಂದ ಪ್ರಾರಂಭವಾಗುತ್ತಿದೆ. ಮೊದಲ ಮೂರು T20ಗಳನ್ನು ಟ್ರಿನಿಡಾಡ್‌ನಲ್ಲಿ ಮತ್ತು ನಂತರ ಸೇಂಟ್ ಕಿಟ್ಸ್‌ನಲ್ಲಿ ಆಡಲಾಗುವುದು. ಸರಣಿಯ ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಲಾಂಡರ್‌ಹಿಲ್‌ನಲ್ಲಿ ನಡೆಯಲಿದೆ.
Follow us on

ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾ (Team India) ಉಪನಾಯಕ ಕೆಎಲ್ ರಾಹುಲ್ (KL Rahul) ಹೊರಬಿದ್ದಿದ್ದಾರೆ. ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್ ಅವರು ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಇಂಗ್ಲೆಂಡ್ (India vs England) ಸರಣಿಗೆ ಲಭ್ಯರಿರಲಿದ್ದಾರೆ ಎನ್ನಲಾಗಿತ್ತು. ಆದರೀಗ ಗಾಯದಿಂದ ಸಂಪೂರ್ಣ ಗುಣಮುಖರಾಗದ ಕಾರಣ ಇಂಗ್ಲೆಂಡ್ ವಿರುದ್ದ ಸರಣಿಯಿಂದ ಕೂಡ ಹೊರಗುಳಿದಿದ್ದಾರೆ. ಇದಕ್ಕೂ ಮುನ್ನ ಶನಿವಾರ ಎನ್‌ಸಿಎಯಲ್ಲಿ ಫಿಟ್ನೆಸ್ ಪರೀಕ್ಷೆಗೆ ಹಾಜರಾಗುವಂತೆ ರಾಹುಲ್‌ಗೆ ತಿಳಿಸಲಾಗಿತ್ತು. ಆದರೆ ಗಾಯದ ಚೇತರಿಕೆಯು ತೃಪ್ತಿಕರವಾಗಿಲ್ಲದ ಕಾರಣ, ಬಿಸಿಸಿಐ ಅವರನ್ನು ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗಿಡಲು ನಿರ್ಧರಿಸಿದೆ. ಬದಲಿಗೆ ಭಾರತೀಯ ಮಂಡಳಿಯು ಚಿಕಿತ್ಸೆಗಾಗಿ ರಾಹುಲ್ ಅವರನ್ನು ಜರ್ಮನಿಗೆ ಕಳುಹಿಸಲಿದೆ.

ಏಕೆಂದರೆ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿರುವ ಕೆಎಲ್ ರಾಹುಲ್ ಗಾಯದ ಕಾರಣ ನಾಲ್ಕು ಸರಣಿಗಳಿಂದ ಹೊರಗುಳಿಯಬೇಕಾಗಿ ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಜಮರ್ನಿಗೆ ಕಳುಹಿಸಲಾಗುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ20 ಸರಣಿಯ ಆರಂಭಕ್ಕೂ ಮುನ್ನ ರಾಹುಲ್ ತಮ್ಮ ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದರು. 30 ವರ್ಷ ವಯಸ್ಸಿನ ರಾಹುಲ್ ಅವರನ್ನು ತೊಡೆಸಂದು ಸಮಸ್ಯೆಯು ನಿರಂತರವಾಗಿ ಕಾಡುತ್ತಿದೆ. ಹೀಗಾಗಿ ಅವರು ಫಿಟ್​ನೆಸ್ ಸಮಸ್ಯೆಯನ್ನು ಸರಿದೂಗಿಸಲು ಜರ್ಮನಿಗೆ ತೆರಳಲಿದ್ದಾರೆ.

ಇದನ್ನೂ ಓದಿ
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಈ ತಿಂಗಳ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ರಾಹುಲ್ ಜರ್ಮನಿಗೆ ಹಾರುವ ಸಾಧ್ಯತೆಯಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ದದ ಟೆಸ್ಟ್​, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದಿಲ್ಲ. ಟೆಸ್ಟ್​ನಲ್ಲಿ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಆರಂಭಿಕರಾಗಿ ಆಡುವ ಸಾಧ್ಯತೆಯಿದೆ. ಇನ್ನು ಟಿ20 ಯಲ್ಲಿ ರಾಹುಲ್ ಬದಲಿಗೆ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆಯಬಹುದು.

ಇಂಗ್ಲೆಂಡ್ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಾದ ಬಳಿಕ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗಳನ್ನು ಆಡಲಿದೆ.

ಮತ್ತೊಂದೆಡೆ ಇದೇ ತಿಂಗಳು 26 ಮತ್ತು 28 ರಂದು ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ದ ಟಿ20 ಸರಣಿ ಆಡಲಿದೆ. ಈ ಸರಣಿಗಾಗಿ ಮೀಸಲು ತಂಡವನ್ನು ಆಯ್ಕೆ ಮಾಡಲಾಗಿದ್ದು, ಆ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಅಲ್ಲದೆ ಐರ್ಲೆಂಡ್ ವಿರುದ್ದದ ಸರಣಿಯ ಬಳಿಕ ಇಂಗ್ಲೆಂಡ್ ಸರಣಿಗಾಗಿ ಟೀಮ್ ಇಂಡಿಯಾ ಟಿ20 ಹಾಗೂ ಏಕದಿನ ತಂಡವನ್ನು ಘೋಷಿಸಲಾಗುತ್ತದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ) ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್ (WK), ಕೆಎಸ್ ಭರತ್ (WK), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

ಐರ್ಲೆಂಡ್ ವಿರುದ್ದ ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.