Virat Kohli: ಕಿಂಗ್ ಕೊಹ್ಲಿ ಈಸ್ ಬ್ಯಾಕ್: ಎಬಿಡಿ ಎಚ್ಚರಿಕೆ..!

India vs South Africa: ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗಳಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿಡಿ ತಿಳಿಸಿದ್ದಾರೆ.

Virat Kohli: ಕಿಂಗ್ ಕೊಹ್ಲಿ ಈಸ್ ಬ್ಯಾಕ್: ಎಬಿಡಿ ಎಚ್ಚರಿಕೆ..!
Virat Kohli-AB de Villiers
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 04, 2023 | 4:16 PM

ಭಾರತ-ಸೌತ್ ಆಫ್ರಿಕಾ ನಡುವಣ ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಏಕದಿನ ಸರಣಿ ನಡೆಯಲಿದೆ. ಆದರೆ ಈ ಎರಡು ಸರಣಿಗಳಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಡಿಸೆಂಬರ್ 26 ರಿಂದ ಶುರುವಾಗಲಿರುವ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಇದೀಗ ಸೌತ್ ಆಫ್ರಿಕಾ ತಂಡಕ್ಕೆ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗಳಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿಡಿ ತಿಳಿಸಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ಆಕ್ರಮಣಕಾರಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಏಕೆಂದರೆ ಅವರು ವಿಶ್ವ ದರ್ಜೆಯ ಆಟಗಾರ. ಹೀಗಾಗಿ ಸೌತ್ ಆಫ್ರಿಕಾ ತಂಡವು ಕಿಂಗ್ ಕೊಹ್ಲಿ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ.

ಇತ್ತ ದೀರ್ಘ ವಿಶ್ರಾಂತಿಯ ಬಳಿಕ ಟೆಸ್ಟ್ ಕ್ರಿಕೆಟ್​ ಮೂಲಕ ಮರಳಲು ನಿರ್ಧರಿಸಿರುವ ವಿರಾಟ್ ಕೊಹ್ಲಿಯಿಂದ ಭರ್ಜರಿ ಪ್ರದರ್ಶನವನ್ನಂತು ನಿರೀಕ್ಷಿಸಬಹುದು. ಇದೇ ಕಾರಣದಿಂದಾಗಿ ಎಬಿಡಿ ಕೂಡ ಸೌತ್ ಆಫ್ರಿಕಾ ಆಟಗಾರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ:

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಇದನ್ನೂ ಓದಿ: ಮಿಂಚಿದ ರುತುರಾಜ್, ಆದ್ರೂ ಕಿಂಗ್ ಕೊಹ್ಲಿ ದಾಖಲೆ ಸೇಫ್

ಭಾರತ – ಸೌತ್ ಆಫ್ರಿಕಾ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 10- ಮೊದಲ ಟಿ20 ಪಂದ್ಯ (ಡರ್ಬನ್)
  2. ಡಿಸೆಂಬರ್ 12- ಎರಡನೇ ಟಿ20 ಪಂದ್ಯ (ಗೆಬರ್ಹ)
  3. ಡಿಸೆಂಬರ್ 14- ಮೂರನೇ ಟಿ20 ಪಂದ್ಯ (ಜೋಹಾನ್ಸ್​ಬರ್ಗ್​)

—————————————————————–

  1. ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  2. ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  3. ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

——————————————————————-

  1. ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  2. ಜನವರಿ 3 ರಿಂದ- ಎರಡನೇ ಟೆಸ್ಟ್  ಪಂದ್ಯ (ಕೇಪ್​ಟೌನ್)

Published On - 4:14 pm, Mon, 4 December 23

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು