ಒಂದೆಡೆ ಟಿ20 ವಿಶ್ವಕಪ್ನ (T20 World Cup 2021) ಸೂಪರ್ 12 ಪಂದ್ಯಗಳು ರಂಗೇರುತ್ತಿದ್ದರೆ, ಮತ್ತೊಂದೆಡೆ ಸೆಮಿಫೈನಲ್ ಎಂಟ್ರಿಗೂ ಪೈಪೋಟಿ ಹೆಚ್ಚಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳು 2 ಪಂದ್ಯಗಳನ್ನು ಆಡಿದ್ದು, ಇದಾಗ್ಯೂ ಯಾರು ಕೂಡ ಸೆಮಿಫೈನಲ್ ಅನ್ನು ಖಚಿತಪಡಿಸಿಲ್ಲ. ಆದರೆ ಮತ್ತೊಂದೆಡೆ 3 ಗೆಲುವು ದಾಖಲಿಸಿ ಪಾಕಿಸ್ತಾನ್ ತಂಡವು ಸೆಮಿಫೈನಲ್ ರೇಸ್ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿಯೇ ಈ ಬಾರಿ ಯಾರು ಸೆಮಿಫೈನಲ್ ಆಡಲಿದ್ದಾರೆ? ಯಾರು ಫೈನಲ್ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಅತ್ತ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಕೂಡ ಪಂದ್ಯವನ್ನು ಗಮನಿಸುತ್ತಿದ್ದಾರೆ.
ಅಷ್ಟೇ ಅಲ್ಲದೆ ಪ್ರಸ್ತುತ ತಂಡಗಳ ಪ್ರದರ್ಶನವನ್ನು ಗಮನಿಸಿ ಯಾರು ಫೈನಲ್ ಆಡಲಿದ್ದಾರೆ ಎಂಬುದನ್ನು ಕೂಡ ಬೆನ್ ಸ್ಟೋಕ್ಸ್ ಊಹಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ಫೈನಲ್? ಎಂದು ಸ್ಟೋಕ್ಸ್ ಬರೆದಿರುವುದು ವೈರಲ್ ಆಗಿದೆ. ಸ್ಟೋಕ್ಸ್ ಅವರ ಪ್ರಕಾರ ಈ ಸಲ ಗ್ರೂಪ್ 1 ನಿಂದ ಇಂಗ್ಲೆಂಡ್ ತಂಡ ಫೈನಲ್ಗೆ ಎಂಟ್ರಿ ಕೊಡಲಿದ್ದು, ಗ್ರೂಪ್ 2 ನಿಂದ ಪಾಕಿಸ್ತಾನ್ ತಂಡ ಅಂತಿಮ ಹಣಾಹಣಿಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.
ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ್ ಈ ಸಲ ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಪಾಕ್ಗೆ ಇನ್ನು ಉಳಿದಿರುವುದು ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ತಂಡಗಳ ವಿರುದ್ದದ ಪಂದ್ಯಗಳು. ಇದರಲ್ಲಿ ಒಂದು ಜಯ ಸಾಧಿಸಿದರೂ ಸೆಮಿಫೈನಲ್ ಎಂಟ್ರಿ ಖಚಿತ.
ಇನ್ನೊಂದೆಡೆ ಇಂಗ್ಲೆಂಡ್ ತಂಡ ಕೂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಅದರಂತೆ ಆಡಿರುವ 2 ಪಂದ್ಯಗಳಲ್ಲೂ ಜಯ ಸಾಧಿಸಿ ಗ್ರೂಪ್-1 ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ಗೆ ಇನ್ನೂ 3 ಪಂದ್ಯಗಳಿದ್ದು, 1 ರಲ್ಲಿ ಜಯ ಸಾಧಿಸಿದರೆ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಹೀಗಾಗಿ ಇಂಗ್ಲೆಂಡ್ ತಂಡ ಕೂಡ ಸೆಮಿಫೈನಲ್ ಹಂತಕ್ಕೇರುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಲೀಗ್ ಹಂತದಲ್ಲೇ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ಈ ಎರಡು ತಂಡಗಳೇ ಫೈನಲ್ ಪ್ರವೇಶಿಸಲಿದೆ ಎಂದು ಬೆನ್ ಸ್ಟೋಕ್ಸ್ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(Ben Stokes predicts finalists of T20 World Cup)