AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ನಾಚಿಕೆಗೇಡಿನ ಸಂಗತಿ; ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಬೆನ್ ಸ್ಟೋಕ್ಸ್ ಮಾತು

Ben Stokes on Kohli's Retirement: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ, ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ವಿರಾಟ್ ಕೊಹ್ಲಿ ಅವರ ನಿವೃತ್ತಿಯನ್ನು ತೀವ್ರವಾಗಿ ವಿಷಾದಿಸಿದ್ದಾರೆ. ಕೊಹ್ಲಿ ಅವರ ಅನುಪಸ್ಥಿತಿಯು ಭಾರತ ತಂಡಕ್ಕೆ ದೊಡ್ಡ ನಷ್ಟ ಎಂದು ಅವರು ಹೇಳಿದ್ದಾರೆ. ಸ್ಟೋಕ್ಸ್ ಅವರು ಕೊಹ್ಲಿ ಅವರೊಂದಿಗೆ ಆಡುವುದನ್ನು ಆನಂದಿಸುತ್ತಿದ್ದರು ಮತ್ತು ಅವರ ಪ್ರತಿಸ್ಪರ್ಧಿತ್ವವನ್ನು ಕಳೆದುಕೊಳ್ಳುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ. ಕೊಹ್ಲಿ ಅವರ ಅದ್ಭುತ ಟೆಸ್ಟ್ ಕ್ರಿಕೆಟ್ ವೃತ್ತಿಜೀವನ ಮತ್ತು ಅವರ ಅಪಾರ ಸಾಧನೆಗಳನ್ನು ಸ್ಟೋಕ್ಸ್ ಶ್ಲಾಘಿಸಿದ್ದಾರೆ.

IND vs ENG: ನಾಚಿಕೆಗೇಡಿನ ಸಂಗತಿ; ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಬೆನ್ ಸ್ಟೋಕ್ಸ್ ಮಾತು
Ben Stokes
ಪೃಥ್ವಿಶಂಕರ
|

Updated on: Jun 18, 2025 | 7:11 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ (India vs England Test series) ಆರಂಭಕ್ಕೆ ಇನ್ನು 2 ದಿನಗಳು ಮಾತ್ರ ಉಳಿದಿವೆ. ಉಭಯ ತಂಡಗಳು ಅಂತಿಮ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಆದಾಗ್ಯೂ, ಈ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆದಡಿರುವುದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡಕ್ಕೆ ಮಾತ್ರವಲ್ಲದೆ ಅಭಿಮಾನಿಗಳಿಗೂ ಕೊಹ್ಲಿಯ ಟೆಸ್ಟ್ ನಿವೃತ್ತಿ ಬೇಸರವನ್ನುಂಟು ಮಾಡಿದೆ. ಇದೀಗ ಈ ಟೆಸ್ಟ್ ಸರಣಿಗೂ ಮುನ್ನ, ಇಂಗ್ಲೆಂಡ್‌ ನಾಯಕ ಬೆನ್ ಸ್ಟೋಕ್ಸ್ (Ben Stokes), ‘ವಿರಾಟ್ ಕೊಹ್ಲಿಯಂತಹ (Virat Kohli) ಪ್ರತಿಸ್ಪರ್ಧಿ ಈ ಟೆಸ್ಟ್ ಸರಣಿಯಲ್ಲಿ ಭಾಗವಹಿಸದಿರುವುದು ನಾಚಿಕೆಗೇಡಿನ ವಿಷಯ ಎಂದು ಹೇಳಿದ್ದಾರೆ.

ಬೆನ್ ಸ್ಟೋಕ್ಸ್ ಹೇಳಿದ್ದೇನು?

ಇಂಗ್ಲೆಂಡ್ ಕ್ರಿಕೆಟ್ ಒಂದು ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಬೆನ್ ಸ್ಟೋಕ್ಸ್ ಮಾತನಾಡಿದ್ದಾರೆ. ಅದರಲ್ಲಿ ಅವರು, ‘ಆಟಕ್ಕಾಗಿ ವಿರಾಟ್ ಕೊಹ್ಲಿ ಹೋರಾಡಿದ ರೀತಿ ಮತ್ತು ಅವರಿಗಿದ್ದ ಗೆಲ್ಲುವ ಬಯಕೆಯನ್ನು ಖಂಡಿತವಾಗಿಯೂ ಭಾರತ ತಂಡ ಕಳೆದುಕೊಳ್ಳುತ್ತದೆ. ಕೊಹ್ಲಿ 18 ನೇ ನಂಬರ್ ಜೆರ್ಸಿ ತೊಟ್ಟು ಆಡುತ್ತಿದ್ದರು. ಹೀಗಾಗಿ ಭಾರತ ತಂಡದ ಶರ್ಟ್‌ನ ಹಿಂಭಾಗದಲ್ಲಿ 18 ನೇ ಸಂಖ್ಯೆಯನ್ನು ನೋಡದಿರುವುದು ಸ್ವಲ್ಪ ವಿಚಿತ್ರವಾಗಿದೆ. ವಿರಾಟ್ ಕ್ಲಾಸ್ ಆಟಗಾರ, ಅವರು ತಮ್ಮ ಅದ್ಭುತ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ.

‘ಕೊಹ್ಲಿ ನಿವೃತ್ತಿ ಘೋಷಿಸಿದಾಗ ನಾನು ಅವರಿಗೆ ಸಂದೇಶ ಕಳುಹಿಸಿದ್ದೆ. ಆ ಸಂದೇಶದಲ್ಲಿ ನಾನು, ‘ಈಗ ನಾನು ನಿಮ್ಮ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ, ಇದು ನಾಚಿಕೆಗೇಡಿನ ಸಂಗತಿ ಎಂದು ಬರೆದಿದ್ದೆ. ಏಕೆಂದರೆ ನಾನು ಯಾವಾಗಲೂ ವಿರಾಟ್ ವಿರುದ್ಧ ಆಡಲು ಇಷ್ಟಪಡುತ್ತೇನೆ. ಮೈದಾನದಲ್ಲಿದ್ದಾಗ ಯುದ್ಧ ಎಂದು ಭಾವಿಸುವ ಮನಸ್ಥಿತಿ ನಮಗಿರುವುದರಿಂದ ನಾವಿಬ್ಬರೂ ಪರಸ್ಪರ ವಿರುದ್ಧ ಆಡಲು ಇಷ್ಟಪಡುತ್ತೇವೆ’ ಎಂದು ಸ್ಟೋಕ್ಸ್ ಹೇಳಿದ್ದಾರೆ.

‘ಕೊಹ್ಲಿ ನನ್ನೊಂದಿಗೆ ಮಾತು ಬಿಟ್ಟಿದ್ದರು’; ಕೊಹ್ಲಿ- ಡಿವಿಲಿಯರ್ಸ್ ಸ್ನೇಹದಲ್ಲಿ ಬಿರುಕು ಮೂಡಲು ಕಾರಣವೇನು?

ವಿರಾಟ್ ಟೆಸ್ಟ್‌ ವೃತ್ತಿಜೀವನ

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 123 ಪಂದ್ಯಗಳಲ್ಲಿ 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದು, ಅವರ ಹೆಸರಿನಲ್ಲಿ 30 ಶತಕಗಳು ಮತ್ತು 31 ಅರ್ಧಶತಕಗಳಿವೆ. ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಆತಿಥೇಯರ ವಿರುದ್ಧ 17 ಪಂದ್ಯಗಳನ್ನಾಡಿದ್ದು ಅದರಲ್ಲಿ ಅವರು 33.21 ಸರಾಸರಿಯಲ್ಲಿ 1096 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಟೆಸ್ಟ್ ಶತಕಗಳು ಸೇರಿವೆ. 2018 ರ ಇಂಗ್ಲೆಂಡ್ ಪ್ರವಾಸದಲ್ಲಿ ಕೊಹ್ಲಿ ಈ ಎರಡೂ ಟೆಸ್ಟ್ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಟೀಂ ಇಂಡಿಯಾ ಖಂಡಿತವಾಗಿಯೂ ವಿರಾಟ್ ಅವರನ್ನು ಮಿಸ್ ಮಾಡಿಕೊಳ್ಳಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ