AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಕಿಡಿ ಹೊತ್ತಿಸಿದ ಸ್ಟೋಕ್ಸ್ ನಿವೃತ್ತಿ; ಇಸಿಬಿ ವಿರುದ್ಧ ಐಸಿಸಿ ಗರಂ

Ben Stokes Retirement Video Controversy: ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ನಿವೃತ್ತಿ ಘೋಷಿಸಿದ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಸಹ ಆಟಗಾರರೊಂದಿಗೆ ತಮ್ಮ ನಿರ್ಧಾರ ಹಂಚಿಕೊಂಡಿದ್ದ ಈ ವಿಡಿಯೋವನ್ನು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿತ್ತು. ಇದು ಐಸಿಸಿಯ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿರುವ ಐಸಿಸಿ, ಕೂಡಲೇ ವಿಡಿಯೋ ಅಳಿಸುವಂತೆ ECBಗೆ ಸೂಚಿಸಿದೆ. ಸ್ಟೋಕ್ಸ್ ಪ್ರತಿಕ್ರಿಯೆ ವೈರಲ್ ಆಗಿದೆ.

ವಿವಾದದ ಕಿಡಿ ಹೊತ್ತಿಸಿದ ಸ್ಟೋಕ್ಸ್ ನಿವೃತ್ತಿ; ಇಸಿಬಿ ವಿರುದ್ಧ ಐಸಿಸಿ ಗರಂ
Ben Stokes
ಪೃಥ್ವಿಶಂಕರ
|

Updated on:Jul 09, 2026 | 5:54 PM

Share

ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಕೆಲವೇ ದಿನಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯದ ನಡುವೆ ಸ್ಟೋಕ್ಸ್ ಈ ನಿರ್ಧಾರ ಪ್ರಕಟಿಸಿದ್ದರು. ಅಚ್ಚರಿಯ ಸಂಗತಿಯೆಂದರೆ ಸ್ಟೋಕ್ಸ್ ನಿವೃತ್ತಿಯ ವಿಚಾರ ಪ್ರಕಟವಾದಾಗ ಅವರು ಮೈದಾನದಲ್ಲಿ ಬೌಲಿಂಗ್ ಮಾಡುತ್ತಿದ್ದರು. ಮೈದಾನದಲ್ಲಿರುವ ಸ್ಟೋಕ್ಸ್ ನಿವೃತ್ತಿ ಘೋಷಿಸಿದ್ದು ಹೇಗೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಸ್ಟೋಕ್ಸ್ ತಮ್ಮ ನಿವೃತ್ತಿ ನಿರ್ಧಾರವನ್ನು ತಂಡದ ಸಹ ಆಟಗಾರರೊಂದಿಗೆ ಹಂಚಿಕೊಳ್ಳುತ್ತಿರುವ ವಿಡಿಯೋವನ್ನು ಇಂಗ್ಲೆಂಡ್‌ ಕ್ರಿಕೆಟ್ ಮಂಡಳಿ (ECB) ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿತ್ತು. ಇದೀಗ ಆ ವಿಡಿಯೋ ಬಗ್ಗೆ ಐಸಿಸಿ (ICC) ಗರಂ ಆಗಿದ್ದು, ಕೂಡಲೇ ಆ ವಿಡಿಯೋವನ್ನು ಡಿಲೀಟ್ ಮಾಡುವಂತೆ ತಾಕೀತು ಮಾಡಿದೆ.

ಜೂನ್ 28 ರಂದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದಿತ್ತು. ಈ ಪಂದ್ಯದ ನಾಲ್ಕನೇ ದಿನದಾಟದ ವೇಳೆ, ಸ್ಟೋಕ್ಸ್ ನಿವೃತ್ತಿಯ ಸುದ್ದಿ ಇದ್ದಕ್ಕಿದ್ದಂತೆ ಹೊರಬಿತ್ತು. ಇದಾದ ಸ್ವಲ್ಪ ಸಮಯದ ನಂತರ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಇಂಗ್ಲೆಂಡ್ ಡ್ರೆಸ್ಸಿಂಗ್ ರೂಮ್‌ನಿಂದ ನಾಲ್ಕನೇ ದಿನದ ಆಟ ಪ್ರಾರಂಭವಾಗುವ ಮೊದಲು ತೆಗೆದ ವೀಡಿಯೊವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿತ್ತು. ಅದರಲ್ಲಿ ಸ್ಟೋಕ್ಸ್ ತಮ್ಮ ನಿವೃತ್ತಿಯ ನಿರ್ಧಾರದ ಬಗ್ಗೆ ಇಡೀ ತಂಡಕ್ಕೆ ತಿಳಿಸಿದ್ದರು. ಈ ವೀಡಿಯೊ ವೈರಲ್ ಆಗಿ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು.

ಈ ಹಿಂದೆಯೇ ಎಚ್ಚರಿಕೆ ನೀಡಿದ್ದ ಐಸಿಸಿ

ಇದೀಗ ಐಸಿಸಿ ಆ ವೀಡಿಯೊದ ಬಗ್ಗೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಕೂಡಲೇ ಆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಇಸಿಬಿಗೆ ತಿಳಿಸಿದೆ ಎಂದು ವರದಿಯಾಗಿದೆ. ಐಸಿಸಿಯ ಈ ಎಚ್ಚರಿಕೆಗೆ ಕಾರಣವೂ ಇದ್ದು, ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಬಣ್ಣಿಸಿದೆ. ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಡ್ರೆಸ್ಸಿಂಗ್ ಕೋಣೆಯೊಳಗೆ ಯಾವುದೇ ರೀತಿಯ ವೀಡಿಯೊವನ್ನು ರೆಕಾರ್ಡ್ ಮಾಡುವುದು ಮತ್ತು ಅದನ್ನು ಪ್ರಸಾರ ಮಾಡುವುದು PMOA ಯ ಆರ್ಟಿಕಲ್ 2.2.11 ರ ನಿಯಮ ಉಲ್ಲಂಘನೆಯಾಗಿದೆ ಎಂದು ಐಸಿಸಿ ಆರೋಪಿಸಿದೆ. ಅಲ್ಲದೆ ಪಂದ್ಯದ ಸಮಯದಲ್ಲಿ ಆಡಿಯೋ ಹೊಂದಿರುವ ಯಾವುದೇ ವೀಡಿಯೊವನ್ನು ಪ್ರಸಾರ ಮಾಡಬಾರದು ಎಂದು ಐಸಿಸಿ ಈ ಹಿಂದೆಯೇ ಇಸಿಬಿಗೆ ಈ ನಿಯಮದ ಬಗ್ಗೆ ಎಚ್ಚರಿಕೆ ನೀಡಿತ್ತು ಎಂದು ಬಿಬಿಸಿ ವರದಿ ಮಾಡಿದೆ.

ತಮಾಷೆಯಾಗಿ ಪ್ರತಿಕ್ರಿಯಿಸಿದ ಸ್ಟೋಕ್ಸ್

ಏತನ್ಮಧ್ಯೆ, ಈ ಘಟನೆಯು ಇಂಗ್ಲೆಂಡ್‌ ಕ್ರಿಕೆಟ್‌ನಲ್ಲಿ ಹೊಸ ಕೋಲಾಹಲವನ್ನು ಹುಟ್ಟುಹಾಕಿದೆ. ಇಸಿಬಿ ಅಧಿಕಾರಿಗಳು ಅಥವಾ ತಂಡದ ನಿರ್ವಹಣೆಗೆ ನಿಯಮಗಳ ಬಗ್ಗೆ ತಿಳಿದಿಲ್ಲವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದೀಗ ಬೆನ್ ಸ್ಟೋಕ್ಸ್ ಕೂಡ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯನ್ನು ಹೊರಹಾಕಿದ್ದು,‘ಅವರನ್ನು ವಜಾಗೊಳಿಸಿ!’ ಎಂದು ಬರೆದು ಸುದ್ದಿಯನ್ನು ಮರು ಪೋಸ್ಟ್ ಮಾಡಿದ್ದಾರೆ. ಈ ಒಂದೇ ಪೋಸ್ಟ್‌ನೊಂದಿಗೆ, ಸ್ಟೋಕ್ಸ್ ಕೆಲವು ದಿನಗಳ ಹಿಂದೆ ತನ್ನನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎನ್ನುತ್ತಿದ್ದವರ ಮೇಲೆ ಟೀಕಾಪ್ರಹಾರ ನಡೆಸುತ್ತಿರುವಂತೆ ತೋರುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Thu, 9 July 26

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ