ಭಾರತ-ಸೌತ್ ಆಫ್ರಿಕಾ ನಡುವಣ ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಏಕದಿನ ಸರಣಿ ನಡೆಯಲಿದೆ. ಆದರೆ ಈ ಎರಡು ಸರಣಿಗಳಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಡಿಸೆಂಬರ್ 26 ರಿಂದ ಶುರುವಾಗಲಿರುವ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಇದೀಗ ಸೌತ್ ಆಫ್ರಿಕಾ ತಂಡಕ್ಕೆ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್ಗಳ ಸರಣಿಗಳಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಆರ್ಸಿಬಿ ತಂಡದ ಮಾಜಿ ಆಟಗಾರ ಎಬಿಡಿ ತಿಳಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ಆಕ್ರಮಣಕಾರಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಏಕೆಂದರೆ ಅವರು ವಿಶ್ವ ದರ್ಜೆಯ ಆಟಗಾರ. ಹೀಗಾಗಿ ಸೌತ್ ಆಫ್ರಿಕಾ ತಂಡವು ಕಿಂಗ್ ಕೊಹ್ಲಿ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ.
ಇತ್ತ ದೀರ್ಘ ವಿಶ್ರಾಂತಿಯ ಬಳಿಕ ಟೆಸ್ಟ್ ಕ್ರಿಕೆಟ್ ಮೂಲಕ ಮರಳಲು ನಿರ್ಧರಿಸಿರುವ ವಿರಾಟ್ ಕೊಹ್ಲಿಯಿಂದ ಭರ್ಜರಿ ಪ್ರದರ್ಶನವನ್ನಂತು ನಿರೀಕ್ಷಿಸಬಹುದು. ಇದೇ ಕಾರಣದಿಂದಾಗಿ ಎಬಿಡಿ ಕೂಡ ಸೌತ್ ಆಫ್ರಿಕಾ ಆಟಗಾರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ:
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.
ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.
ಇದನ್ನೂ ಓದಿ: ಮಿಂಚಿದ ರುತುರಾಜ್, ಆದ್ರೂ ಕಿಂಗ್ ಕೊಹ್ಲಿ ದಾಖಲೆ ಸೇಫ್
—————————————————————–
——————————————————————-
Published On - 4:14 pm, Mon, 4 December 23