AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್ ಸ್ಟೋಕ್ಸ್ ಕಂಬ್ಯಾಕ್: ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ

Ben Stokes: ಇಂಗ್ಲೆಂಡ್ ಪರ 105 ಏಕದಿನ ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ ಇದುವರೆಗೆ 2924 ರನ್ ​ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 3 ಶತಕ ಹಾಗೂ 27 ಅರ್ಧಶತಕಗಳು ಮೂಡಿಬಂದಿವೆ. ಹಾಗೆಯೇ 88 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 71 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಬೆನ್ ಸ್ಟೋಕ್ಸ್ ಕಂಬ್ಯಾಕ್: ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ
Ben Stokes
TV9 Web
| Edited By: |

Updated on: Aug 16, 2023 | 4:05 PM

Share

ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes)​ ಏಕದಿನ ಕ್ರಿಕೆಟ್​​ಗೆ ಮರಳಿದ್ದಾರೆ. 2022 ರಲ್ಲಿ ಒನ್​ಡೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಸ್ಟೋಕ್ಸ್ ಇದೀಗ ಏಕದಿನ ವಿಶ್ವಕಪ್​ಗಾಗಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಅಲ್ಲದೆ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲಿದ್ದಾರೆ. ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ವಿಶ್ವಕಪ್​ ಹೀರೋ:

2019 ರ ಏಕದಿನ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಪ್ರಶಸ್ತಿ ಗೆಲುವಿನ ರೂವಾರಿ ಬೆನ್ ಸ್ಟೋಕ್ಸ್​. ಏಕೆಂದರೆ ಕಳೆದ ವಿಶ್ವಕಪ್​ನಲ್ಲಿ ಒಟ್ಟು 50.5 ಓವರ್‌ಗಳನ್ನು ಬೌಲ್ ಮಾಡಿದ್ದ ಸ್ಟೋಕ್ಸ್ 7 ವಿಕೆಟ್ ಕಬಳಿಸಿದ್ದರು. ಅಲ್ಲದೆ ಫೈನಲ್​ನಲ್ಲಿ ಪಂದ್ಯದ ಅಜೇಯ 84 ರನ್​ ಸೇರಿದಂತೆ ಒಟ್ಟು 465 ರನ್ ಗಳಿಸಿ ಇಂಗ್ಲೆಂಡ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದೀಗ ಮತ್ತೊಮ್ಮೆ ಏಕದಿನ ವಿಶ್ವಕಪ್​ನಲ್ಲಿ ಸ್ಟೋಕ್ಸ್​ ಕಣಕ್ಕಿಳಿಯಲು ಸಜ್ಜಾಗಿದ್ದು, ಇದರಿಂದ ಇಂಗ್ಲೆಂಡ್ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ.

ಏಕದಿನದಲ್ಲಿ ಇಂಗ್ಲೆಂಡ್​ಗೆ ಬೆನ್​ಬಲ:

ಇಂಗ್ಲೆಂಡ್ ಪರ 105 ಏಕದಿನ ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ ಇದುವರೆಗೆ 2924 ರನ್ ​ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 3 ಶತಕ ಹಾಗೂ 27 ಅರ್ಧಶತಕಗಳು ಮೂಡಿಬಂದಿವೆ. ಹಾಗೆಯೇ 88 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 71 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹೀಗಾಗಿಯೇ ಸ್ಟೋಕ್ಸ್ ಅವರ ಪುನರಾಗಮನ ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸುವುದರಲ್ಲಿ ಡೌಟೇ ಇಲ್ಲ.

ಟಿ20 ಸರಣಿಯಿಂದ ಪ್ರಮುಖ ಆಟಗಾರರಿಗೆ ವಿಶ್ರಾಂತಿ:

ಇಂಗ್ಲೆಂಡ್​ನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ 8 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಟಿ20 ಮ್ಯಾಚ್​ಗಳನ್ನಾಡಲಾಗುತ್ತದೆ. ಇದಾದ ಬಳಿಕ ಏಕದಿನ ಸರಣಿ ಜರುಗಲಿದೆ. ಆದರೆ ಮುಂಬರುವ ಏಕದಿನ ವಿಶ್ವಕಪ್​ನ್ನು ಗಮನದಲ್ಲಿರಿಸಿ ಟಿ20 ಸರಣಿ ವೇಳೆ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಕಲ್ಪಿಸಲಾಗಿದೆ. ಅಲ್ಲದೆ ಸೆಪ್ಟಂಬರ್ 15 ಕ್ಕೆ ಏಕದಿನ ಸರಣಿ ಮುಗಿಯಲಿದ್ದು, ಇದಾದ ಬಳಿಕ ಇಂಗ್ಲೆಂಡ್ ಆಟಗಾರರು ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ತಂಡ ಈ ಕೆಳಗಿನಂತಿದೆ:

ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್.

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಮೊಯೀನ್ ಅಲಿ, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ವಿಲ್ ಜಾಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋಶ್ ಟಂಗ್, ಜಾನ್ ಟರ್ನರ್, ಲ್ಯೂಕ್ ವುಡ್, ಗಸ್ ಅಟ್ಕಿನ್ಸನ್.

ಇಂಗ್ಲೆಂಡ್-ನ್ಯೂಝಿಲೆಂಡ್ ಸರಣಿ ವೇಳಾಪಟ್ಟಿ:

  1. ಆಗಸ್ಟ್ 30- ಮೊದಲ ಟಿ20 ಪಂದ್ಯ (ಚೆಸ್ಟರ್-ಲೆ-ಸ್ಟ್ರೀಟ್ ಸ್ಟೇಡಿಯಂ)
  2. ಸೆಪ್ಟಂಬರ್ 1- ಎರಡನೇ ಟಿ20 ಪಂದ್ಯ (ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂ)
  3. ಸೆಪ್ಟೆಂಬರ್ 3- ಮೂರನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್‌ ಸ್ಟೇಡಿಯಂ)
  4. ಸೆಪ್ಟೆಂಬರ್ 5- ನಾಲ್ಕನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್‌ ಸ್ಟೇಡಿಯಂ)

ಇದನ್ನೂ ಓದಿ: ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

  1. ಸೆಪ್ಟೆಂಬರ್ 8- ಮೊದಲ ಏಕದಿನ ಪಂದ್ಯ (ಸೋಫಿಯಾ ಗಾರ್ಡನ್ಸ್ ಮೈದಾನ)
  2. ಸೆಪ್ಟೆಂಬರ್ 10- ಎರಡನೇ ಏಕದಿನ ಪಂದ್ಯ (ಏಜಿಯಾಸ್ ಬೌಲ್‌ ಸ್ಟೇಡಿಯಂ)
  3. ಸೆಪ್ಟೆಂಬರ್ 13- ಮೂರನೇ ಏಕದಿನ ಪಂದ್ಯ (ಕಿಯಾ ಓವಲ್ ಮೈದಾನ)
  4. ಸೆಪ್ಟೆಂಬರ್ 15- ನಾಲ್ಕನೇ ಏಕದಿನ ಪಂದ್ಯ (ಲಾರ್ಡ್ಸ್​ ಮೈದಾನ)
Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ