AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಟಿ20 ವಿಶ್ವಕಪ್ ಫೈನಲ್; ಮದ್ಯಪ್ರಿಯರಿಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸ್..!

T20 World Cup 2022: ಭಾನುವಾರ ಟಿ20 ವಿಶ್ವಕಪ್ ಫೈನಲ್ ನಡೆಯಲಿದ್ದು, ಅಂದು ರಜಾ ದಿನವಾಗಿರುವುದರಿಂದ ಬೆಂಗಳೂರಿನ ಬಹುತೇಕ ಕೆಫೆಗಳು, ಬಾರ್‌ಗಳು ಮತ್ತು ಪಬ್‌ಗಳು ಪಂದ್ಯದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲು ತಯಾರಿ ನಡೆಸಿವೆ.

ಭಾನುವಾರ ಟಿ20 ವಿಶ್ವಕಪ್ ಫೈನಲ್; ಮದ್ಯಪ್ರಿಯರಿಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸ್..!
ಪ್ರಾತಿನಿಧಿಕ ಚಿತ್ರ
TV9 Web
| Updated By: ಪೃಥ್ವಿಶಂಕರ|

Updated on: Nov 07, 2022 | 3:28 PM

Share

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ (T20 World Cup 2022) ರೋಚಕತೆ ತುತ್ತ ತುದಿ ತಲುಪಿದೆ. ಅದರಲ್ಲೂ ರೋಹಿತ್ ಪಡೆ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿರುವುದು ಟೀಂ ಇಂಡಿಯಾದ (Team India) ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಇತ್ತ ಗ್ರೂಪ್ ಎರಡಲ್ಲಿ ಟೇಬಲ್ ಟಾಪರ್ ಆಗಿರುವ ರೋಹಿತ್ ಪಡೆ ಟಿ20 ವಿಶ್ವಕಪ್ ನಿಯಮಗಳ ಪ್ರಕಾರ ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಗಳಿಸಿರುವ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಹಿಂದೆ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿರುವ ಟೀಂ ಇಂಡಿಯಾ ಈ ಪಂದ್ಯದಲ್ಲೂ ಆಂಗ್ಲರನ್ನು ಮಣಿಸಿ ಫೈನಲ್​ಗೆ ಲಗ್ಗೆ ಇಡಲಿದೆ ಎಂಬುದು ಅಭಿಮಾನಿಗಳ ಆಶಯವಾಗಿದೆ. ಹೀಗಾಗಿ ನ.13 ರ ಭಾನುವಾರದಂದು ನಡೆಯಲಿರುವ ವಿಶ್ವಕಪ್​ ಫೈನಲ್​ಗಾಗಿ ವಿಶ್ವದೆಲ್ಲೆಡೆ ಅಭಿಮಾನಿಗಳು ಕಾಯುತ್ತ ಕುಳಿತಿದ್ದಾರೆ. ರಜಾ ದಿನದಂದು ವಿಶ್ವಕಪ್‌ ಫೈನಲ್ ನೋಡುತ್ತ ಮೋಜು ಮಸ್ತಿ ಮಾಡಬೇಕೆಂದುಕೊಂಡಿದ್ದ ಬೆಂಗಳೂರಿಗರಿಗೆ, ನಗರದ ಪೊಲೀಸರು (Bengaluru City Police) ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಈಗಾಗಲೇ ಭಾರತ ಸೆಮಿಫೈನಲ್​ಗೆ ತಲುಪಿರುವುದರಿಂದ ಅಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಫೈನಲ್​ಗೆ ಲಗ್ಗೆ ಇಡುತ್ತದೆ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ಆಶಯವಾಗಿದೆ. ಹೀಗಾಗಿ ಭಾನುವಾರ ಟಿ20 ವಿಶ್ವಕಪ್ ಫೈನಲ್ ನಡೆಯಲಿದ್ದು, ಅಂದು ರಜಾ ದಿನವಾಗಿರುವುದರಿಂದ ಬೆಂಗಳೂರಿನ ಬಹುತೇಕ ಕೆಫೆಗಳು, ಬಾರ್‌ಗಳು ಮತ್ತು ಪಬ್‌ಗಳು ಪಂದ್ಯದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲು ತಯಾರಿ ನಡೆಸಿವೆ. ಹೀಗಾಗಿ ಪಂದ್ಯ ವೀಕ್ಷಣೆಯ ಜೊತೆಗೆ ಅತಿಯಾಗಿ ಮದ್ಯಸೇವಿಸಿ, ಅನಂತರ ಮನೆಗೆ ತೆರಳಲು ರಸ್ತೆಗಿಳಿಯುವ ವಾಹನ ಸವಾರರಿಗೆ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಉಡುಪಿ ಹೋಟೆಲ್ ಮಾಣಿಯೊಬ್ಬರು ಅಂತಾರಾಷ್ಟ್ರೀಯ ಮ್ಯಾರಥಾನ್ ಓಟಗಾರರಾದ ಕಥೆಯಿದು..!

ವಾಹನ ಸವಾರರು ಮದ್ಯಪಾನ ಮಾಡಿ

ಬೆಂಗಳೂರು ಪೊಲೀಸರು ತಮ್ಮ ಅಧಿಕೃತ ಟ್ವಿಟರ್​ ಹ್ಯಾಂಡಲ್‌ನಲ್ಲಿ ಮನವಿಯೊಂದನ್ನು ಮಾಡಿದ್ದು, ಅದರಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಂದಿನ ಭಾನುವಾರ ನಡೆಯಲಿದೆ. ಹೀಗಾಗಿ ಆ ದಿನ ವಾಹನ ಸವಾರರು ಮದ್ಯಪಾನ ಮಾಡಿ, ವಾಹನ ಚಾಲನೆ ಮಾಡಬೇಡಿ. ಮುಂದಿನ ಭಾನುವಾರವಂತಲ್ಲ, ಯಾವ ದಿನವೂ ಕುಡಿದು ವಾಹನ ಚಲಾಯಿಸಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಬೆಂಗಳೂರು ಪೊಲೀಸರ ಈ ಟ್ವೀಟ್​ಗೆ ರೀ ಟ್ವೀಟ್ ಮಾಡಿರುವ ನೆಟ್ಟಿಗರೊಬ್ಬರು. ಚಿಂತಿಸಬೇಡಿ ಸರ್. ಕುಡಿದರೂ, ಕುಡಿಯದಿದ್ದರೂ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುವವರು ಎಂದಿಗೂ ಸುರಕ್ಷಿತವಾಗಿರುವುದಿಲ್ಲ. ದಂಡವನ್ನು ವಸೂಲಿ ಮಾಡುವ ಮೊದಲು ಗುಂಡಿಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ತಿಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಇನ್ನೂ ಕೆಲವರು, ಬೆಂಗಳೂರು ಪೊಲೀಸ್ ಆಯುಕ್ತರು ಯಾವುದೇ ನಿಯಮಗಳನ್ನು ಉಲ್ಲಂಘಿಸದ ಹೊರತು ವಾಹನಗಳನ್ನು ನಿಲ್ಲಿಸಬೇಡಿ ಎಂದು ಪೊಲೀಸರಿಗೆ ಸೂಚಿಸಿದ ನಂತರವೂ ನಿಯಮಿತ ತಪಾಸಣೆಗಾಗಿ ವಾಹನಗಳನ್ನು ಅನಗತ್ಯವಾಗಿ ನಿಲ್ಲಿಸಲಾಗುತ್ತಿದೆ ಎಂದು ಪೊಲೀಸರನ್ನು ದೂರಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್