Gautam Gambhir Salary: ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್​ಗೆ ಸಿಗುವ ವೇತನ ಎಷ್ಟು?

Gautam Gambhir Salary: ಟೀಮ್ ಇಂಡಿಯಾ ಪರ 58 ಟೆಸ್ಟ್, 147 ಏಕದಿನ ಮತ್ತು 36 ಟಿ20 ಪಂದ್ಯಗಳನ್ನಾಡಿರುವ ಗೌತಮ್ ಗಂಭೀರ್ ಒಟ್ಟು 10324 ರನ್​ ಕಲೆಹಾಕಿದ್ದಾರೆ. ಹಾಗೆಯೇ 6 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ತಮ್ಮ 42ನೇ ವಯಸ್ಸಿನಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಅಲಂಕರಿಸಿದ್ದಾರೆ.

Gautam Gambhir Salary: ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್​ಗೆ ಸಿಗುವ ವೇತನ ಎಷ್ಟು?
Gautam Gambhir
Follow us
|

Updated on: Jul 11, 2024 | 11:14 AM

ಭಾರತ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಹೊಸ ಕೋಚ್​ಗೆ ಸಿಗುವ ವೇತನ ಎಷ್ಟು ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಅದೇನೆಂದರೆ  ಗೌತಮ್ ಗಂಭೀರ್ ಅವರ ವಾರ್ಷಿಕ ವೇತನವನ್ನು ಬಿಸಿಸಿಐ ಇನ್ನೂ ಕೂಡ ನಿಗದಿ ಮಾಡಿಲ್ಲ ಎಂಬುದು. ಇದಕ್ಕೆ ಮುಖ್ಯ ಕಾರಣ ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದು. ಅಂದರೆ ಭಾರತ ತಂಡದ ಕೋಚ್ ಹುದ್ದೆಗೆ ಆಯ್ಕೆಯಾಗುವ ಮುನ್ನ ಗಂಭೀರ್ ತಮ್ಮ ವೇತನದ ಒಪ್ಪಂದಕ್ಕಾಗಿ ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ವರದಿಯಾಗಿದೆ.

ಗೌತಮ್‌ ಗಂಭೀರ್ ಅವರಿ​ಗೆ ಕೋಚ್ ಹುದ್ದೆ ಅಲಂಕರಿಸುವುದು ಮುಖ್ಯವಾಗಿತ್ತು. ಸಂಬಳ ಮತ್ತು ಇತರ ವಿಷಯಗಳ ಬಗ್ಗೆ ಅವರು ಚರ್ಚೆ ನಡೆಸಿಲ್ಲ. ಅಲ್ಲದೆ ಯಾವುದೇ ಡಿಮ್ಯಾಂಡ್ ಅನ್ನು ಸಹ ಮುಂದಿಟ್ಟಿಲ್ಲ. ಹೀಗಾಗಿಯೇ ಅವರ ವೇತನ ಎಷ್ಟು ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

2014 ರಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ಡಂಕನ್ ಫ್ಲೆಚರ್​ ಕೆಳಗಿಳಿದಾಗ ರವಿಶಾಸ್ತ್ರಿ ಕೂಡ ಯಾವುದೇ ಒಪ್ಪಂದವಿಲ್ಲದೆ ಕಾರ್ಯಾರಂಭ ಮಾಡಿದ್ದರು. ಇದೀಗ ಗೌತಮ್ ಗಂಭೀರ್ ಕೂಡ ವೇತನ ನಿಗದಿಯ ಒಪ್ಪಂದಕ್ಕೂ ಮುನ್ನವೇ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ.

ಇದಾಗ್ಯೂ ಗೌತಮ್ ಗಂಭೀರ್ ಅವರಿಗೆ ವಾರ್ಷಿಕ 12 ಕೋಟಿ ರೂ. ಸಂಭಾವನೆ ಸಿಗುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದಿನ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐ ವಾರ್ಷಿಕ ವೇತನವಾಗಿ 12 ಕೋಟಿ ರೂ. ಪಾವತಿ ಮಾಡಿದೆ. ಇದಕ್ಕೆ ಸಮಾನವಾಗಿ ಗೌತಮ್ ಗಂಭೀರ್​ಗೂ ವೇತನ ಸಿಗಲಿದೆ ಎಂದು ತಿಳಿದು ಬಂದಿದೆ.

ಗಂಭೀರ್ ಕಾರ್ಯಾರಂಭ ಯಾವಾಗ?

ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಂಡಿದ್ದಾರೆ. ಈ ಸರಣಿಯ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸ ಕೈ ಕೊಳ್ಳಲಿದೆ. ಅಂದರೆ ಶ್ರೀಲಂಕಾ ಸರಣಿಯೊಂದಿಗೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಸುದ್ದಿಯ ನಡುವೆ ಸಖತ್ ಸುಂದರಿ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ

ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ. ಆದರೆ ಗಂಭೀರ್ ಅವರ ಕೋಚಿಂಗ್ ಪದಗ್ರಹಣಕ್ಕೆ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಮೂವರು ಹಿರಿಯ ಆಟಗಾರರು ಶ್ರೀಲಂಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದು, ಹೀಗಾಗಿ ಏಕದಿನ ತಂಡವನ್ನು ಕೆಎಲ್ ರಾಹುಲ್ ಹಾಗೂ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುವ ಸಾಧ್ಯತೆಯಿದೆ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ