ENG vs SA: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂಗ್ಲೆಂಡ್‌ ತಂಡ ಪ್ರಕಟ; ಲೆಜೆಂಡರಿ ಸ್ಟಾರ್‌ಗೆ ವಿಶ್ರಾಂತಿ

ENG vs SA: ಮುಂಬರುವ T20 ಸರಣಿಯಿಂದ ಆಂಗ್ಲ ಮಂಡಳಿಯು ತನ್ನ ಸ್ಟಾರ್ ಆಲ್‌ರೌಂಡರ್ ಮತ್ತು ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್‌ಗೆ ವಿಶ್ರಾಂತಿ ನೀಡಿದೆ.

ENG vs SA: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂಗ್ಲೆಂಡ್‌ ತಂಡ ಪ್ರಕಟ; ಲೆಜೆಂಡರಿ ಸ್ಟಾರ್‌ಗೆ ವಿಶ್ರಾಂತಿ
ಇಂಗ್ಲೆಂಡ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Jul 15, 2022 | 10:43 PM

ಇತ್ತೀಚಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ, ಅನುಭವಿ ಆಟಗಾರರಿಗೆ ಆಡುವ ಅಥವಾ ವಿಶ್ರಾಂತಿ ನೀಡುವ ವಿಷಯ ಬಿಸಿಯಾಗಿದೆ. ಉಳಿದೆಲ್ಲ ಸರಣಿಗಳಲ್ಲಿ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ಪ್ರವಾಸದಿಂದ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ (Virat Kohli and Jasprit Bumrah) ಅವರಂತಹ ಅನುಭವಿಗಳನ್ನು ವಿಶ್ರಾಂತಿಯ ಹೆಸರಿನಲ್ಲಿ ಆಯ್ಕೆ ಮಾಡಲಾಗಿಲ್ಲ. ಈ ಬಗ್ಗೆ ಸಾಕಷ್ಟು ಕೋಲಾಹಲವೂ ಎದ್ದಿದೆ. ಆದರೆ ಭಾರತ ತಂಡ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಸಹ ತನ್ನ ಕೆಲವು ಆಟಗಾರರ ಬಗ್ಗೆ ಇಂತಹ ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಈ ಸಂಬಂಧ, ಮುಂಬರುವ T20 ಸರಣಿಯಿಂದ ಆಂಗ್ಲ ಮಂಡಳಿಯು ತನ್ನ ಸ್ಟಾರ್ ಆಲ್‌ರೌಂಡರ್ ಮತ್ತು ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್‌ (en Stokes)ಗೆ ವಿಶ್ರಾಂತಿ ನೀಡಿದೆ. ಅಲ್ಲದೆ, ಸ್ಟೋಕ್ಸ್ ಇಸಿಬಿಯ ಹೊಸ ಮಾದರಿಯ ಪಂದ್ಯಾವಳಿ ‘ದಿ ಹಂಡ್ರೆಡ್​ಗೂ ಗೈರಾಗಲಿದ್ದಾರೆ.

ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವೈಟ್ ಬಾಲ್ ಸರಣಿಯು ಮಂಗಳವಾರ (ಜುಲೈ 19) ರಿವರ್‌ಸೈಡ್‌ನಲ್ಲಿ ಮೊದಲ ಏಕದಿನ ಪಂದ್ಯದೊಂದಿಗೆ ಚಾಲನೆ ಪಡೆಯಲಿದೆ ಮತ್ತು ಭಾನುವಾರ (ಜುಲೈ 31) ಏಜಿಯಾಸ್ ಬೌಲ್‌ನಲ್ಲಿ ಮೂರನೇ ಟಿ 20 ಐನೊಂದಿಗೆ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ
Image
NZ vs IRE: ಒಂದು ಟವಲ್​ನಿಂದ ಮಿಸ್ಸಾಯ್ತು ವಿಕೆಟ್; ಔಟ್ ನೀಡಿ ಬಳಿಕ ನಾಟೌಟ್ ಎಂದ ಅಂಪೈರ್! ವಿಡಿಯೋ ನೋಡಿ
Image
Mohammed Shami: ಇಂಜುರಿ, ವೈಯಕ್ತಿಕ ಸಮಸ್ಯೆ, ಕಳಪೆ ಪ್ರದರ್ಶನಗಳ ನಡುವೆ ಬೌಲಿಂಗ್​ನಲ್ಲಿ ಅದ್ಭುತ ದಾಖಲೆ ಬರೆದ ಶಮಿ
Image
IND vs ENG: ಭಾರತೀಯರೇ ತೆಗಳುತ್ತಿರುವಾಗ ಕೊಹ್ಲಿ ಬೆನ್ನಿಗೆ ನಿಂತ ಪಾಕ್ ನಾಯಕ ಬಾಬರ್; ಹೇಳಿದ್ದೇನು ಗೊತ್ತಾ?

ಡರ್ಹಾಮ್ ವೇಗದ ಬೌಲರ್ ಮ್ಯಾಥ್ಯೂ ಪಾಟ್ಸ್ ಅವರು ತಮ್ಮ ಟೆಸ್ಟ್ ವೃತ್ತಿಜೀವನದ ಪ್ರಭಾವಶಾಲಿ ಆರಂಭದ ನಂತರ ಏಕದಿನ ತಂಡಕ್ಕೆ ತಮ್ಮ ಮೊದಲ ಕರೆಯನ್ನು ಗಳಿಸಿದ್ದಾರೆ. ಇದುವರೆಗಿನ ನಾಲ್ಕು ಟೆಸ್ಟ್‌ಗಳಲ್ಲಿ (ನ್ಯೂಜಿಲೆಂಡ್ ವಿರುದ್ಧ ಮೂರು ಮತ್ತು ಭಾರತದ ವಿರುದ್ಧ ಒಂದು), 23 ವರ್ಷದ ಬಲಗೈ ವೇಗಿ 26.72 ಸರಾಸರಿಯಲ್ಲಿ 18 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮೆಕ್ಕಾಗೆ ಹಜ್ ಯಾತ್ರೆ ಮಾಡಲು ಭಾರತದ ವಿರುದ್ಧದ ಸರಣಿಯನ್ನು ಕಳೆದುಕೊಂಡ ನಂತರ ಅನುಭವಿ ಲೆಗ್-ಸ್ಪಿನ್ನರ್ ಆದಿಲ್ ರಶೀದ್ ಎರಡೂ ವೈಟ್ ಬಾಲ್ ತಂಡಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಇಸಿಬಿ ಅನುಮತಿ ನೀಡಿದೆ. ಭಾರತ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ವಿಶ್ರಾಂತಿ ಪಡೆದ ನಂತರ ಅನುಭವಿ ಬ್ಯಾಟರ್ ಜಾನಿ ಬೈರ್‌ಸ್ಟೋ ಅವರನ್ನು T20I ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ನಡೆಯುತ್ತಿರುವ ಸರಣಿಯಲ್ಲಿ ಭಾರತದ ವಿರುದ್ಧ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಜೋಸ್ ಬಟ್ಲರ್, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟಿ 20 ಐ ತಂಡಗಳನ್ನು ಮುನ್ನಡೆಸಲಿದ್ದಾರೆ.

ODI ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ ಡೇವಿಡ್ ವಿಲ್ಲಿ

T20I ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ

Published On - 9:23 pm, Fri, 15 July 22

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು