ಬೆನ್ ಸ್ಟೋಕ್ಸ್ ಔಟ್: ಇಂಗ್ಲೆಂಡ್ ತಂಡಕ್ಕೆ ಹೊಸ ನಾಯಕ ಆಯ್ಕೆ
England vs Sri Lanka: ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 21 ರಿಂದ ಶುರುವಾಗಲಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಓಲ್ಡ್ ಟ್ರಾಫರ್ಡ್ ಮೈದಾನ ಆತಿಥ್ಯವಹಿಸಲಿದ್ದು, 2ನೇ ಟೆಸ್ಟ್ ಪಂದ್ಯವು ಆಗಸ್ಟ್ 29 ರಂದು ಶುರುವಾಗಲಿದೆ. ಹಾಗೆಯೇ ಮೂರನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 6 ರಿಂದ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಹೊರಬಿದ್ದಿದ್ದಾರೆ. ದಿ ಹಂಡ್ರೆಡ್ ಲೀಗ್ ಟೂರ್ನಿಯಲ್ಲಿ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದ ಸ್ಟೋಕ್ಸ್ ಇದೀಗ ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮ್ಯಾಚೆಂಸ್ಟರ್ನ ಒಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ವಿರುದ್ಧದ ಪಂದ್ಯದಲ್ಲಿ ನಾರ್ಥನ್ ಸೂಪರ್ಚಾರ್ಜರ್ಸ್ ಪರ ಬೆನ್ ಸ್ಟೋಕ್ಸ್ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಟೋಕ್ಸ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಅಲ್ಲದೆ ಕುಸಿದು ಬಿದ್ದಿದ್ದ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.
ಇದೀಗ ಬೆನ್ ಸ್ಟೋಕ್ಸ್ ಅವರ ವೈದ್ಯಕೀಯ ವರದಿಗಳು ಬಂದಿದ್ದು, ಈ ವರದಿಯಲ್ಲಿ ಅವರಿಗೆ ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ತಂಡದ ನಾಯಕನ ಹೊರಗುಳಿದಿದ್ದಾರೆ.
ಹೊಸ ನಾಯಕ ಆಯ್ಕೆ:
ಬೆನ್ ಸ್ಟೋಕ್ಸ್ ಹೊರಗುಳಿದಿರುವ ಕಾರಣ ಇಂಗ್ಲೆಂಡ್ ತಂಡಕ್ಕೆ ನೂತನ ನಾಯಕನಾಗಿ ಒಲೀ ಪೋಪ್ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ 26 ವರ್ಷದ ಪೋಪ್ ಇದೇ ಮೊದಲ ಬಾರಿಗೆ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿರುವುದು ವಿಶೇಷ. ಈ ಮೂಲಕ ಚೊಚ್ಚಲ ಬಾರಿಗೆ ಆಂಗ್ಲ ಪಡೆಯನ್ನು ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್
ಇಂಗ್ಲೆಂಡ್ ಟೆಸ್ಟ್ ತಂಡ: ಒಲೀ ಪೋಪ್ (ನಾಯಕ), ಜೋ ರೂಟ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಡಾನ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ಜೇಮಿ ಸ್ಮಿತ್ (ವಿಕೆಟ್ ಕೀಪರ್), ಓಲಿ ಸ್ಟೋನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ಇಂಗ್ಲೆಂಡ್ vs ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಮೊದಲ ಟೆಸ್ಟ್: ಓಲ್ಡ್ ಟ್ರಾಫರ್ಡ್, ಆಗಸ್ಟ್ 21 ರಿಂದ 25
- ಎರಡನೇ ಟೆಸ್ಟ್: ಲಾರ್ಡ್ಸ್, ಆಗಸ್ಟ್ 29 ರಿಂದ ಸೆಪ್ಟೆಂಬರ್ 2
- ಮೂರನೇ ಟೆಸ್ಟ್: ಓವಲ್, ಸೆಪ್ಟೆಂಬರ್ 6 ರಿಂದ 10