AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದಲ್ಲಿ ಕೋಚ್ ರಾಹುಲ್ ದ್ರಾವಿಡ್ ಯುಗಾಂತ್ಯ! ಖಚಿತಪಡಿಸಿದ ಜಯ್​ ಶಾ

Team India: ಟೀಂ ಇಂಡಿಯಾದ ಮುಖ್ಯ ಕೋಚ್​ನ ಅಧಿಕಾರಾವಧಿ ಮುಗಿಯಲು ಕೆಲವೇ ತಿಂಗಳು ಬಾಕಿ ಇದ್ದು, ಈ ಹುದ್ದೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮಾಹಿತಿ ನೀಡಿದ್ದಾರೆ. ಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಸೇವೆ ಸಲ್ಲಿಸುತ್ತಿದ್ದಾರೆ.

ಟೀಂ ಇಂಡಿಯಾದಲ್ಲಿ ಕೋಚ್ ರಾಹುಲ್ ದ್ರಾವಿಡ್ ಯುಗಾಂತ್ಯ! ಖಚಿತಪಡಿಸಿದ ಜಯ್​ ಶಾ
ದ್ರಾವಿಡ್, ಜಯ್ ಶಾ
ಪೃಥ್ವಿಶಂಕರ
|

Updated on: May 10, 2024 | 4:23 PM

Share

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್ನ (IPL 2024) ಲೀಗ್ ಹಂತ ಮುಕ್ತಾಯದ ಸನಿಹಕ್ಕೆ ಬಂದಿದೆ. ವಾರದ ಬಳಿಕ ಪ್Jay Shahಲೇಆಫ್‌ ಸುತ್ತು ಆರಂಭವಾಗಲಿದೆ. ಆ ನಂತರ ಜೂನ್ 1 ರಿಂದ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಪ್ರಾರಂಭವಾಗಲಿದೆ. ಇದಕ್ಕಾಗಿ ಭಾರತ ತಂಡ (Team India) ಕೂಡ ಸಂಪೂರ್ಣ ಸಿದ್ಧಗೊಂಡಿದೆ. ಈ ನಡುವೆ ಟೀಂ ಇಂಡಿಯಾದ ಮುಖ್ಯ ಕೋಚ್​ನ ಅಧಿಕಾರಾವಧಿ ಮುಗಿಯಲು ಕೆಲವೇ ತಿಂಗಳು ಬಾಕಿ ಇದ್ದು, ಈ ಹುದ್ದೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ (Jay Shah) ಮಾಹಿತಿ ನೀಡಿದ್ದಾರೆ. ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಸೇವೆ ಸಲ್ಲಿಸುತ್ತಿದ್ದಾರೆ. ದ್ರಾವಿಡ್ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತ್ತಾದರೂ ಒಂದೇ ಒಂದು ಐಸಿಸಿ ಟ್ರೊಫಿ ಗೆಲ್ಲಲು ಸಾಧ್ಯವಾಗಲಿಲ್ಲ.

ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು?

ಟಿ20 ವಿಶ್ವಕಪ್‌ಗೂ ಮುನ್ನ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತ ತಂಡದ ಮುಂದಿನ ಮುಖ್ಯ ಕೋಚ್‌ನ ಕುರಿತು ದೊಡ್ಡ ಮಾಹಿತಿ ನೀಡಿದ್ದಾರೆ. ಅದರಂತೆ ಹೇಳಿಕೆ ನೀಡಿರುವ ಜಯ್​ ಶಾ,‘ಭಾರತ ತಂಡದ ಮುಂದಿನ ಮುಖ್ಯ ಕೋಚ್‌ಗಾಗಿ ಶೀಘ್ರದಲ್ಲೇ ಜಾಹೀರಾತು ನೀಡಲಾಗುವುದು. ರಾಹುಲ್ ದ್ರಾವಿಡ್ ಭವಿಷ್ಯದಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿ ಉಳಿಯಲು ಬಯಸಿದರೆ, ಅವರು ಮತ್ತೆ ಅದಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಹಾಗೆಯೇ ವಿದೇಶಿ ಆಟಗಾರರೂ ಕೂಡ ಭಾರತ ತಂಡದ ಮುಖ್ಯ ಕೋಚ್ ಆಗಬಹುದು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್‌ಗಳಂತಹ ಕೋಚಿಂಗ್ ಸಿಬ್ಬಂದಿಯ ಇತರ ಸದಸ್ಯರನ್ನು ಹೊಸ ಕೋಚ್‌ನೊಂದಿಗೆ ಸಮಾಲೋಚಿಸಿದ ನಂತರ ಆಯ್ಕೆ ಮಾಡಲಾಗುತ್ತದೆ ಎಂದರು.

ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿ ಎಷ್ಟು ದಿನ? ಜಯ್ ಶಾ ಹೇಳಿದ್ದೇನು?

ಮಂಡಳಿಯು ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರನ್ನು ಪರಿಗಣಿಸುವ ಸಾಧ್ಯತೆಯಿಲ್ಲ. ಈ ಸೂತ್ರವನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಮತ್ತು ಪಾಕಿಸ್ತಾನದಂತಹ ಮಂಡಳಿಗಳು ಅಳವಡಿಸಿಕೊಂಡಿವೆ. ಆದರೆ ನಮ್ಮಲ್ಲಿ ಅದರ ಬಗ್ಗೆ ಚಿಂತಿಸಿಲ್ಲ ಎಂದರು. ಇನ್ನು ಮುಖ್ಯ ಕೋಚ್​ಗಳ ಅಧಿಕಾರಾವಧಿಯ ವಿಸ್ತರಣೆಯ ಬಗ್ಗೆ ಮಾತನಾಡಿದ ಅವರು ಭಾರತ ತಂಡದ ಮುಖ್ಯ ಕೋಚ್ ಯಾರೇ ಆಗಲಿ ಅವರ ಅಧಿಕಾರಾವಧಿ ಇನ್ನು ಮುಂದೆ 3 ವರ್ಷ ಇರಲಿದೆ ಎಂದರು.

ಇಂಪ್ಯಾಕ್ಟ್ ಪ್ಲೇಯರ್‌ ನಿಯಮದ ಬಗ್ಗೆಯೂ ಮಾಹಿತಿ

ಮುಂಬರುವ ಐಪಿಎಲ್ ಮೆಗಾ ಹರಾಜಿನ ಬಗ್ಗೆ ಮಾತನಾಡಿದ ಅವರು, ‘ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬುದರ ಕುರಿತು ಶೀಘ್ರದಲ್ಲೇ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಸಭೆ ನಡೆಸಲಿದ್ದೇವೆ. ಅನೇಕ ಅನುಭವಿ ಆಟಗಾರರು ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಅತೃಪ್ತಿ ಹೊಂದಿದ್ದಾರೆ. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ಫ್ರಾಂಚೈಸಿಗಳೊಂದಿಗೆ ಚರ್ಚಿಸುತ್ತೇವೆ ಎಂದರು. ಇದು ಶಾಶ್ವತವಲ್ಲ, ಆದರೆ ಯಾರೂ ನಿಯಮದ ವಿರುದ್ಧ ಪ್ರತಿಕ್ರಿಯಿಸಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?