Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಬಿಸಿಸಿಐ ಎಚ್ಚರಿಕೆ!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್) ವೇಳೆ ಫಿಕ್ಸಿಂಗ್ ಭೀತಿ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫಿಕ್ಸಿಂಗ್ ಪ್ರಕರಣದ ಅಡಿಯಲ್ಲಿ 2 ವರ್ಷಗಳ ಕಾಲ ಐಪಿಎಲ್​ನಿಂದ ಬ್ಯಾನ್ ಆಗಿತ್ತು. ಇದೀಗ ಐಪಿಎಲ್ 2025 ಕ್ಕೂ ಮ್ಯಾಚ್ ಫಿಕ್ಸಿಂಗ್ ಭೀತಿ ಎದುರಾಗಿದೆ.

IPL 2025: ಐಪಿಎಲ್​ ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಬಿಸಿಸಿಐ ಎಚ್ಚರಿಕೆ!
Ipl Fixing
Follow us
ಝಾಹಿರ್ ಯೂಸುಫ್
|

Updated on: Apr 16, 2025 | 12:55 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 31 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ನಡುವೆ ಫಿಕ್ಸಿಂಗ್  ಪ್ರಯತ್ನ ನಡೆಸಲಾಗಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ (ACSU) ಈಗಾಗಲೇ ಲೀಗ್‌ನ ಎಲ್ಲಾ 10 ತಂಡಗಳಿಗೆ ಎಚ್ಚರಿಕೆ ನೀಡಿದೆ. ಯಾರಾದರೂ ತಮ್ಮನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ.

ACSU ಪ್ರಕಾರ, ಪ್ರಸ್ತುತ ಪಂದ್ಯಾವಳಿಯ ಮೇಲೆ ಭ್ರಷ್ಟಾಚಾರದ ಮೋಡಗಳು ಕವಿದಿವೆ. ಇದಕ್ಕಾಗಿ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ತಂಡದ ಮಾಲೀಕರು ಮತ್ತು ವೀಕ್ಷಕರ ಕುಟುಂಬಗಳ ಸದಸ್ಯರ ಜೊತೆ ಅಭಿಮಾನಿಗಳಂತೆ ನಟಿಸಿ ದುಬಾರಿ ಉಡುಗೊರೆಗಳನ್ನು ನೀಡುವ ಮೂಲಕ ಅವರನ್ನು ಓಲೈಸುವ ಪ್ರಯತ್ನಗಳು ನಡೆಯುತ್ತಿವೆ. ಈ ಮೂಲಕ ಫಿಕ್ಸಿಂಗ್​ ನಡೆಸಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಸ್ಟರ್ ಮೈಂಡ್ ಯಾರು?

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಹೈದರಾಬಾದ್ ಮೂಲದ ಉದ್ಯಮಿಯೊಬ್ಬರು ಪಂದ್ಯಾವಳಿಯಲ್ಲಿ ಭಾಗವಹಿಸುವವರೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ಅವರು ಯಾರೆಂಬುದನ್ನು ಇನ್ನೂ ಸಹ ಬಹಿರಂಗಪಡಿಸಲಾಗಿಲ್ಲ. ಆದರೆ ಈ ಉದ್ಯಮಿ ಬುಕ್ಕಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ ಎಂಬುದು ಈಗಾಗಲೇ ಖಚಿತವಾಗಿದೆ.

ಈ ಉದ್ಯಮಿಯು ಈ ಹಿಂದೆಯೂ ಇಂತಹ ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಹೀಗಾಗಿಯೇ ಇದೀಗ  ಐಪಿಎಲ್‌ನೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬರಿಗೂ ACSU ಎಚ್ಚರಿಕೆ ನೀಡಿದೆ. ಈ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡಿ ಎಂದು ತಿಳಿಸಲಾಗಿದೆ.

ತೆರೆಮರೆಯಲ್ಲೇ ಪ್ಲ್ಯಾನ್:

ವರದಿಯ ಪ್ರಕಾರ, ಈ ವ್ಯಕ್ತಿ ತನ್ನನ್ನು ತಾನು ಅಭಿಮಾನಿ ಎಂದು ಹೇಳಿಕೊಂಡು ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸ್ ಮಾಲೀಕರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದಾನೆ. ಅವರು ತಂಡದ ಹೋಟೆಲ್ ಮತ್ತು ಪಂದ್ಯಗಳ ವೇಳೆಯೂ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ಈ ವೇಳೆ ಆಟಗಾರರನ್ನು ಅಥವಾ ಆಟಗಾರರಿಗೆ ಆಪ್ತರಾಗಿರುವವರನ್ನು ತನ್ನ ಖಾಸಗಿ ಪಾರ್ಟಿಗಳಿಗೆ ಆಹ್ವಾನಿಸುತ್ತಿದ್ದಾನೆ. ತಂಡದ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ಉಡುಗೊರೆಗಳನ್ನು ನೀಡಿ ಅವರೊಂದಿಗೆ ಆಪ್ತತೆ ಬೆಳೆಸಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ವರದಿಯಾಗಿದೆ.

ಕ್ರಿಕ್‌ಬಜ್ ಪ್ರಕಾರ, ಅಭಿಮಾನಿಯಂತೆ ನಟಿಸುತ್ತಾ, ಅವರು ಆಟಗಾರರು, ತರಬೇತುದಾರರು ಮತ್ತು ವೀಕ್ಷಕ ವಿವರಣೆಗಾರರ ​​ಕುಟುಂಬ ಸದಸ್ಯರನ್ನು ಆಭರಣ ಅಂಗಡಿಗಳು ಮತ್ತು ದುಬಾರಿ ಹೋಟೆಲ್‌ಗಳಿಗೆ ಕರೆದೊಯ್ಯಲು ಮುಂದಾಗುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ, ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ವಿದೇಶದಲ್ಲಿ ವಾಸಿಸುವ ಐಪಿಎಲ್​ನಲ್ಲಿರುವವರು ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿಯೇ ಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ ಲೀಗ್‌ನ ಎಲ್ಲಾ 10 ತಂಡಗಳಿಗೆ ಎಚ್ಚರಿಕೆ ರವಾನಿಸಿದೆ.

ಐಪಿಎಲ್​ನಲ್ಲಿ ಫಿಕ್ಸಿಂಗ್:

2013 ರಲ್ಲಿ ಐಪಿಎಲ್​ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಗಳು ನಡೆದಿದ್ದವು. ಈ ಸಂಬಂಧ ಕ್ರಿಕೆಟಿಗರಾದ ಶ್ರೀಶಾಂತ್ , ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚವಾಣ್ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು.

ಇದನ್ನೂ ಓದಿ: VIDEO: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ಸುನಿಲ್ ನರೈನ್, ಆ್ಯಂಡ್ರೆ ರಸೆಲ್

ಅಲ್ಲದೆ ಫಿಕ್ಸಿಂಗ್ ಸಾಬೀತಾದ ಹಿನ್ನಲೆಯಲ್ಲಿ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿತ್ತು. ಇದೀಗ ಐಪಿಎಲ್ ಸೀಸನ್-18 ಕ್ಕೂ ಫಿಕ್ಸಿಂಗ್ ಭೀತಿ ಎದುರಾಗಿದೆ.

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ