ಟೀಮ್ ಇಂಡಿಯಾಗೆ ಇಂದು ಏಕದಿನ ಪಂದ್ಯ, ನಾಳೆ ಟಿ20 ಪಂದ್ಯ

ವಿಶ್ವ ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಬಲ ಮತ್ತು ಆಳ ಎಂತಹುದ್ದು ಎಂಬುದನ್ನು ಸಾರಿ ಹೇಳಲು ಈಗ ಮತ್ತೊಂದು ಸುವರ್ಣ ಕ್ಷಣ ಒದಗಿಬಂದಿದೆ. ಒಂದೇ ದೇಶ, ಎರಡು ವಿಭಿನ್ನ ತಂಡಗಳು ಹಾಗೂ ಕೇವಲ 24 ಗಂಟೆಗಳ ಅಂತರದಲ್ಲಿ ಜಗತ್ತಿನ ಎರಡು ಬೇರೆ ಬೇರೆ ಮೂಲೆಗಳಲ್ಲಿ ಬ್ಯಾಕ್-ಟು-ಬ್ಯಾಕ್ ಪಂದ್ಯಗಳು! 

ಟೀಮ್ ಇಂಡಿಯಾಗೆ ಇಂದು ಏಕದಿನ ಪಂದ್ಯ, ನಾಳೆ ಟಿ20 ಪಂದ್ಯ
Team India
Image Credit source: GettyImages

Updated on: Sep 27, 2026 | 8:00 AM

ಟೀಮ್ ಇಂಡಿಯಾ ಕೇವಲ 24 ಗಂಟೆಗಳ ಅಂತರದಲ್ಲಿ, ಎರಡು ವಿಭಿನ್ನ ಸ್ವರೂಪದ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಜ್ಜಾಗಿದೆ! ಹೌದು, ಇಂದು (ಸೆಪ್ಟೆಂಬರ್ 27) ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯವಾಡಿದರೆ, ನಾಳೆ (ಸೆಪ್ಟೆಂಬರ್ 28) ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಟಿ20 ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಅಂದರೆ, ಬಿಸಿಸಿಐನ ಮಾಸ್ಟರ್ ಪ್ಲ್ಯಾನ್​ನಂತೆ ಎರಡು ಪ್ರತ್ಯೇಕ ತಂಡಗಳ ಮೂಲಕ ಟೀಮ್ ಇಂಡಿಯಾ ಬ್ಯಾಕ್-ಟು-ಬ್ಯಾಕ್ ಪಂದ್ಯಗಳ ರೋಮಾಂಚನ ನೀಡಲಿದೆ. ಇದರಲ್ಲಿ ಯುವ ಪಡೆ ಜಪಾನ್‌ನಲ್ಲಿ ನಡೆಯಲಿರುವ ಟಿ20 ಮ್ಯಾಚ್‌ನಲ್ಲಿ ಅಬ್ಬರಿಸಲು ಸಿದ್ಧವಾಗಿದ್ದರೆ, ಮತ್ತೊಂದೆಡೆ ಹಿರಿಯ ಆಟಗಾರರ ಬಲಿಷ್ಠ ತಂಡ ಭಾರತದ ನೆಲದಲ್ಲೇ ವೆಸ್ಟ್ ಇಂಡೀಸ್ ಪಡೆಗೆ ಸೆಡ್ಡು ಹೊಡೆಯಲಿದೆ.

ಇಂದಿನ ಪಂದ್ಯ:

ಇಂದು ಮಧ್ಯಾಹ್ನ 2:00 ಗಂಟೆಗೆ ಕೇರಳದ ತಿರುವನಂತಪುರಂನ ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭವಾಗಲಿದೆ. ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸುತ್ತಿದ್ದು, ಟೀಮ್​ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜಾ ಅವರಂತಹ ಅನುಭವಿ ಆಟಗಾರರಿದ್ದಾರೆ.

ನಾಳಿನ ಪಂದ್ಯ:

ಇತ್ತ ಭಾರತದಲ್ಲಿ ಹಿರಿಯ ಆಟಗಾರರು ಏಕದಿನ ಪಂದ್ಯವಾಡುತ್ತಿದ್ದರೆ, ನಾಳೆ ಬೆಳಗ್ಗೆ ಜಪಾನ್‌ನ ನಿಸ್ಶಿನ್ ನಗರದ ಐಚಿ ಪ್ರಿಫೆಕ್ಚರಲ್ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಭಾರತ ತಂಡ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಟಿ20 ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಲಿದೆ. ನಾಳೆ ಬೆಳಗ್ಗೆ 10:00 ಗಂಟೆಗೆ (ಭಾರತೀಯ ಕಾಲಮಾನ) ಆರಂಭವಾಗಲಿರುವ ಈ ಮಹತ್ವದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಯುವ ಪಡೆ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ: ಕೇವಲ 59 ರನ್​…. ಸಚಿನ್ ವಿಶ್ವ ದಾಖಲೆ ಮೇಲೆ ಕೊಹ್ಲಿ ಕಣ್ಣು!

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us