AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ

Ben Stokes Retires Mid-Match: ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಈ ಅನಿರೀಕ್ಷಿತ ಪ್ರಕಟಣೆ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿತು. ಮೈದಾನದಲ್ಲಿ ಬೌಲಿಂಗ್ ಮಾಡುತ್ತಿದ್ದಾಗಲೇ ಸುದ್ದಿ ಹೊರಬಿದ್ದಿದ್ದು, ಸ್ಟೋಕ್ಸ್ ತಮ್ಮ ನಿರ್ಧಾರದ ಬಗ್ಗೆ ತಂಡದ ಮುಂದೆ ಮೊದಲೇ ತಿಳಿಸಿದ್ದರು. ಅವರ ಅದ್ಭುತ ವೃತ್ತಿಜೀವನ ಮತ್ತು 2019 ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ಸ್ಮರಣೀಯ.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ
Ben Stokes
TV9 Web
| Edited By: |

Updated on:Jun 28, 2026 | 9:20 PM

Share

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಟೋಕ್ಸ್ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದೆ. ಅಚ್ಚರಿಯ ಸಂಗತಿಯೆಂದರೆ ಇಂಗ್ಲೆಂಡ್‌ ಈ ವಿಚಾರವನ್ನು ಬಹಿರಂಗಪಡಿಸುವ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿದ್ದು ಬೌಲಿಂಗ್ ಮಾಡುತ್ತಿದ್ದರು. ಅವರ ನಿವೃತ್ತಿಯ ಸುದ್ದಿ ಪ್ರಕಟವಾದ ಸಂದರ್ಭದಲ್ಲಿ ಬೌಲಿಂಗ್​ನಲ್ಲಿ ನಿರತರಾಗಿದ್ದ ಸ್ಟೋಕ್ಸ್ ತಮ್ಮ ಹೊಸ ಓವರ್‌ನ ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ಸಂಚಲನ ಮೂಡಿಸಿದರು.

ನಿವೃತ್ತಿ ಘೋಷಿಸಿದ ಸ್ಟೋಕ್ಸ್

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯುತ್ತಿತ್ತು. ನ್ಯೂಜಿಲೆಂಡ್​ ಇನ್ನಿಂಗ್ಸ್‌ನ 81 ನೇ ಓವರ್‌ ನಡೆಯುವ ಸಂದರ್ಭದಲ್ಲಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ನಾಯಕ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ ಎಂಬುದನ್ನು ಇದ್ದಕ್ಕಿದ್ದಂತೆ ಪ್ರಕಟಿಸಲಾಯಿತು. ಈ ಸುದ್ದಿ ಇಡೀ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿದ್ದವರನ್ನು ಕೆಲವು ಕ್ಷಣ ಅಚ್ಚರಿಗೊಳಪಡಿಸಿತು. ಅಭಿಮಾನಿಗಳಿಗೆ ಈ ಸುದ್ದಿಯನ್ನು ನಂಬಲಾಗಲಿಲ್ಲ. ಇತ್ತ ಕಾಮೆಂಟರಿ ಪ್ಯಾನಲ್​ನಲ್ಲಿ ಇದ್ದವರು ಕೂಡ ಈ ಘೋಷಣೆಯಿಂದ ಆಘಾತಕ್ಕೊಳಗಾದರು. ಆದರೆ ಅದು ನಿಜವಾಗಿತ್ತು. ನಾಟಿಂಗ್‌ಹ್ಯಾಮ್ ಟೆಸ್ಟ್ ಪಂದ್ಯ ಮುಗಿದ ತಕ್ಷಣ ಸ್ಟೋಕ್ಸ್ ನಿವೃತ್ತಿ ಘೋಷಿಸಿದರು.

ವಾಸ್ತವವಾಗಿ, ಪಂದ್ಯದ ನಾಲ್ಕನೇ ದಿನದ ಆಟ ಪ್ರಾರಂಭವಾಗುವ ಮೊದಲು ಸ್ಟೋಕ್ಸ್ ಈ ಘೋಷಣೆ ಮಾಡಿದ್ದರು ಎಂಬುದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಿಂದ ಖಚಿತವಾಗಿದೆ. ದಿನದಾಟ ಶುರುವಾಗುವ ಮುನ್ನ ತಮ್ಮ ಇಡೀ ತಂಡದ ಮುಂದೆ ಡ್ರೆಸ್ಸಿಂಗ್ ಕೋಣೆಯಲ್ಲಿ ತಮ್ಮ ನಿರ್ಧಾರವನ್ನು ಘೋಷಿಸಿದ ಸ್ಟೋಕ್ಸ್, ಕೊನೆಯ ಬಾರಿಗೆ ತಮ್ಮ ಎಲ್ಲವನ್ನೂ ನೀಡಲು ಬಯಸುವುದಾಗಿ ಹೇಳಿದ್ದರು.

ಆದಾಗ್ಯೂ, ಕಳೆದ ಕೆಲವು ದಿನಗಳಿಂದ ಸ್ಟೋಕ್ಸ್ ಅವರ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಜಯಗಳಿಸಿದ ನಂತರ ಸ್ಟೋಕ್ಸ್ ದೊಡ್ಡ ವಿವಾದಕ್ಕೆ ಸಿಲುಕಿದ್ದರು. ಇದರಿಂದಾಗಿ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆ ಸಮಯದಲ್ಲೇ ಸ್ಟೋಕ್ಸ್ ನಿವೃತ್ತಿ ಘೋಷಿಸಬಹುದು ಎಂಬ ಸುದ್ದಿಗಳು ಕೇಳಿಬಂದಿದ್ದವು. ಇದೀಗ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಸ್ಟೋಕ್ಸ್ ತಮ್ಮ ವೃತ್ತಿಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ

ಸ್ಟೋಕ್ಸ್ ವೃತ್ತಿಜೀವನ ಹೇಗಿತ್ತು?

ಬೆನ್ ಸ್ಟೋಕ್ಸ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಆಗಸ್ಟ್ 2011 ರಲ್ಲಿ ಏಕದಿನ ಸ್ವರೂಪದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಸ್ಟೋಕ್ಸ್ ಅದೇ ವರ್ಷ ಟಿ20 ಮಾದರಿಗೂ ಪಾದಾರ್ಪಣೆ ಮಾಡಿದರು. ನಂತರ 2013 ರ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಆಶಸ್ ಸರಣಿಯಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಮೂರು ಸ್ವರೂಪಗಳಲ್ಲಿ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಸ್ಟೋಕ್ಸ್ 2019 ರಲ್ಲಿ ಇಂಗ್ಲೆಂಡ್ ತನ್ನ ಮೊದಲ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ 2022 ರಲ್ಲಿ ತಂಡವನ್ನು ಟಿ20 ವಿಶ್ವಕಪ್ ಪ್ರಶಸ್ತಿಗೂ ಮುನ್ನಡೆಸಿದ್ದರು. ಅದೇ ವರ್ಷ ಅಂದರೆ 2022 ರಲ್ಲಿ, ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕನನ್ನಾಗಿ ನೇಮಿಸಲಾಯಿತು.

ಒಟ್ಟಾರೆಯಾಗಿ, ನಾಟಿಂಗ್‌ಹ್ಯಾಮ್ ಟೆಸ್ಟ್​ವರೆಗೆ, ಸ್ಟೋಕ್ಸ್ 122 ಟೆಸ್ಟ್ ಪಂದ್ಯಗಳಲ್ಲಿ 14 ಶತಕಗಳು ಮತ್ತು 37 ಅರ್ಧಶತಕಗಳು ಸೇರಿದಂತೆ 34 ಸರಾಸರಿಯಲ್ಲಿ 7,228 ರನ್ ಬಾರಿಸಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 251 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಜಾಕ್ವೆಸ್ ಕಾಲಿಸ್ ನಂತರ 7,000 ರನ್‌ಗಳೊಂದಿಗೆ 250 ವಿಕೆಟ್‌ಗಳನ್ನು ಪಡೆದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸ್ಟೋಕ್ಸ್ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಹೊಂದಿದ್ದು 136 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇನ್ನು ಏಕದಿನದಲ್ಲಿ 114 ಪಂದ್ಯಗಳನ್ನಾಡಿರುವ ಸ್ಟೋಕ್ಸ್ 41 ಸರಾಸರಿಯಲ್ಲಿ 3,463 ರನ್‌ ಬಾರಿಸಿದ್ದಾರೆ. ಇದರಲ್ಲಿ ಐದು ಶತಕಗಳು ಸೇರಿದಂತೆ 74 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಹಾಗೆಯೇ ಟಿ20ಯಲ್ಲಿ, ಸ್ಟೋಕ್ಸ್ 43 ಪಂದ್ಯಗಳನ್ನಾಡಿದ್ದು 585 ರನ್‌ಗಳೊಂದಿಗೆ 26 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sun, 28 June 26

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?