ಟಿ20 ವಿಶ್ವಕಪ್ (T20 World Cup 2022) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆದರೆ ಈ ಮಹತ್ವದ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ (Team India) 6 ಟಿ20 ಪಂದ್ಯಗಳನ್ನು ಆಡಲಿದೆ. ಅದು ಕೂಡ ಬಲಿಷ್ಠ ಎರಡು ತಂಡಗಳಾ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ. ಅಂದರೆ ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮಂಗಳವಾರದಿಂದ ಶುರುವಾಗಲಿದೆ. 3 ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆದ್ದರೆ ಮಾತ್ರ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್.
ಸೆಪ್ಟೆಂಬರ್ 20ರಿಂದ ಶುರುವಾಗಲಿರುವ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಟಿ20 ವಿಶ್ವಕಪ್‌ನಲ್ಲಿ ಭಾರತ ಗೆಲ್ಲುವುದು ಕಷ್ಟ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ಈ ಬಗ್ಗೆ ನಾನು ಈ ಹಿಂದೆಯೇ ಹೇಳಿದ್ದೇನೆ. ಇದೀಗ ಅದೇ ಮಾತನ್ನು ಪುನರುಚ್ಚರಿಸುತ್ತಿದ್ದೇನೆ. ತವರಿನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಕನಸನ್ನು ಮರೆತುಬಿಡಿ. ಅದು ಅಸಾಧ್ಯ ಎಂದು ಗೌತಿ ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯು ವಿಶ್ವ ಚಾಂಪಿಯನ್ ಮತ್ತು ವಿಶ್ವ ನಂಬರ್-1 ತಂಡಗಳ ನಡುವಿನ ಕಾದಾಟ ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯವನ್ನು ಸೋಲಿಸುವುದರಿಂದ ಭಾರತದ ಆತ್ಮವಿಶ್ವಾಸ ಹೆಚ್ಚುತ್ತದೆ. ಈ ಸರಣಿಯಲ್ಲಿ ಭಾರತ ಮೇಲುಗೈ ಸಾಧಿಸಲು ಯಶಸ್ವಿಯಾದರೆ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಗೌತಮ್ ಗಂಭೀರ್ ಹೇಳಿದರು.
ಒಂದು ವೇಳೆ ಆಸೀಸ್ ವಿರುದ್ದ ತವರಿನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಸಾಧ್ಯವಾಗದಿದ್ದರೆ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಸಂಕಷ್ಟ ಎದುರಿಸಲಿದೆ ಎಂದು ಗಂಭೀರ್ ಎಚ್ಚರಿಕೆ ನೀಡಿದ್ದಾರೆ.
ನನ್ನ ಪ್ರಕಾರ 2007ರ ಟಿ20 ವಿಶ್ವಕಪ್ ಅನ್ನು ನೋಡಿ. ಅಂದು ನಾವು ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದ್ದೇವೆ. 2011ರ ಏಕದಿನ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ನಮ್ಮ ವಿರುದ್ಧ ಆಸ್ಟ್ರೇಲಿಯಾ ಸೋಲನುಭವಿಸಿತ್ತು. ಹೀಗಾಗಿ ಯಾವುದೇ ಟೂರ್ನಿಯನ್ನು ನೀವು ಗೆಲ್ಲಬೇಕಿದ್ದರೆ ಬಲಿಷ್ಠ ತಂಡವನ್ನು ಸೋಲಿಸಬೇಕು.
ಇದೀಗ ಟೀಮ್ ಇಂಡಿಯಾ ಮುಂದಿರುವುದು ಆಸ್ಟ್ರೇಲಿಯಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಸೋಲಿಸಿ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಏಕೆಂದರೆ ಯಾವುದೇ ಟೂರ್ನಿಯನ್ನು ಗೆಲ್ಲಲು ಬಯಸಿದರೆ, ಆಸ್ಟ್ರೇಲಿಯಾವನ್ನು ಸೋಲಿಸದೆ ಮುಂದುವರೆಯುವುದು ಕಷ್ಟ. ಹೀಗಾಗಿಯೇ ಆಸ್ಟ್ರೇಲಿಯಾವನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಭಾರತ ಟಿ20 ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:
Published On - 1:05 pm, Sun, 18 September 22