ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್ನ (IPL 2024) ಲೀಗ್ ಹಂತ ಮುಕ್ತಾಯದ ಸನಿಹಕ್ಕೆ ಬಂದಿದೆ. ವಾರದ ಬಳಿಕ ಪ್Jay Shahಲೇಆಫ್ ಸುತ್ತು ಆರಂಭವಾಗಲಿದೆ. ಆ ನಂತರ ಜೂನ್ 1 ರಿಂದ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಪ್ರಾರಂಭವಾಗಲಿದೆ. ಇದಕ್ಕಾಗಿ ಭಾರತ ತಂಡ (Team India) ಕೂಡ ಸಂಪೂರ್ಣ ಸಿದ್ಧಗೊಂಡಿದೆ. ಈ ನಡುವೆ ಟೀಂ ಇಂಡಿಯಾದ ಮುಖ್ಯ ಕೋಚ್‌ನ ಅಧಿಕಾರಾವಧಿ ಮುಗಿಯಲು ಕೆಲವೇ ತಿಂಗಳು ಬಾಕಿ ಇದ್ದು, ಈ ಹುದ್ದೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಮಾಹಿತಿ ನೀಡಿದ್ದಾರೆ. ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಸೇವೆ ಸಲ್ಲಿಸುತ್ತಿದ್ದಾರೆ. ದ್ರಾವಿಡ್ ಕೋಚಿಂಗ್ನಡಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತ್ತಾದರೂ ಒಂದೇ ಒಂದು ಐಸಿಸಿ ಟ್ರೊಫಿ ಗೆಲ್ಲಲು ಸಾಧ್ಯವಾಗಲಿಲ್ಲ.
ಟಿ20 ವಿಶ್ವಕಪ್‌ಗೂ ಮುನ್ನ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತ ತಂಡದ ಮುಂದಿನ ಮುಖ್ಯ ಕೋಚ್‌ನ ಕುರಿತು ದೊಡ್ಡ ಮಾಹಿತಿ ನೀಡಿದ್ದಾರೆ. ಅದರಂತೆ ಹೇಳಿಕೆ ನೀಡಿರುವ ಜಯ್ ಶಾ,‘ಭಾರತ ತಂಡದ ಮುಂದಿನ ಮುಖ್ಯ ಕೋಚ್‌ಗಾಗಿ ಶೀಘ್ರದಲ್ಲೇ ಜಾಹೀರಾತು ನೀಡಲಾಗುವುದು. ರಾಹುಲ್ ದ್ರಾವಿಡ್ ಭವಿಷ್ಯದಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿ ಉಳಿಯಲು ಬಯಸಿದರೆ, ಅವರು ಮತ್ತೆ ಅದಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಹಾಗೆಯೇ ವಿದೇಶಿ ಆಟಗಾರರೂ ಕೂಡ ಭಾರತ ತಂಡದ ಮುಖ್ಯ ಕೋಚ್ ಆಗಬಹುದು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್‌ಗಳಂತಹ ಕೋಚಿಂಗ್ ಸಿಬ್ಬಂದಿಯ ಇತರ ಸದಸ್ಯರನ್ನು ಹೊಸ ಕೋಚ್‌ನೊಂದಿಗೆ ಸಮಾಲೋಚಿಸಿದ ನಂತರ ಆಯ್ಕೆ ಮಾಡಲಾಗುತ್ತದೆ ಎಂದರು.
ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿ ಎಷ್ಟು ದಿನ? ಜಯ್ ಶಾ ಹೇಳಿದ್ದೇನು?
ಮಂಡಳಿಯು ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರನ್ನು ಪರಿಗಣಿಸುವ ಸಾಧ್ಯತೆಯಿಲ್ಲ. ಈ ಸೂತ್ರವನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಮತ್ತು ಪಾಕಿಸ್ತಾನದಂತಹ ಮಂಡಳಿಗಳು ಅಳವಡಿಸಿಕೊಂಡಿವೆ. ಆದರೆ ನಮ್ಮಲ್ಲಿ ಅದರ ಬಗ್ಗೆ ಚಿಂತಿಸಿಲ್ಲ ಎಂದರು. ಇನ್ನು ಮುಖ್ಯ ಕೋಚ್ಗಳ ಅಧಿಕಾರಾವಧಿಯ ವಿಸ್ತರಣೆಯ ಬಗ್ಗೆ ಮಾತನಾಡಿದ ಅವರು ಭಾರತ ತಂಡದ ಮುಖ್ಯ ಕೋಚ್ ಯಾರೇ ಆಗಲಿ ಅವರ ಅಧಿಕಾರಾವಧಿ ಇನ್ನು ಮುಂದೆ 3 ವರ್ಷ ಇರಲಿದೆ ಎಂದರು.
ಮುಂಬರುವ ಐಪಿಎಲ್ ಮೆಗಾ ಹರಾಜಿನ ಬಗ್ಗೆ ಮಾತನಾಡಿದ ಅವರು, ‘ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬುದರ ಕುರಿತು ಶೀಘ್ರದಲ್ಲೇ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಸಭೆ ನಡೆಸಲಿದ್ದೇವೆ. ಅನೇಕ ಅನುಭವಿ ಆಟಗಾರರು ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಅತೃಪ್ತಿ ಹೊಂದಿದ್ದಾರೆ. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ಫ್ರಾಂಚೈಸಿಗಳೊಂದಿಗೆ ಚರ್ಚಿಸುತ್ತೇವೆ ಎಂದರು. ಇದು ಶಾಶ್ವತವಲ್ಲ, ಆದರೆ ಯಾರೂ ನಿಯಮದ ವಿರುದ್ಧ ಪ್ರತಿಕ್ರಿಯಿಸಿಲ್ಲ ಎಂದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ