IPL 2024: CSK ತಂಡದಿಂದ ಬೆನ್ ಸ್ಟೋಕ್ಸ್ ಔಟ್..!

| Updated By: ಝಾಹಿರ್ ಯೂಸುಫ್

Updated on: Nov 14, 2023 | 10:29 PM

IPL 2024: ಮುಂಬರುವ ಐಪಿಎಲ್​ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗಳಿಗೆ 100 ಕೋಟಿಯ ಪರ್ಸ್ ನೀಡಲಾಗುತ್ತಿದೆ. ಕಳೆದ ಬಾರಿಯ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು 95 ಕೋಟಿಯೊಂದಿಗೆ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ 5 ಕೋಟಿ ರೂ. ಅನ್ನು ಹೆಚ್ಚಿಸಲಾಗಿದ್ದು, ಅದರಂತೆ 100 ಕೋಟಿಯೊಳಗೆ ಆಟಗಾರರನ್ನು ಖರೀದಿಸಬಹುದು.

IPL 2024: CSK ತಂಡದಿಂದ ಬೆನ್ ಸ್ಟೋಕ್ಸ್ ಔಟ್..!
Ben Stokes
Follow us on

ಐಪಿಎಲ್ 2024 ರ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಸ್ಟಾರ್​ ಆಲ್​ರೌಂಡರ್ ಆಟಗಾರ ಬೆನ್ ಸ್ಟೋಕ್ಸ್​ ಅವರನ್ನು ಬಿಡುಗಡೆ ಮಾಡಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ. ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಫ್ರಾಂಚೈಸಿಯು ಇಂಗ್ಲೆಂಡ್ ಆಟಗಾರನನ್ನು ಬರೋಬ್ಬರಿ 16.25 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಸ್ಟೋಕ್ಸ್ ಆಡಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ.

ಈ ಎರಡು ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 15 ರನ್. ಹಾಗೆಯೇ 1 ಓವರ್ ಮಾತ್ರ ಬೌಲಿಂಗ್ ಮಾಡಿದ್ದರು. ಹೀಗಾಗಿ ಈ ಬಾರಿಯ ಐಪಿಎಲ್​ ಹರಾಜಿಗೂ ಮುನ್ನ ಸ್ಟೋಕ್ಸ್ ಅವರನ್ನು ರಿಲೀಸ್ ಮಾಡಲು ಸಿಎಸ್​ಕೆ ಫ್ರಾಂಚೈಸಿ ನಿರ್ಧರಿಸಿದೆ.
ಬೆನ್ ಸ್ಟೋಕ್ಸ್ ಅವರನ್ನು ಬಿಡುಗಡೆ ಮಾಡುವುದರಿಂದ ಸಿಎಸ್​ಕೆ ಫ್ರಾಂಚೈಸಿಯ ಬಿಡ್ಡಿಂಗ್ ಖಾತೆಗೆ 16.25 ಕೋಟಿ ರೂ. ಸೇರ್ಪಡೆಯಾಗಲಿದೆ. ಈ ಮೊತ್ತದಲ್ಲಿ ಸಿಎಸ್​ಕೆ ಬಿಗ್ ಬಿಡ್ಡಿಂಗ್ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಐಪಿಎಲ್​ನಲ್ಲಿ ರೈಸಿಂಗ್ ಪುಣೆ ಸೂಪರ್​ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಬೆನ್ ಸ್ಟೋಕ್ಸ್​ ಇದುವರೆಗೆ ಒಟ್ಟು 45 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 935 ರನ್ ಕಲೆಹಾಕಿದರೆ, 28 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ತಂಡ​:  ಎಂಎಸ್​ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಅಜಿಂಕ್ಯ ರಹಾನೆ.

ಇದನ್ನೂ ಓದಿ: ಟಾಸ್ ವಿಷಯದಲ್ಲಿ ನಮಗೆ ಚಿಂತೆಯಿಲ್ಲ: ರೋಹಿತ್ ಶರ್ಮಾ

IPL 2024 ಹರಾಜು ಯಾವಾಗ?

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್​ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

100 ಕೋಟಿ ಪರ್ಸ್​:

ಮುಂಬರುವ ಐಪಿಎಲ್​ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗಳಿಗೆ 100 ಕೋಟಿಯ ಪರ್ಸ್ ನೀಡಲಾಗುತ್ತಿದೆ. ಕಳೆದ ಬಾರಿಯ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು 95 ಕೋಟಿಯೊಂದಿಗೆ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ 5 ಕೋಟಿ ರೂ. ಅನ್ನು ಹೆಚ್ಚಿಸಲಾಗಿದ್ದು, ಅದರಂತೆ 100 ಕೋಟಿಯೊಳಗೆ ಆಟಗಾರರನ್ನು ಖರೀದಿಸಬಹುದು.