AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ, ಇಲ್ಲದಿದ್ರೆ ಟಿ20 ವಿಶ್ವಕಪ್ ಮರೆತುಬಿಡಿ: ಗೌತಮ್ ಗಂಭೀರ್

Gautam Gambhir: 2007ರ ಟಿ20 ವಿಶ್ವಕಪ್ ಅನ್ನು ನೋಡಿ. ಅಂದು ನಾವು ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದ್ದೇವೆ. 2011ರ ಏಕದಿನ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ನಮ್ಮ ವಿರುದ್ಧ ಆಸ್ಟ್ರೇಲಿಯಾ ಸೋಲನುಭವಿಸಿತ್ತು.

ಮೊದಲು ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ, ಇಲ್ಲದಿದ್ರೆ ಟಿ20 ವಿಶ್ವಕಪ್ ಮರೆತುಬಿಡಿ: ಗೌತಮ್ ಗಂಭೀರ್
Team India
TV9 Web
| Edited By: |

Updated on:Sep 18, 2022 | 1:05 PM

Share

ಟಿ20 ವಿಶ್ವಕಪ್ (T20 World Cup 2022)​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆದರೆ ಈ ಮಹತ್ವದ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ (Team India) 6 ಟಿ20 ಪಂದ್ಯಗಳನ್ನು ಆಡಲಿದೆ. ಅದು ಕೂಡ ಬಲಿಷ್ಠ ಎರಡು ತಂಡಗಳಾ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ. ಅಂದರೆ ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮಂಗಳವಾರದಿಂದ ಶುರುವಾಗಲಿದೆ. 3 ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆದ್ದರೆ ಮಾತ್ರ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್.

ಸೆಪ್ಟೆಂಬರ್ 20ರಿಂದ ಶುರುವಾಗಲಿರುವ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಟಿ20 ವಿಶ್ವಕಪ್​ನಲ್ಲಿ ಭಾರತ ಗೆಲ್ಲುವುದು ಕಷ್ಟ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ಈ ಬಗ್ಗೆ ನಾನು ಈ ಹಿಂದೆಯೇ ಹೇಳಿದ್ದೇನೆ. ಇದೀಗ ಅದೇ ಮಾತನ್ನು ಪುನರುಚ್ಚರಿಸುತ್ತಿದ್ದೇನೆ. ತವರಿನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಕನಸನ್ನು ಮರೆತುಬಿಡಿ. ಅದು ಅಸಾಧ್ಯ ಎಂದು ಗೌತಿ ಹೇಳಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯು ವಿಶ್ವ ಚಾಂಪಿಯನ್ ಮತ್ತು ವಿಶ್ವ ನಂಬರ್-1 ತಂಡಗಳ ನಡುವಿನ ಕಾದಾಟ ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯವನ್ನು ಸೋಲಿಸುವುದರಿಂದ ಭಾರತದ ಆತ್ಮವಿಶ್ವಾಸ ಹೆಚ್ಚುತ್ತದೆ. ಈ ಸರಣಿಯಲ್ಲಿ ಭಾರತ ಮೇಲುಗೈ ಸಾಧಿಸಲು ಯಶಸ್ವಿಯಾದರೆ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಗೌತಮ್ ಗಂಭೀರ್ ಹೇಳಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಒಂದು ವೇಳೆ ಆಸೀಸ್ ವಿರುದ್ದ ತವರಿನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಸಾಧ್ಯವಾಗದಿದ್ದರೆ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಸಂಕಷ್ಟ ಎದುರಿಸಲಿದೆ ಎಂದು ಗಂಭೀರ್ ಎಚ್ಚರಿಕೆ ನೀಡಿದ್ದಾರೆ.

ನನ್ನ ಪ್ರಕಾರ 2007ರ ಟಿ20 ವಿಶ್ವಕಪ್ ಅನ್ನು ನೋಡಿ. ಅಂದು ನಾವು ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದ್ದೇವೆ. 2011ರ ಏಕದಿನ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ನಮ್ಮ ವಿರುದ್ಧ ಆಸ್ಟ್ರೇಲಿಯಾ ಸೋಲನುಭವಿಸಿತ್ತು. ಹೀಗಾಗಿ ಯಾವುದೇ ಟೂರ್ನಿಯನ್ನು ನೀವು ಗೆಲ್ಲಬೇಕಿದ್ದರೆ ಬಲಿಷ್ಠ ತಂಡವನ್ನು ಸೋಲಿಸಬೇಕು.

ಇದೀಗ ಟೀಮ್ ಇಂಡಿಯಾ ಮುಂದಿರುವುದು ಆಸ್ಟ್ರೇಲಿಯಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಸೋಲಿಸಿ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಏಕೆಂದರೆ ಯಾವುದೇ ಟೂರ್ನಿಯನ್ನು ಗೆಲ್ಲಲು ಬಯಸಿದರೆ, ಆಸ್ಟ್ರೇಲಿಯಾವನ್ನು ಸೋಲಿಸದೆ ಮುಂದುವರೆಯುವುದು ಕಷ್ಟ. ಹೀಗಾಗಿಯೇ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಭಾರತ ಟಿ20 ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:

  1. ಸೆಪ್ಟೆಂಬರ್ 20- ಮೊದಲ ಟಿ20 ಪಂದ್ಯ- ಮೊಹಾಲಿ
  2. ಸೆಪ್ಟೆಂಬರ್ 23- 2ನೇ ಟಿ20 ಪಂದ್ಯ- ನಾಗ್ಪುರ
  3. ಸೆಪ್ಟೆಂಬರ್ 25- 3ನೇ ಟಿ20 ಪಂದ್ಯ- ಹೈದರಾಬಾದ್

Published On - 1:05 pm, Sun, 18 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್