AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ

Team India: ಮುಂದಿನ ವರ್ಷ ನಡೆಯಲಿರುವ ಟೀಮ್ ಇಂಡಿಯಾದ ಟಿ20 ಸರಣಿಯಲ್ಲಿ ಹೊಸ ನಾಯಕ ಹಾಗೂ ನೂತನ ಕೋಚ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

Team India: ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ
Rohit Sharma-Rahul Dravid
TV9 Web
| Edited By: |

Updated on: Dec 05, 2022 | 8:54 PM

Share

ಟಿ20 ವಿಶ್ವಕಪ್​ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆ ತರಲು ಬಿಸಿಸಿಐ (BCCI) ಮುಂದಾಗಿದೆ.  ಅದರ ಮೊದಲ ಹೆಜ್ಜೆ ಎಂಬಂತೆ ಟೀಮ್ ಇಂಡಿಯಾಗೆ ವಿಭಿನ್ನ ನಾಯಕರುಗಳ ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ಹೀಗಾಗಿ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಇಬ್ಬರು ನಾಯಕರುಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇಲ್ಲಿ ರೋಹಿತ್ ಶರ್ಮಾ (Rohit Sharma) ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡಕ್ಕೆ ನಾಯಕರಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಟಿ20 ತಂಡಕ್ಕಾಗಿ ಹೊಸ ಕೋಚ್ ಅನ್ನು ಕೂಡ ನೇಮಕ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

ಮುಂಬರುವ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್​​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವು ಪ್ರಮುಖ ಬದಲಾವಣೆ ಮಾಡಿಕೊಳ್ಳಲು ಮುಂದಾಗಿದೆ. ಇಲ್ಲಿ ಮುಖ್ಯವಾಗಿ 2024 ರ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟಿ20 ತಂಡದ ನಾಯಕ ಹಾಗೂ ಕೋಚ್ ಅನ್ನು ಬದಲಿಸಲು ಬಿಸಿಸಿಐ ಆಲೋಚಿಸಿದೆ ಎಂದು ವರದಿಯಾಗಿದೆ.

ಈ ವರದಿಯ ಪ್ರಕಾರ, ರಾಹುಲ್ ದ್ರಾವಿಡ್ ಬದಲಿಗೆ ಟಿ20 ತಂಡಕ್ಕೆ ಹೊಸ ಕೋಚ್ ನೇಮಕವಾಗಲಿದ್ದಾರೆ. ಹಾಗೆಯೇ ನಾಯಕನಾಗಿ ಹಾರ್ದಿಕ್ ಪಾಂಡ್ಯಗೆ ಜವಾಬ್ದಾರಿ ನೀಡಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಬಿಸಿಸಿಐ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಈಗಾಗಲೇ ವಿಭಿನ್ನ ನಾಯಕ ಹಾಗೂ ಕೋಚ್​ಗಳೊಂದಿಗೆ ಇಂಗ್ಲೆಂಡ್ ತಂಡವು ಯಶಸ್ಸು ಸಾಧಿಸಿದೆ. ಅದರಲ್ಲೂ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇಂಗ್ಲೆಂಡ್ ಪಾರುಪತ್ಯ ಮೆರೆದಿದೆ. ಹೀಗಾಗಿ ಅಂತಹದ್ದೇ ಪ್ರಯೋಗಕ್ಕೆ ಬಿಸಿಸಿಐ ಕೂಡ ಮುಂದಾಗುತ್ತಿದೆ.

ಇಲ್ಲಿ ಇಂಗ್ಲೆಂಡ್ ತಂಡವನ್ನು ಏಕದಿನ ಹಾಗೂ ಟಿ20 ಯಲ್ಲಿ ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದರೆ, ಕೋಚ್ ಆಗಿ ಮಾಥ್ಯೂ ಮೋಟ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ಟೆಸ್ಟ್ ತಂಡದ ನಾಯಕನಾಗಿ ಬೆನ್ ಸ್ಟೋಕ್ಸ್ ಹಾಗೂ ಕೋಚ್ ಆಗಿ ಬ್ರೆಂಡನ್ ಮೆಕಲಂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ಮಾದರಿಯಲ್ಲಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್​ ದ್ರಾವಿಡ್ ಮುಂದುವರೆಸಿದರೆ, ಟಿ20 ತಂಡಕ್ಕೆ ಹೊಸ ಕೋಚ್ ಹಾಗೂ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದಕ್ಕೂ ಮುನ್ನ ಭಾರತ ತಂಡದ ಪ್ರಸ್ತುತ ಕೋಚ್ ಹಾಗೂ ನಾಯಕನ ಜೊತೆ ವಿಶೇಷ ಸಭೆ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ಈ ಸಭೆಯ ಬಳಿಕ ಹೊಸ ನಾಯಕ ಹಾಗೂ ಕೋಚ್ ಯಾರೆಂಬುದು ನಿರ್ಧಾರವಾಗಲಿದೆ. ಸದ್ಯ ಮಾಹಿತಿ ಪ್ರಕಾರ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ. ಇದಾಗ್ಯೂ ಕೋಚ್ ಸ್ಥಾನದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

ಈ ಬಗ್ಗೆ ಬಿಸಿಸಿಐ ಶೀಘ್ರದಲ್ಲೇ ವಿಶೇಷ ಸಭೆ ಕರೆಯಲಿದ್ದು, ಈ ವೇಳೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ಅಭಿಪ್ರಾಯಗಳನ್ನು ಕೇಳಲಿದ್ದೇವೆ. ನಾವು ಕೂಡ ದ್ರಾವಿಡ್ ಅವರ ಕೆಲಸದ ಹೊರೆ ಕಡಿಮೆ ಮಾಡಲು ಬಯಸಿದ್ದೇವೆ. ಹೀಗಾಗಿ ಈ ಸಭೆಯ ಬಳಿಕ ಟೀಮ್ ಇಂಡಿಯಾದಲ್ಲಿನ ಮಹತ್ವದ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಟೀಮ್ ಇಂಡಿಯಾದ ಟಿ20 ಸರಣಿಯಲ್ಲಿ ಹೊಸ ನಾಯಕ ಹಾಗೂ ನೂತನ ಕೋಚ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

Follow Us
TV9 Web
TV9 Web

TV9 Kannada

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ