AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

Ben Duckett: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ ಹರಾಜಿನಲ್ಲಿ ಮಾರಾಟವಾದ ನಂತರ, ವೈದ್ಯಕೀಯ ಕಾರಣಗಳಿಲ್ಲದೆ ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರನ್ನು ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್‌ನಿಂದ ನಿಷೇಧಿಸಲಾಗುತ್ತದೆ.

ಅತೀ ವೇಗ... ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!
Ben Duckett
ಝಾಹಿರ್ ಯೂಸುಫ್
|

Updated on: Apr 01, 2026 | 2:23 PM

Share

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು.

ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್​ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70 ಮೈಲಿ ವೇಗದಲ್ಲಿ ಮಾತ್ರ ಕಾರು ಓಡಿಸಬೇಕೆಂಬ ನಿಯಮವಿದೆ. ಈ ನಿಯಮವನ್ನು ಮೀರಿ ಬೆನ್ ಡಕೆಟ್ ಅತೀ ವೇಗದಲ್ಲಿ ಕಾರು ಚಲಾಯಿಸಿದ್ದರು.

ಹೀಗೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ನ್ಯಾಯಾಲಯವು ಬೆನ್ ಡಕೆಟ್​ಗೆ ಒಟ್ಟು £1,100 (ಸುಮಾರು ₹1.2 ಲಕ್ಷ) ದಂಡ ವಿಧಿಸಿದೆ. ಇದರಲ್ಲಿ £700 ದಂಡ, £120 ನ್ಯಾಯಾಲಯದ ವೆಚ್ಚ ಮತ್ತು £280 ಸಂತ್ರಸ್ತರ ಸರ್‌ಚಾರ್ಜ್ ಸೇರಿದೆ. ಹಾಗೆಯೇ ಅವರ ಚಾಲನಾ ಪರವಾನಗಿಗೆ (Driving Licence) 4 ಪೆನಾಲ್ಟಿ ಪಾಯಿಂಟ್‌ಗಳನ್ನು ಸೇರಿಸಲಾಗಿದೆ.

ಐಪಿಎಲ್​ಗೆ ಕೈ ಕೊಟ್ಟ ಡಕೆಟ್:

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬೆನ್ ಡಕೆಟ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಐಪಿಎಲ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿದ್ದಾಗ ಡಕೆಟ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಮೇಲೆ ಗಮನ ಹರಿಸಲು ಮತ್ತು ದೈಹಿಕ ಹಾಗೂ ಮಾನಸಿಕವಾಗಿ ವಿಶ್ರಾಂತಿ ಪಡೆಯಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಬೆನ್ ಡಕೆಟ್ ತಿಳಿಸಿದ್ದಾರೆ.

ಡಕೆಟ್ ಬ್ಯಾನ್:

ಐಪಿಎಲ್ ನಿಯಮಗಳ ಪ್ರಕಾರ, ಯಾವುದೇ ವೈದ್ಯಕೀಯ ಕಾರಣವಿಲ್ಲದೆ ಕೊನೆಯ ಕ್ಷಣದಲ್ಲಿ ಟೂರ್ನಿಯಿಂದ ಹಿಂದೆ ಸರಿದರೆ, ಆಟಗಾರನ ಮೇಲೆ ಮುಂದಿನ ಎರಡು ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ.

ಇದನ್ನೂ ಓದಿ: Adam Zampa: IPL ತೊರೆದು PSL ಆಡಲು ಇದುವೇ ಮುಖ್ಯ ಕಾರಣ..!

ಅದರಂತೆ ಇದೀಗ ಬೆನ್ ಡಕೆಟ್ ಅವರ ಮೇಲೆ ಎರಡು ವರ್ಷಗಳ ನಿಷೇಧ ಹೇರಲಾಗಿದೆ. ಇದಕ್ಕೂ ಮುನ್ನ ಐಪಿಎಲ್ 2025 ರಲ್ಲಿ ನಿರ್ದಿಷ್ಟ ಕಾರಣವಿಲ್ಲದೇ, ಇಂಗ್ಲೆಂಡ್ ಆಟಗಾರ ಹ್ಯಾರಿ ಬ್ರೂಕ್ ಟೂರ್ನಿಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರಿಗೆ ಈ ಬಾರಿಯ ಐಪಿಎಲ್​ನಲ್ಲಿ ಚಾನ್ಸ್ ನೀಡಿರಲಿಲ್ಲ. ಇದೀಗ ಬೆನ್ ಡಕೆಟ್ ಕೂಡ ಐಪಿಎಲ್​ಗೆ ಕೈ ಕೊಟ್ಟಿರುವ ಕಾರಣ ಮುಂದಿನ ಸೀಸನ್​ನಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ