AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ತುಳಿತದ ಎಫೆಕ್ಟ್… ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದರೆ, ಅನೇಕರು ಗಾಯಗೊಂಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ.

ಕಾಲ್ತುಳಿತದ ಎಫೆಕ್ಟ್... ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್
Chinnaswamy Stadium
Follow us
ಝಾಹಿರ್ ಯೂಸುಫ್
|

Updated on:Jun 12, 2025 | 1:01 PM

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜೂನ್.4) ನಡೆದ ಕಾಲ್ತುಳಿತದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತಾತ್ಮಕ ಸ್ಥಿರತೆಯ ಬಗ್ಗೆ ಬಿಸಿಸಿಐ ಕಳವಳ ಹೊಂದಿದೆ. ಇದೇ ಕಾರಣದಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ.

ಯಾವುದೇ ನಿರ್ದಿಷ್ಟ ಕಾರಣ ನೀಡದೇ ಭಾರತೀಯ ಕ್ರಿಕೆಟ್ ಮಂಡಳಿ ( ಬಿಸಿಸಿಐ ) ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಈ ಪ್ರಕಟಣೆಯಲ್ಲಿ ಬೆಂಗಳೂರಿನ ಪಂದ್ಯಗಳನ್ನು ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಇತ್ತ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಅದರಂತೆ ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್‌ಕೋಟ್‌ನಲ್ಲಿ ಆಯೋಜಿಸಲಾಗುತ್ತಿದೆ.

ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇದೀಗ ಕಾಲ್ತುಳಿತದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಮಹಿಳಾ ಏಕದಿನ ವಿಶ್ವಕಪ್​ನ ಉದ್ಘಾಟನಾ ಪಂದ್ಯವನ್ನು ಬೇರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನು ಮುಂಬರುವ ಟಿ20 ವಿಶ್ವಕಪ್ ಕೂಡ ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಇತ್ತ 2026ರ ಟಿ20 ವಿಶ್ವಕಪ್​ಗೆ ಬಿಸಿಸಿಐ ನಿಗದಿಪಡಿಸಿದ ಸ್ಟೇಡಿಯಂಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕೂಡ ಒಂದು. ಆದರೆ ಇದೀಗ ಬೆಂಗಳೂರಿನ ಪಂದ್ಯಗಳನ್ನು ಶಿಫ್ಟ್ ಮಾಡುತ್ತಿರುವ ಕಾರಣ, ಟಿ20 ವಿಶ್ವಕಪ್ ಪಂದ್ಯದ ಆತಿಥ್ಯದ ಹಕ್ಕು ಕೂಡ ಕರ್ನಾಟಕ ಕ್ರಿಕೆಟ್ ಮಂಡಳಿಯ ಕೈ ತಪ್ಪಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: IPL 2026: RCB ತಂಡದಿಂದ 6 ಆಟಗಾರರಿಗೆ ಗೇಟ್ ಪಾಸ್ ಖಚಿತ

ಒಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ದುರ್ಘಟನೆಯನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಅದರ ಮೊದಲ ಹೆಜ್ಜೆಯಾಗಿ ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿರುವ ಪಂದ್ಯಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಮೂಲಕ ದಾರುಣ ಘಟನೆಯ ಕಹಿ ನೆನಪು ಮಾಸುವ ತನಕ ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ನಿರ್ಧರಿಸಿದೆ.

Published On - 11:31 am, Tue, 10 June 25

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ