AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾನ್ಸ್ ಬೇಕಿದ್ದರೆ ಈ ಟೂರ್ನಿ ಆಡಲೇಬೇಕು: ವಿರಾಟ್ ಕೊಹ್ಲಿ, ರೋಹಿತ್​ಗೆ ಖಡಕ್ ಸೂಚನೆ

India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ,. ಮೂರು ಪಂದ್ಯಗಳ ಈ ಸರಣಿಯ ಬಳಿಕ ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಚಾನ್ಸ್ ಬೇಕಿದ್ದರೆ ಈ ಟೂರ್ನಿ ಆಡಲೇಬೇಕು: ವಿರಾಟ್ ಕೊಹ್ಲಿ, ರೋಹಿತ್​ಗೆ ಖಡಕ್ ಸೂಚನೆ
Virat Kohli - Rohit Sharma
ಝಾಹಿರ್ ಯೂಸುಫ್
|

Updated on: Nov 12, 2025 | 2:33 PM

Share

ಭಾರತ ತಂಡದ ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟೀಮ್ ಇಂಡಿಯಾ ಅಂತರರಾಷ್ಟ್ರೀಯ ಕ್ರಿಕೆಟ್ ಆಡುವುದನ್ನು ಮುಂದುವರಿಸಲು ಬಯಸಿದರೆ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳಲ್ಲಿ ಭಾಗವಹಿಸಬೇಕು ಎಂದು ಬಿಸಿಸಿಐ ಖಡಕ್ ಸೂಚನೆ ನೀಡಿದೆ.

ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆದಿದ್ದಾರೆ. ಅಲ್ಲದೆ ಮುಂಬರುವ ಏಕದಿನ ವಿಶ್ವಕಪ್​ವರೆಗೆ ಭಾರತ ತಂಡವನ್ನು ಪ್ರತಿನಿಧಿಸುವ ಇರಾದೆಯಲ್ಲಿದ್ದಾರೆ.

ಆದರೆ ಏಕದಿನ ವಿಶ್ವಕಪ್​ಗೂ ಮುನ್ನ ಭಾರತ ತಂಡ ಕೆಲವೇ ಕೆಲವು ಏಕದಿನ ಸರಣಿಗಳನ್ನು ಮಾತ್ರ ಆಡಲಿದೆ. ಹೀಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ದೇಶೀಯ ಟೂರ್ನಿಯಲ್ಲಿ ಆಡಲೇಬೇಕು ಎಂದು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಬಿಸಿಸಿಐ ತಿಳಿಸಿದೆ.

ಟೀಮ್ ಇಂಡಿಯಾ ಪರ ಆಡಬೇಕಿದ್ದರೆ ಫಿಟ್​ನೆಸ್ ಮುಖ್ಯವಾಗುತ್ತದೆ. ಸದ್ಯ ಕೊಹ್ಲಿ ಹಾಗೂ ರೋಹಿತ್ ಕೇವಲ ಏಕದಿನ ಸ್ವರೂಪದಲ್ಲಿ ಮಾತ್ರ ಮುಂದುವರೆದಿದ್ದಾರೆ. ಅವರು ತಮ್ಮ ಫಿಟ್​ನೆಸ್ ಅನ್ನು ಕಾಪಾಡಿಕೊಳ್ಳಲು ಹಾಗೂ ಫಾರ್ಮ್ ಅನ್ನು ಉಳಿಸಿಕೊಳ್ಳಲು ದೇಶೀಯ ಟೂರ್ನಿ ಆಡಬೇಕಾಗುತ್ತದೆ. ಹೀಗಾಗಿ ಇಬ್ಬರಿಗೂ ಮುಂಬರುವ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಬಿಸಿಸಿಐ ನೀಡಿರುವ ಈ ಸೂಚನೆ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ 15 ವರ್ಷಗಳ ಬಳಿಕ ಮತ್ತೊಮ್ಮೆ ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಬಹುದು. ಅವರು ಕೊನೆಯ ಬಾರಿಗೆ ದೆಹಲಿ ಪರ ವಿಜಯ ಹಝಾರೆ ಟೂರ್ನಿ ಆಡಿದ್ದು ಫೆಬ್ರವರಿ 18, 2010 ರಂದು.

ಇನ್ನು ರೋಹಿತ್ ಶರ್ಮಾ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿಯಲ್ಲಿ 2018 ರಲ್ಲಿ ಕಾಣಿಸಿಕೊಂಡಿದ್ದರು.  ಅಂದು ಮುಂಬೈ ಪರ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಕಳೆದ 7 ವರ್ಷಗಳಿಂದ ದೇಶೀಯ ಏಕದಿನ ಟೂರ್ನಿಯಲ್ಲಿ ಕಾಣಿಸಿಕೊಂಡಿಲ್ಲ.  ಇದೀಗ ಬಿಸಿಸಿಐ ಕಡೆಯಿಂದ ಖಡಕ್ ಸೂಚನೆ ಸಿಕ್ಕ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮತ್ತೆ ದೇಶೀಯ ಟೂರ್ನಿಗೆ ಮರಳುವುದು ಬಹುತೇಕ ಖಚಿತ ಎನ್ನಬಹುದು.

ಇದನ್ನೂ ಓದಿ: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾ ಆಟಗಾರ ಔಟ್

ವಿಜಯ ಹಝಾರೆ ಟೂರ್ನಿ ಯಾವಾಗ ಶುರು?

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿಯು ಡಿಸೆಂಬರ್ 24 ರಿಂದ ಶುರುವಾಗಲಿದೆ. 32 ತಂಡಗಳ ನಡುವಣ ಈ ಕದನದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಹಾಗೂ ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು