AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಬೆರಳಿನ ಫೈಟ್: 4 ವರ್ಷಗಳ ಬಳಿಕ ಪಾಕ್ ಆಟಗಾರನ ವಿರುದ್ದ ಸೇಡು ತೀರಿಸಿಕೊಂಡ ಆಸ್ಟ್ರೇಲಿಯಾ ಕ್ರಿಕೆಟಿಗ

ben cutting vs sohail tanvir: ಈ ಅಶ್ಲೀಲ ವರ್ತನೆಗೆ ಅಂದು ಸೊಹೈಲ್ ತನ್ವೀರ್ ಪಂದ್ಯದ ಶುಲ್ಕದ ಶೇಕಡಾ 15 ರಷ್ಟು ದಂಡವನ್ನು ಪಾವತಿಸಿದ್ದರು. ಇದು ಅಲ್ಲಿಗೆ ಮುಗಿಯಿತು ಎಂದು ಎಲ್ಲರೂ ಅಂದುಕೊಂಡಿದ್ದರು.

ಮಧ್ಯ ಬೆರಳಿನ ಫೈಟ್: 4 ವರ್ಷಗಳ ಬಳಿಕ ಪಾಕ್ ಆಟಗಾರನ ವಿರುದ್ದ ಸೇಡು ತೀರಿಸಿಕೊಂಡ ಆಸ್ಟ್ರೇಲಿಯಾ ಕ್ರಿಕೆಟಿಗ
ben cutting vs sohail tanvir
TV9 Web
| Edited By: |

Updated on: Feb 16, 2022 | 3:14 PM

Share

ಕ್ರಿಕೆಟ್​ ಅಂಗಳದಲ್ಲಿ ವಾಕ್ಸಮರ ಸಾಮಾನ್ಯ. ಅದು ಕೆಲ ಬಾರಿ ಅತಿರೇಕಕ್ಕೂ ಹೋಗಿದ್ದು ಉಂಟು. ಹೀಗೆ 2018 ರಲ್ಲಿ ಆಟಗಾರಿಬ್ಬರ ನಡುವಣ ಫೈಟ್ ಅತಿರೇಕಕ್ಕೆ ಹೋಗಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾಗಿ 4 ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಇದೇ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. 2018ರಲ್ಲಿ ನಡೆದ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರ ಸೊಹೈಲ್ ತನ್ವೀರ್ ಗಯಾನಾ ಅಮೆಜಾನ್ ಪರ ಆಡಿದ್ದರು. ಈ ವೇಳೆ ಆಸ್ಟ್ರೇಲಿಯಾ ಕ್ರಿಕೆಟಿಗಆಟಗಾರ ಬೆನ್ ಕಟಿಂಗ್ ಸೇಂಟ್ ಕಿಟ್ಸ್ ತಂಡಕ್ಕಾಗಿ ಆಡುತ್ತಿದ್ದರು.

ಈ ಪಂದ್ಯದಲ್ಲಿ ಎಡಗೈ ವೇಗಿ ಸೊಹೈಲ್ ತನ್ವಿರ್ ಎಸೆತದಲ್ಲಿ ಬೆನ್ ಕಟಿಂಗ್ ಸಿಕ್ಸ್​ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಟಿಂಗ್ ಅವರನ್ನು ಬೌಲ್ಡ್​ ಮಾಡಿ ಸೊಹೈಲ್ ತನ್ವೀರ್ ಮಧ್ಯ ಬೆರಳು ತೋರಿಸಿ ಬೀಳ್ಕೊಟ್ಟಿದ್ದರು. ಈ ಅಶ್ಲೀಲ ವರ್ತನೆಗೆ ಅಂದು ಸೊಹೈಲ್ ತನ್ವೀರ್ ಪಂದ್ಯದ ಶುಲ್ಕದ ಶೇಕಡಾ 15 ರಷ್ಟು ದಂಡವನ್ನು ಪಾವತಿಸಿದ್ದರು. ಇದು ಅಲ್ಲಿಗೆ ಮುಗಿಯಿತು ಎಂದು ಎಲ್ಲರೂ ಅಂದುಕೊಂಡಿದ್ದರು.

ಆದರೆ ನಾಲ್ಕು ವರ್ಷಗಳ ಬಳಿಕ ಬೆನ್ ಕಟಿಂಗ್ ಹಾಗೂ ಸೊಹೈಲ್ ತನ್ವೀರ್ ಮತ್ತೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಎಂಬುದು ವಿಶೇಷ. 2022 ರ PSL ಟೂರ್ನಿಯಲ್ಲಿ ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ, ಕಟಿಂಗ್ ಪೇಶಾವರ್ ಝಲ್ಮಿ ಮತ್ತು ತನ್ವೀರ್ ಕ್ವೆಟ್ಟಾ ಗ್ಲಾಡಿಯೇಟರ್ಸ್‌ ತಂಡದ ಭಾಗವಾಗಿದ್ದರು. ನಾಲ್ಕು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದ್ದ ಕಟಿಂಗ್ ಬ್ಯಾಕ್ ಟು ಬ್ಯಾಕ್ ಸಿಕ್ಸರ್​ಗಳನ್ನು ಸಿಡಿಸಿದರು. ಆ ಬಳಿಕ ಸೊಹೈಲ್ ತನ್ವೀರ್​ಗೆ ಮಧ್ಯದ ಬೆರಳನ್ನು ತೋರಿಸಿ ಸಂಭ್ರಮಿಸಿದರು. ಇದರಿಂದ ಇಬ್ಬರು ಆಟಗಾರರ ನಡುವೆ ವಾಗ್ವಾದ ಕೂಡ ನಡೆಯಿತು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿದ ಅಂಪೈರ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದಾಗ್ಯೂ ಕೊನೆಯಲ್ಲಿ ಕಟಿಂಗ್ ಸೊಹೈಲ್ ತನ್ವೀರ್​ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ತನ್ವೀರ್ ಮತ್ತೊಮ್ಮೆ ಮಧ್ಯ ಬೆರಳು ತೋರಿಸಿ ಸಂಭ್ರಮಿಸಿದರು.

ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ತಂಡವು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವನ್ನು 24 ರನ್‌ಗಳಿಂದ ಸೋಲಿಸಿತು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಬೆನ್ ಕಟಿಂಗ್ 14 ಎಸೆತಗಳಲ್ಲಿ 36 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿಕೊಂಡರು. ಮತ್ತೊಂದೆಡೆ ಸೊಹೈಲ್ ತನ್ವೀರ್ 4 ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟು ದುಬಾರಿಯಾದರು.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Ben Cutting and Sohail Tanvir fight: Cutting and Tanvir’s obscene gesture rivalry finds new episode in PSL)

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!