ಟಿ20 ಕ್ರಿಕೆಟ್​ನಿಂದ ರೋಹಿತ್ ದೂರ! ನಾಯಕನಾಗಿ ಏಕದಿನದಲ್ಲೂ ಹೆಚ್ಚು ದಿನ ಉಳಿಯುವುದಿಲ್ಲ ಹಿಟ್​ಮ್ಯಾನ್

Rohit Sharma: ಚಾಂಪಿಯನ್ಸ್ ಟ್ರೋಫಿ ಮತ್ತು 2027 ರ ಏಕದಿನ ವಿಶ್ವಕಪ್ ಈ ಎರಡೂ ಟೂರ್ನಿಗಳಿಗೆ ಟೀಂ ಇಂಡಿಯಾ ಹೊಸ ನಾಯಕನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ಬಿಳಿ ಚೆಂಡಿನ ಭವಿಷ್ಯದ ಬಗ್ಗೆ ಅಂದರೆ ಏಕದಿನ ಕ್ರಿಕೆಟ್ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದೆ .

ಟಿ20 ಕ್ರಿಕೆಟ್​ನಿಂದ ರೋಹಿತ್ ದೂರ! ನಾಯಕನಾಗಿ ಏಕದಿನದಲ್ಲೂ ಹೆಚ್ಚು ದಿನ ಉಳಿಯುವುದಿಲ್ಲ ಹಿಟ್​ಮ್ಯಾನ್
ರೋಹಿತ್ ಶರ್ಮಾ
Follow us
|

Updated on: Nov 22, 2023 | 2:17 PM

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಟೀಂ ಇಂಡಿಯಾವನ್ನು ಅಜೇಯವಾಗಿ ಫೈನಲ್​ಗೆ ಮುನ್ನಡೆಸಿದ್ದ ರೋಹಿತ್ ಶರ್ಮಾ (Rohit Sharma), ಫೈನಲ್ ಪಂದ್ಯದ ಸೋಲಿನ ಆಘಾತದೊಂದಿಗೆ ಸದ್ಯ ತಂಡದಿಂದ ದೂರ ಸರಿದಿದ್ದಾರೆ. ನಾಳೆಯಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ (India vs Australia) ವಿರುದ್ಧದ ಟಿ20 ಸರಣಿಯಿಂದ ರೋಹಿತ್ ಸೇರಿದಂತೆ ತಂಡದ ಅನೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಇದೀಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಚುಟುಕು ಮಾದರಿಯಿಂದ ದೂರ ಉಳಿಯುವ ನಿಟ್ಟಿನಲ್ಲಿ ಅವರು ಈಗಾಗಲೇ ಭಾರತೀಯ ಆಯ್ಕೆದಾರರೊಂದಿಗೆ ಮಾತನಾಡಿದ್ದಾರೆ ಎಂತಲೂ ವರದಿಯಲ್ಲಿ ಹೇಳಲಾಗಿದೆ.

ಟಿ20 ಕ್ರಿಕೆಟ್​ಗೆ ರೋಹಿತ್ ಗುಡ್​ಬೈ

ವರದಿಯ ಪ್ರಕಾರ, ಟಿ20 ಮಾದರಿಯಿಂದ ದೂರ ಉಳಿಯುವ ನಿಟ್ಟಿನಲ್ಲಿ ಆಯ್ಕೆಗಾರರೊಂದಿಗೆ ರೋಹಿತ್ ಶರ್ಮಾ ಮಾತನಾಡಿದ್ದು, ಬೇಕಿದ್ದರೆ ಟಿ20 ಕ್ರಿಕೆಟ್‌ನಲ್ಲಿ ನನ್ನ ಬಿಟ್ಟು ಮುಂದೆ ಯೋಚಿಸಬಹುದು ಎಂದು ಆಯ್ಕೆದಾರರಿಗೆ ರೋಹಿತ್ ಹೇಳಿದ್ದಾರೆ ಎಂದು ವರದಿಯಾಗಿದೆ. ಹೊಸ ಆಟಗಾರರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರೋಹಿತ್ ಈ ನಿರ್ಧಾರ ಕೈಗೊಂಡಿದ್ದು, ಟಿ20 ತಂಡದಲ್ಲಿ ತನ್ನನ್ನು ಆಯ್ಕೆ ಮಾಡದಿದ್ದರೆ ತೊಂದರೆ ಇಲ್ಲ ಎಂದು ರೋಹಿತ್ ಹೇಳಿದ್ದಾರೆ ಎಂದು ವರದಿಯಾಗಿದೆ.

ರೋಹಿತ್‌ ಅವರ ಈ ಮಹತ್ವದ ನಿರ್ಧಾರದಿಂದ ಅವರ ಏಕದಿನ ವೃತ್ತಿಜೀವನದ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ. ಏಕೆಂದರೆ ಮುಂದಿನ ಏಕದಿನ ವಿಶ್ವಕಪ್ 2027 ರಲ್ಲಿ ನಡೆಯಲ್ಲಿದೆ. ಸದ್ಯ 36 ವರ್ಷದ ರೋಹಿತ್‌ಗೆ ಆಗ 40 ವರ್ಷ ಆಗಿರಲಿದೆ. ಹೀಗಾಗಿ ಆ ವಯಸ್ಸಿನಲ್ಲಿ ಅವರು ಆ ಟೂರ್ನಿಯಲ್ಲಿ ಆಡಲು ಸಾಧ್ಯವಾಗುತ್ತದೆಯೇ ಎಂಬುದು ಪ್ರಶ್ನೆ. ಅದಕ್ಕೂ ಮುನ್ನ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಡ ನಡೆಯಲ್ಲಿದ್ದು, ಆ ಟೂರ್ನಿಯಲ್ಲೂ ರೋಹಿತ್ ಆಡುತ್ತಾರಾ? ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಟೀಂ ಇಂಡಿಯಾಗೆ ಹೊಸ ನಾಯಕ?

ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಮತ್ತು 2027 ರ ಏಕದಿನ ವಿಶ್ವಕಪ್ ಈ ಎರಡೂ ಟೂರ್ನಿಗಳಿಗೆ ಟೀಂ ಇಂಡಿಯಾ ಹೊಸ ನಾಯಕನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ಬಿಳಿ ಚೆಂಡಿನ ಭವಿಷ್ಯದ ಬಗ್ಗೆ ಅಂದರೆ ಏಕದಿನ ಕ್ರಿಕೆಟ್ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದೆ . ಮುಂದಿನ 2027 ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯಲ್ಲಿ ನಡೆಯಲಿದೆ. ಆಗ ರೋಹಿತ್ ಶರ್ಮಾಗೆ 40 ವರ್ಷ ವಯಸ್ಸಾಗಿರಲಿದೆ. ಟಿ20 ವಿಶ್ವಕಪ್ ಮುಂದಿನ ವರ್ಷ 2024ರಲ್ಲಿ ನಡೆಯಲಿದೆ. ಈ ವಿಶ್ವಕಪ್ ಟೂರ್ನಿ ಅಮೆರಿಕ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿದೆ. ಆಗ ರೋಹಿತ್ ಶರ್ಮಾಗೆ 37 ವರ್ಷ ಆಗಿರಲಿದೆ. ಅಲ್ಲಿಯವರೆಗೂ ರೋಹಿತ್ ಟೀಂ ಇಂಡಿಯಾ ಪರ ಆಡುವ ಸಾಧ್ಯತೆ ಕಡಿಮೆ. ಅವರು ಮತ್ತು ವಿರಾಟ್ ಕೊಹ್ಲಿ ಈಗಾಗಲೇ ಟಿ20 ಮಾದರಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾದಲ್ಲಿ ಬದಲಾವಣೆಯ ಪರ್ವ ಆರಂಭವಾಗಲಿದೆ.

ಏಕದಿನ ನಾಯಕನಾಗಿ ಕೊನೆಯ ಸರಣಿ

ಟಿ20 ಕ್ರಿಕೆಟ್ ಆಡಲು ಬಯಸುವುದಿಲ್ಲ ಎಂದು ರೋಹಿತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದೀಗ ಏಕದಿನದಲ್ಲಿ ಅವರ ಭವಿಷ್ಯದ ಬಗ್ಗೆ ಆಯ್ಕೆಗಾರರು ಅವರೊಂದಿಗೆ ಚರ್ಚಿಸಲಿದ್ದಾರೆ. ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುವ ಮೊದಲು ಟೀಂ ಇಂಡಿಯಾ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಟೆಸ್ಟ್‌ನಲ್ಲಿ ಆಡುವ ಮುನ್ನ ಸಿದ್ಧತೆಯ ದೃಷ್ಟಿಯಿಂದ ಹಿರಿಯರಿಗೆ ಏಕದಿನ ಸರಣಿ ಉತ್ತಮ ಅವಕಾಶ ಎಂದು ಬಿಸಿಸಿಐ ಆಯ್ಕೆಗಾರರು ಅಭಿಪ್ರಾಯಪಟ್ಟಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುತ್ತಿಲ್ಲ. ಹಾಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ರೋಹಿತ್ ಶರ್ಮಾಗೆ ಏಕದಿನ ನಾಯಕನಾಗಿ ಕೊನೆಯ ಸರಣಿಯಾಗಬಹುದು.

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ