T20 World Cup 2021: ಫೈನಲ್ ಆಡಲಿರುವ ತಂಡಗಳನ್ನು ಹೆಸರಿಸಿದ ಬೆನ್​ ಸ್ಟೋಕ್ಸ್​

Ben Stokes: ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ್ ಈ ಸಲ ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಪಾಕ್​ಗೆ ಇನ್ನು ಉಳಿದಿರುವುದು ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ತಂಡಗಳ ವಿರುದ್ದದ ಪಂದ್ಯಗಳು.

T20 World Cup 2021: ಫೈನಲ್ ಆಡಲಿರುವ ತಂಡಗಳನ್ನು ಹೆಸರಿಸಿದ ಬೆನ್​ ಸ್ಟೋಕ್ಸ್​
ben stokes
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2021 | 7:33 PM

ಒಂದೆಡೆ ಟಿ20 ವಿಶ್ವಕಪ್​ನ (T20 World Cup 2021) ಸೂಪರ್ 12 ಪಂದ್ಯಗಳು ರಂಗೇರುತ್ತಿದ್ದರೆ, ಮತ್ತೊಂದೆಡೆ ಸೆಮಿಫೈನಲ್​ ಎಂಟ್ರಿಗೂ ಪೈಪೋಟಿ ಹೆಚ್ಚಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳು 2 ಪಂದ್ಯಗಳನ್ನು ಆಡಿದ್ದು, ಇದಾಗ್ಯೂ ಯಾರು ಕೂಡ ಸೆಮಿಫೈನಲ್​ ಅನ್ನು ಖಚಿತಪಡಿಸಿಲ್ಲ. ಆದರೆ ಮತ್ತೊಂದೆಡೆ 3 ಗೆಲುವು ದಾಖಲಿಸಿ ಪಾಕಿಸ್ತಾನ್ ತಂಡವು ಸೆಮಿಫೈನಲ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿಯೇ ಈ ಬಾರಿ ಯಾರು ಸೆಮಿಫೈನಲ್ ಆಡಲಿದ್ದಾರೆ? ಯಾರು ಫೈನಲ್​ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಅತ್ತ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಇಂಗ್ಲೆಂಡ್​ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಕೂಡ ಪಂದ್ಯವನ್ನು ಗಮನಿಸುತ್ತಿದ್ದಾರೆ.

ಅಷ್ಟೇ ಅಲ್ಲದೆ ಪ್ರಸ್ತುತ ತಂಡಗಳ ಪ್ರದರ್ಶನವನ್ನು ಗಮನಿಸಿ ಯಾರು ಫೈನಲ್ ಆಡಲಿದ್ದಾರೆ ಎಂಬುದನ್ನು ಕೂಡ ಬೆನ್​ ಸ್ಟೋಕ್ಸ್​ ಊಹಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ಫೈನಲ್? ಎಂದು ಸ್ಟೋಕ್ಸ್ ಬರೆದಿರುವುದು ವೈರಲ್ ಆಗಿದೆ. ಸ್ಟೋಕ್ಸ್ ಅವರ ಪ್ರಕಾರ ಈ ಸಲ ಗ್ರೂಪ್ 1 ನಿಂದ ಇಂಗ್ಲೆಂಡ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದ್ದು, ಗ್ರೂಪ್ 2 ನಿಂದ ಪಾಕಿಸ್ತಾನ್ ತಂಡ ಅಂತಿಮ ಹಣಾಹಣಿಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ್ ಈ ಸಲ ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಪಾಕ್​ಗೆ ಇನ್ನು ಉಳಿದಿರುವುದು ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ತಂಡಗಳ ವಿರುದ್ದದ ಪಂದ್ಯಗಳು. ಇದರಲ್ಲಿ ಒಂದು ಜಯ ಸಾಧಿಸಿದರೂ ಸೆಮಿಫೈನಲ್ ಎಂಟ್ರಿ ಖಚಿತ.

ಇನ್ನೊಂದೆಡೆ ಇಂಗ್ಲೆಂಡ್ ತಂಡ ಕೂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಅದರಂತೆ ಆಡಿರುವ 2 ಪಂದ್ಯಗಳಲ್ಲೂ ಜಯ ಸಾಧಿಸಿ ಗ್ರೂಪ್-1 ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್​ಗೆ ಇನ್ನೂ 3 ಪಂದ್ಯಗಳಿದ್ದು, 1 ರಲ್ಲಿ ಜಯ ಸಾಧಿಸಿದರೆ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಹೀಗಾಗಿ ಇಂಗ್ಲೆಂಡ್ ತಂಡ ಕೂಡ ಸೆಮಿಫೈನಲ್​ ಹಂತಕ್ಕೇರುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಲೀಗ್​ ಹಂತದಲ್ಲೇ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ಈ ಎರಡು ತಂಡಗಳೇ ಫೈನಲ್ ಪ್ರವೇಶಿಸಲಿದೆ ಎಂದು ಬೆನ್​ ಸ್ಟೋಕ್ಸ್ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(Ben Stokes predicts finalists of T20 World Cup)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್