AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಆಟಗಾರರಲ್ಲಿ ಕ್ಷಮೆಯಾಚಿಸಿದ ಬೆನ್ ಸ್ಟೋಕ್ಸ್..!

England vs New Zealand: ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಇಂದಿನಿಂದ (ಜೂ.25) ಶುರುವಾಗಲಿದೆ. ಲಾರ್ಡ್ಸ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ 253 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಅದರಂತೆ ಇದೀಗ ಮೂರನೇ ಪಂದ್ಯವು ಸರಣಿ ನಿರ್ಣಾಯಕವಾಗಿ ಮಾರ್ಪಟ್ಟಿದೆ.

ಇಂಗ್ಲೆಂಡ್ ಆಟಗಾರರಲ್ಲಿ ಕ್ಷಮೆಯಾಚಿಸಿದ ಬೆನ್ ಸ್ಟೋಕ್ಸ್..!
Ben StokesImage Credit source: PA/Danny Lawson
ಝಾಹಿರ್ ಯೂಸುಫ್
|

Updated on: Jun 25, 2026 | 7:58 AM

Share

ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ. ಈ ಮರಳುವಿಕೆಯೊಂದಿಗೆ ಸ್ಟೋಕ್ಸ್  ತಮ್ಮ ಸಹ ಆಟಗಾರರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.  ಜೂನ್ 8 ರಂದು ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟೆಸ್ಟ್ ಮುಗಿದ ಬಳಿಕ ಬೆನ್ ಸ್ಟೋಕ್ಸ್ ಮತ್ತು ಬೌಲರ್ ಗಸ್ ಅಟ್ಕಿನ್ಸನ್ ಲಂಡನ್‌ನ ನೈಟ್‌ಕ್ಲಬ್‌ ಒಂದಕ್ಕೆ ಭೇಟಿ ನೀಡಿದ್ದರು.

ಈ ವೇಳೆ ನಡೆದ ಗಲಾಟೆಯ ಕುರಿತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ತನಿಖೆ ನಡೆಸಿತು.  ಕ್ಲಬ್​ನಲ್ಲಿ ನಡೆದ ಸಂಘರ್ಷದಲ್ಲಿ ಸ್ಟೋಕ್ಸ್ ಹಾಗೂ ಅಟ್ಕಿನ್ಸನ್ ಅವರ ಯಾವುದೇ ತಪ್ಪಿಲ್ಲದಿದ್ದರೂ, ತಂಡದ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇಬ್ಬರಿಗೂ ಲಿಖಿತ ಎಚ್ಚರಿಕೆ ನೀಡಿ, ಎರಡನೇ ಟೆಸ್ಟ್‌ನಿಂದ ಅಮಾನತುಗೊಳಿಸಲಾಗಿತ್ತು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದ ವೇಳೆ ಬೆನ್ ಸ್ಟೋಕ್ಸ್ ಕಾಣಿಸಿಕೊಂಡಿರಲಿಲ್ಲ.

ಇದೀಗ ಬೆನ್ ಸ್ಟೋಕ್ಸ್ ಮುಂದಾಳತ್ವದಲ್ಲಿ ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯವಾಡಲು ಸಜ್ಜಾಗಿದೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಬೆನ್ ಸ್ಟೋಕ್ಸ್ ಇಂಗ್ಲೆಂಡ್  ಆಟಗಾರರಲ್ಲಿ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ…

  • ನನ್ನ ತಪ್ಪುಗಳಿಂದಾಗಿ ಇಡೀ ತಂಡದ ವಾತಾವರಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಒಬ್ಬ ನಾಯಕನಾಗಿ ತಾವೇ ಸಂಪೂರ್ಣ ಜವಾಬ್ದಾರಿಯನ್ನು ಹೊರಬೇಕಾಗಿದೆ ಎಂದು ಬೆನ್ ಸ್ಟೋಕ್ಸ್ ಒಪ್ಪಿಕೊಂಡಿದ್ದಾರೆ.
  • ನನ್ನ ಈ ವಿವಾದದಿಂದಾಗಿ ಇಂಗ್ಲೆಂಡ್ ತಂಡಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿದ ಜೇಮ್ಸ್ ರಿವ್, ಜೋರ್ಡನ್ ಕಾಕ್ಸ್ ಮತ್ತು ಸೋನಿ ಬೇಕರ್ ಅವರ ಐತಿಹಾಸಿಕ ಸಾಧನೆಗಳು ಬದಿಗೆ ಸರಿದವು.
  • ಅಲ್ಲದೆ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಇಂಗ್ಲೆಂಡ್ ತಂಡವು ದ್ವಿತೀಯ ಪಂದ್ಯದಲ್ಲಿ ಜೋ ರೂಟ್ ನಾಯಕತ್ವದಲ್ಲಿ ಕಣಕ್ಕಿಳಿಯಬೇಕಾಯಿತು.
  • ಕೆನ್ನಿಂಗ್ಟನ್ ಓವಲ್‌ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 253 ರನ್‌ಗಳ ಭಾರಿ ಸೋಲನ್ನು ಅನುಭವಿಸಿತು. ಇದರಿಂದ ಹಂಗಾಮಿ ನಾಯಕ ಜೋ ರೂಟ್ ಸಾರ್ವಜನಿಕವಾಗಿ ತೀವ್ರ ಟೀಕೆಗೆ ಒಳಗಾಗಿದ್ದರು.

ಇಷ್ಟಕ್ಕೆಲ್ಲಾ ಕಾರಣವಾಗಿದ್ದು ನಾನು ಮಾಡಿದ ತಪ್ಪು. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಗೆಲುವಿನ ಸಂಭ್ರಮಾಚರಣೆಯ ವೇಳೆ ತಂಡದ ಮಧ್ಯರಾತ್ರಿಯ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ನಾನು ನೈಟ್‌ಕ್ಲಬ್‌ನಲ್ಲಿ ಉಳಿದುಕೊಂಡಿದ್ದು ಇಡೀ ತಂಡದ ಏಕಾಗ್ರತೆಗೆ ಧಕ್ಕೆ ತಂದಿತು ಎಂದು ಬೆನ್ ಸ್ಟೋಕ್ಸ್​ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಾನು ಇಡೀ ತಂಡದ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್​ ಸೆಮಿಫೈನಲ್​ಗೇರಿದ ಇಂಗ್ಲೆಂಡ್

ಈ ಕ್ಷಮಾಪಣೆಯೊಂದಿಗೆ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ. ಅದರಂತೆ ಜೂನ್ 25 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸ್ಟೋಕ್ಸ್ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ.

Follow Us