World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ 20 ಆಟಗಾರರು ಫೈನಲ್

Team India: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಗೆಲ್ಲಲು ಬಿಸಿಸಿಐ ಈಗಾಗಲೇ ತಯಾರಿಗಳನ್ನು ಆರಂಭಿಸಿದ್ದು, ಈ ಮೂಲಕ 9 ವರ್ಷಗಳ ಕಾಯುವಿಕೆಗೆ ಅಂತ್ಯವಾಡಲು ಯೋಜನೆಗಳನ್ನು ರೂಪಿಸುತ್ತಿದೆ.

World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ 20 ಆಟಗಾರರು ಫೈನಲ್
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 02, 2023 | 4:03 PM

ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ (World Cup 2023) ಬಿಸಿಸಿಐ (BCCI) ಭರ್ಜರಿ ತಯಾರಿಗಳನ್ನು ಆರಂಭಿಸಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಟೀಮ್ ಇಂಡಿಯಾ (Team India) ಏಕದಿನ ವಿಶ್ವಕಪ್​ಗಾಗಿ  20 ಆಟಗಾರರನ್ನು ಶಾರ್ಟ್ ಲೀಸ್ಟ್​ ಮಾಡಿರುವುದಾಗಿ ಬಿಸಿಸಿಐ ಸ್ಪಷ್ಟಪಡಿಸಿದೆ. ಇದಾಗ್ಯೂ ಪ್ರಸ್ತುತ ಆಯ್ಕೆಯಾಗಿರುವ ಎಲ್ಲಾ ಆಟಗಾರರು ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಈ ಪಟ್ಟಿಯಿಂದ 16 ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಈ ವರ್ಷ ಭಾರತ ತಂಡವು ಒಟ್ಟು 35 ಏಕದಿನ ಪಂದ್ಯಗಳನ್ನು ಆಡಲಿದ್ದು, ಈ ವೇಳೆ 20 ಆಟಗಾರರನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಲಾಗುತ್ತದೆ. ಇದರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಏಕದಿನ ವಿಶ್ವಕಪ್​ ಟೀಮ್ ಇಂಡಿಯಾದಲ್ಲಿ ಅವಕಾಶ ದೊರೆಯಲಿದೆ. ಆ ಮೂಲಕ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲು ಯೋಜನೆಗಳನ್ನು ರೂಪಿಸಲಾಗಿದೆ.

ಇನ್ನು ಈ  20 ಆಟಗಾರರ ಫಿಟ್​ನೆಸ್​ ಮೇಲೆ ಬಿಸಿಸಿಐ ವಿಶೇಷ ನಿಗಾವಹಿಸಲಿದೆ. ಭಾರತೀಯ ಆಟಗಾರರ ಫಿಟ್​​ನೆಸ್ ಅನ್ನು ಮೇಲ್ವಿಚಾರಣೆ ಮಾಡಲು ಐಪಿಎಲ್ ಫ್ರಾಂಚೈಸಿಗಳೊಂದಿಗೆ ಕೆಲಸ ಮಾಡಲು ಬಿಸಿಸಿಐ ಈಗಾಗಲೇ ಎನ್​ಸಿಎಗೆ ಸೂಚಿಸಿದೆ. ಈ ಮೂಲಕ ಆಟಗಾರರ ಗಾಯದ ಸಮಸ್ಯೆಯನ್ನೂ ದೂರ ಮಾಡಲು ಸಹ ಪ್ಲ್ಯಾನ್ ರೂಪಿಸಲಾಗಿದೆ.

ಇದನ್ನೂ ಓದಿ
Image
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
Image
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
Image
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
Image
IPL 2023 RCB Team: RCB ಹೊಸ ತಂಡ ಹೀಗಿದೆ

ಒಟ್ಟಿನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಗೆಲ್ಲಲು ಬಿಸಿಸಿಐ ಈಗಾಗಲೇ ತಯಾರಿಗಳನ್ನು ಆರಂಭಿಸಿದ್ದು, ಈ ಮೂಲಕ 9 ವರ್ಷಗಳ ಕಾಯುವಿಕೆಗೆ ಅಂತ್ಯವಾಡಲು ಯೋಜನೆಗಳನ್ನು ರೂಪಿಸುತ್ತಿದೆ. ಅಂದರೆ ಭಾರತ ತಂಡವು ಕೊನೆಯ ಬಾರಿ ಐಸಿಸಿ ಟ್ರೋಫಿ ಗೆದ್ದಿರುವುದು 2013ರಲ್ಲಿ. ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿಯೇ ಈ ಬಾರಿಯ ಏಕದಿನ ವಿಶ್ವಕಪ್​ ಮೇಲೆ ಬಿಸಿಸಿಐ ಕಣ್ಣಿಟ್ಟಿದೆ.

ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ವಿಶೇಷ ಎಂದರೆ 2011 ರಲ್ಲಿ ಕೊನೆಯ ಬಾರಿ ಏಕದಿನ ವಿಶ್ವಕಪ್​ಗೆ ಭಾರತ ಆತಿಥ್ಯವಹಿಸಿದ್ದ ವೇಳೆ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಮತ್ತೊಮ್ಮೆ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಟೀಮ್ ಇಂಡಿಯಾ ಕೂಡ ಗುರುತಿಸಿಕೊಂಡಿದೆ. ಅದರಂತೆ 11 ವರ್ಷಗಳ ಬಳಿಕ ಟೀಮ್ ಇಂಡಿಯಾ ಮತ್ತೊಂದು ವಿಶ್ವಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

Published On - 3:59 pm, Mon, 2 January 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ