AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಬಾಳೆಹಣ್ಣುಗಳ ಖರೀದಿಗೆ 35 ಲಕ್ಷ ಖರ್ಚು..! ಬಿಸಿಸಿಐಗೆ ನೋಟಿಸ್ ನೀಡಿದ ಹೈಕೋರ್ಟ್

BCCI Faces Uttarakhand HC Notice: 12 ಕೋಟಿ ರೂಪಾಯಿ ದುರುಪಯೋಗದ ಪ್ರಕರಣದಲ್ಲಿ ಉತ್ತರಾಖಂಡ ಹೈಕೋರ್ಟ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಬಾಳೆಹಣ್ಣು ಖರೀದಿಗೆ 35 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ದುರುಪಯೋಗದ ಪ್ರಕರಣದಲ್ಲಿ ಉತ್ತರಾಖಂಡ ಹೈಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ. ಹಣದ ದುರುಪಯೋಗದ ಕುರಿತು ಸೆಪ್ಟೆಂಬರ್ 19 ರಂದು ವಿಚಾರಣೆ ನಡೆಯಲಿದೆ.

ಕೇವಲ ಬಾಳೆಹಣ್ಣುಗಳ ಖರೀದಿಗೆ 35 ಲಕ್ಷ ಖರ್ಚು..! ಬಿಸಿಸಿಐಗೆ ನೋಟಿಸ್ ನೀಡಿದ ಹೈಕೋರ್ಟ್
Bcci
ಪೃಥ್ವಿಶಂಕರ
|

Updated on: Sep 10, 2025 | 4:54 PM

Share

12 ಕೋಟಿ ರೂಪಾಯಿ ದುರುಪಯೋಗದ ಪ್ರಕರಣದಲ್ಲಿ ಉತ್ತರಾಖಂಡ ಹೈಕೋರ್ಟ್ (Uttarakhand High Court) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ನೋಟಿಸ್ ಜಾರಿ ಮಾಡಿದೆ. ವರದಿಯ ಪ್ರಕಾರ ಬಿಸಿಸಿಐ, ಉತ್ತರಾಖಂಡ ಕ್ರಿಕೆಟ್ ಅಸೋಸಿಯೇಷನ್‌ಗೆ ನೀಡಿದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಈ ವಿಚಾರವಾಗಿ ತನಿಖೆಗೆ ಒತ್ತಾಯಿಸಲಾಗುತ್ತಿದೆ. ವರದಿಯ ಪ್ರಕಾರ, 12 ಕೋಟಿ ರೂಪಾಯಿಗಳಲ್ಲಿ 35 ಲಕ್ಷ ರೂಪಾಯಿಗಳನ್ನು ಉತ್ತರಾಖಂಡದ ಆಟಗಾರರಿಗೆ ಬಾಳೆಹಣ್ಣು ಖರೀದಿಸಲು ಖರ್ಚು ಮಾಡಲಾಗಿದೆ. ಇದರ ಜೊತೆಗೆ ಇತರ ವಿಷಯಗಳಿಗೂ ಹೆಚ್ಚಿನ ಹಣವನ್ನು ಖರ್ಚು ಮಾಡಲಾಗಿದೆ ಎಂದು ಉತ್ತರಾಖಂಡ ಕ್ರಿಕೆಟ್ ಅಸೋಸಿಯೇಷನ್‌ನ ಆಡಿಟ್ ವರದಿಯಲ್ಲಿ ಬಹಿರಂಗವಾಗಿದೆ

ಬಾಳೆಹಣ್ಣಿಗೆ 35 ಲಕ್ಷ ರೂಪಾಯಿ ಖರ್ಚು

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಬಿಸಿಸಿಐ ನೀಡಿರುವ 12 ಕೋಟಿ ರೂಗಳಲ್ಲಿ 35 ಲಕ್ಷ ರೂಗಳನ್ನು ಬರಿ ಬಾಳೆಹಣ್ಣುಗಳನ್ನು ಖರೀದಿಸುವುದಕ್ಕಾಗಿಯೇ ಖರ್ಚು ಮಾಡಲಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕೆಂದು ದೂರುದಾರರು ಉತ್ತರಾಖಂಡ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅದರಂತೆ ಈಗ ಈ ಪ್ರಕರಣದ ವಿಚಾರಣೆ ಸೆಪ್ಟೆಂಬರ್ 19 ರಂದು ನಡೆಯಲಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಸಿಸಿಐನಿಂದ ಉತ್ತರವನ್ನು ಕೇಳಲಾಗಿದೆ.

ಉತ್ತರಾಖಂಡದ ಲೆಕ್ಕಪರಿಶೋಧನಾ ವರದಿಯ ಪ್ರಕಾರ, ಆಡಿಟ್ ವರದಿಯು ಈವೆಂಟ್ ನಿರ್ವಹಣೆಗೆ 6.4 ಕೋಟಿ ರೂಪಾಯಿಗಳನ್ನು ಮತ್ತು ಟೂರ್ನಮೆಂಟ್-ಟ್ರಯಲ್ ವೆಚ್ಚಗಳಿಗಾಗಿ ಒಟ್ಟು 26.3 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಹಿರಂಗಪಡಿಸಿದೆ. ಇದು ಹಿಂದಿನ ಹಣಕಾಸು ವರ್ಷದ 22.3 ಕೋಟಿ ರೂಪಾಯಿಗಳಿಗಿಂತ ಹೆಚ್ಚಾಗಿದೆ. ಉತ್ತರಾಖಂಡ್ ಅಸೋಸಿಯೇಷನ್ ​​ಆಹಾರ ಮತ್ತು ಪಾನೀಯ ವೆಚ್ಚಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರರು ಆರೋಪಿಸಿದ್ದಾರೆ.

BCCI Revenue: ಕಳೆದ 5 ವರ್ಷಗಳಲ್ಲಿ ಬಿಸಿಸಿಐ ಗಳಿಸಿದ ಆದಾಯ ಎಷ್ಟು ಸಾವಿರ ಕೋಟಿ ಗೊತ್ತಾ?

ಉತ್ತರಾಖಂಡ ಕ್ರಿಕೆಟ್ ಮಂಡಳಿಯ ವಿವಾದಗಳು

ಉತ್ತರಾಖಂಡ ಕ್ರಿಕೆಟ್ ಮಂಡಳಿಯ ವಿರುದ್ಧ ಈ ಹಿಂದೆಯೂ ಹಗರಣದ ಗಂಭೀರ ಆರೋಪಗಳು ಕೇಳಿಬಂದಿದ್ದವು. 2022 ರಲ್ಲಿ, ಉತ್ತರಾಖಂಡ ಕ್ರಿಕೆಟ್ ಸಂಘವು ತನ್ನ ಆಟಗಾರರಿಗೆ 12 ತಿಂಗಳಲ್ಲಿ ದಿನಕ್ಕೆ ಕೇವಲ 100 ರೂ.ಗಳನ್ನು ವೇತನವಾಗಿ ಪಾವತಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಇದಲ್ಲದೇ, ಉತ್ತರಾಖಂಡ ಕ್ರಿಕೆಟ್ ತಂಡದ ಆಟಗಾರರು ಮಾನಸಿಕ ಮತ್ತು ದೈಹಿಕ ಶೋಷಣೆಯ ಆರೋಪಗಳನ್ನು ಸಹ ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?